Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:15 - ಪರಿಶುದ್ದ ಬೈಬಲ್‌

15 ಆ ನಾಯಕರುಗಳು ಎದ್ದು ಸೆರೆಯವರಿಗೆ ಸಹಾಯ ಮಾಡಿದರು. ಇಸ್ರೇಲ್ ಸೈನಿಕರು ಸೂರೆಮಾಡಿದ ಬಟ್ಟೆಬರೆಗಳನ್ನು ಈ ನಾಯಕರು ಪಡೆದುಕೊಂಡು ಬೆತ್ತಲೆಯಾಗಿದ್ದ ಸೆರೆಯವರಿಗೆ ಕೊಟ್ಟರು. ಅವರ ಕಾಲಿಗೆ ಕೆರಗಳನ್ನು ಕೊಟ್ಟು, ಊಟೋಪಚಾರಗಳಿಂದ ಸತ್ಕರಿಸಿದರು. ಗಾಯಗೊಂಡವರಿಗೆ ಎಣ್ಣೆ ಹಚ್ಚಿ ಅವರಲ್ಲಿದ್ದ ಬಲಹೀನರನ್ನು ಕತ್ತೆಯ ಮೇಲೆ ಕುಳ್ಳಿರಿಸಿ ಜೆರಿಕೊವಿನಲ್ಲಿದ್ದ ಅವರವರ ಮನೆಗಳಿಗೆ ಕರೆದುಕೊಂಡು ಹೋದರು. ಜೆರಿಕೊವಿಗೆ “ಖರ್ಜೂರ ಮರಗಳ ಊರು” ಎಂಬ ಹೆಸರಿದೆ. ಅನಂತರ ಆ ನಾಲ್ಕು ಮಂದಿ ನಾಯಕರು ಸಮಾರ್ಯದಲ್ಲಿದ್ದ ತಮ್ಮ ಮನೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಹೆಸರು ಕೂಗಿದ ಪುರುಷರು ಎದ್ದು ಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವುದಕ್ಕೆ ಬಟ್ಟೆಗಳನ್ನೂ, ಕಾಲಿಗೆ ಚಪ್ಪಲಿಗಳನ್ನು ಕೊಟ್ಟರು. ಎಲ್ಲರಿಗೂ ಅನ್ನಪಾನಗಳನ್ನಿಟ್ಟು ತೈಲಹಚ್ಚಿದರು. ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋಗಿ, ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರ್ಯಕ್ಕೆ ಹಿಂತಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಮೇಲೆ ಹೇಳಿದ ಪುರುಷರು ಎದ್ದುಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಬಂದ ಬಟ್ಟೆಗಳನ್ನೂ, ಕಾಲಿಗೆ ಕೆರಗಳನ್ನೂ ಕೊಟ್ಟರು; ಅನ್ನಪಾನಗಳನ್ನಿತ್ತು, ತೈಲಹಚ್ಚಿದರು; ಬಳಲಿಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಜೆರಿಕೋ ಎಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋದರು; ಅಲ್ಲಿ ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರಿಯಕ್ಕೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಮೇಲೆ ಹೇಳಿದ ಪುರುಷರು ಎದ್ದುಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವದಕ್ಕೆ ಬಟ್ಟೆಗಳನ್ನೂ ಕಾಲಿಗೆ ಕೆರಗಳನ್ನೂ ಕೊಟ್ಟು ಅನ್ನಪಾನಗಳನ್ನಿತ್ತು ತೈಲಹಚ್ಚಿ ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರಕೊಂಡುಹೋಗಿ ಅವರ ಬಂಧುಗಳ ಹತ್ತಿರ ಬಿಟ್ಟು ಸಮಾರ್ಯಕ್ಕೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದವರು ಎದ್ದು ಸೆರೆಯವರನ್ನು ತೆಗೆದುಕೊಂಡು, ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ, ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕೊಟ್ಟು, ಅವರ ತಲೆಗಳಿಗೆ ಎಣ್ಣೆಯನ್ನು ಹಚ್ಚಿ, ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ, ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ತೆಗೆದುಕೊಂಡು ಬಂದರು. ಆಗ ಅವರು ಸಮಾರ್ಯಕ್ಕೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:15
21 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ ನೆಗೆವ್ ಮತ್ತು ಚೋಗರೂರಿನಿಂದ ಖರ್ಜೂರದ ಮರಗಳ ಪಟ್ಟಣವಾದ ಜೆರಿಕೊ ಪಟ್ಟಣದವರೆಗಿರುವ ಕಣಿವೆಯನ್ನು ತೋರಿಸಿದನು.


ಎಲೀಷನು, “ಬೇಡ, ಅವರನ್ನು ಕೊಲ್ಲಬೇಡ. ನೀನು ಯುದ್ಧದಲ್ಲಿ, ನಿನ್ನ ಖಡ್ಗದಿಂದ, ನಿನ್ನ ಬಿಲ್ಲುಬಾಣಗಳಿಂದ ಸೆರೆಹಿಡಿದ ಜನರನ್ನು ಕೊಲ್ಲಬಾರದು, ಅರಾಮ್ಯರ ಸೇನೆಗೆ ಸ್ವಲ್ಪ ನೀರನ್ನು ಮತ್ತು ರೊಟ್ಟಿಗಳನ್ನು ಕೊಡು. ಅವರು ತಿಂದು, ನೀರು ಕುಡಿಯಲಿ. ನಂತರ ಅವರು ತಮ್ಮ ಮನೆಗೆ, ಅವರ ಒಡೆಯನ ಬಳಿಗೆ ಹೋಗಲಿ” ಎಂದು ಉತ್ತರಿಸಿದನು.


ಕೇನ್ಯರು (ಕೇನ್ಯರು ಮೋಶೆಯ ಮಾವನ ಗೋತ್ರದವರಾಗಿದ್ದರು.) ಖರ್ಜೂರ ನಗರವನ್ನು (ಜೆರಿಕೊವನ್ನು) ಬಿಟ್ಟು ಯೆಹೂದ್ಯರ ಸಂಗಡ ಹೋದರು. ಅವರು ನೆಗೆವಿನಲ್ಲಿ ಅರಾದ್ ನಗರದ ಹತ್ತಿರವಿದ್ದ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸ ಮಾಡಿದರು.


“ನನ್ನ ಮಾತುಗಳನ್ನು ಆಲಿಸುತ್ತಿರುವ ನಿಮಗೆ ನಾನು ಹೇಳುವುದೇನೆಂದರೆ: ನಿಮ್ಮ ವೈರಿಗಳನ್ನು ಪ್ರೀತಿಸಿರಿ. ನಿಮ್ಮನ್ನು ದ್ವೇಷಿಸುವವರಿಗೆ ಒಳ್ಳೆಯದನ್ನು ಮಾಡಿರಿ.


ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”


ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದವಳೆಂದೂ ಹೆಸರನ್ನು ಪಡೆದಿರಬೇಕು. ಅಂದರೆ, ಅವಳು ತನ್ನ ಮಕ್ಕಳನ್ನು ಸಾಕಿಸಲಹಿದವಳೂ, ಅತಿಥಿಗಳನ್ನು ಸತ್ಕರಿಸಿದವಳೂ, ದೇವಜನರ ಪಾದಗಳನ್ನು ತೊಳೆದವಳೂ, ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಿದವಳೂ ಮತ್ತು ತನ್ನಿಂದಾದಷ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದವಳೂ ಆಗಿರಬೇಕು.


ಆದ್ದರಿಂದ ನಂಬಿಕೆಯಲ್ಲಿ ಬಲಹೀನವಾಗಿರುವವರ ಬಲಹೀನತೆಗಳನ್ನು ನಾವು ಸಹಿಸಿಕೊಳ್ಳಬೇಕು. ನಾವು ಕೇವಲ ನಮ್ಮ ಹಿತವನ್ನು ಮಾತ್ರ ನೋಡಿಕೊಳ್ಳಬಾರದು.


ಪೇತ್ರನು ಸಿದ್ಧನಾಗಿ ಅವರೊಂದಿಗೆ ಹೋದನು. ಅವನು ಅಲ್ಲಿಗೆ ತಲುಪಿದಾಗ, ಅವರು ಅವನನ್ನು ಮೇಲ್ಮಾಳಿಗೆಯ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರೆಲ್ಲ ಅಳುತ್ತಾ ಪೇತ್ರನನ್ನು ಸುತ್ತುವರಿದರು. ದೊರ್ಕಳು ಜೀವಂತವಾಗಿದ್ದಾಗ ತಮಗಾಗಿ ತಯಾರಿಸಿ ಕೊಟ್ಟ ಮೇಲಂಗಿಗಳನ್ನು ಮತ್ತು ಬಟ್ಟೆಗಳನ್ನು ಅವರು ಪೇತ್ರನಿಗೆ ತೋರಿಸಿದರು.


ಅದನ್ನು ನೋಡಲು ಜನರೆಲ್ಲರೂ ಯೇಸುವಿದ್ದಲ್ಲಿಗೆ ಬಂದರು. ಆ ಮನುಷ್ಯನು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿದ್ದುದನ್ನು ಅವರು ನೋಡಿದರು. ಅವನು ಬಟ್ಟೆಗಳನ್ನು ಹಾಕಿಕೊಂಡಿದ್ದನು; ಸ್ವಸ್ಥಬುದ್ಧಿಯುಳ್ಳವನಾಗಿದ್ದನು. ದೆವ್ವಗಳು ಅವನನ್ನು ಬಿಟ್ಟುಹೋಗಿದ್ದವು. ಜನರಿಗೆ ಭಯವಾಯಿತು.


ಯೇಸು ದೋಣಿಯಿಂದ ಇಳಿದಾಗ, ಆ ಪಟ್ಟಣದ ಮನುಷ್ಯನೊಬ್ಬನು ಯೇಸುವಿನ ಬಳಿಗೆ ಬಂದನು. ಈ ಮನುಷ್ಯನಿಗೆ ದೆವ್ವ ಹಿಡಿದಿತ್ತು. ಬಹಳ ಕಾಲದಿಂದ ಅವನು ಬಟ್ಟೆಯನ್ನೇ ಹಾಕಿಕೊಂಡಿರಲಿಲ್ಲ. ಅವನು ಸಮಾಧಿಯ ಗವಿಗಳಲ್ಲಿ ವಾಸಿಸುತ್ತಿದ್ದನು.


ಆಗ ಇಸ್ರೇಲರ ಸೈನಿಕರು ತಮ್ಮ ಮನೆಗೆ ಯುದ್ಧದಿಂದ ಹಿಂತಿರುಗುವುದನ್ನು ಎಫ್ರಾಯೀಮಿನ ಕೆಲವು ನಾಯಕರು ನೋಡಿದರು. ಆ ನಾಯಕರು ಅವರನ್ನು ಎಚ್ಚರಿಸಿದರು. ಆ ನಾಯಕರುಗಳು ಯಾರೆಂದರೆ: ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರೆಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ ಮತ್ತು ಹೆದ್ಲ್ಯೆಯನ ಮಗನಾದ ಅಮಾಸ.


ಆಗ ಆ ಸೈನಿಕರು ತಮ್ಮ ಬಳಿಯಲ್ಲಿದ್ದ ಸೆರೆಯವರನ್ನು, ಬೆಲೆಬಾಳುವ ವಸ್ತುಗಳನ್ನು ಆ ನಾಯಕರ ಮತ್ತು ಇಸ್ರೇಲರ ಕೈಯಲ್ಲಿ ಕೊಟ್ಟುಬಿಟ್ಟರು.


ಜೆರಿಕೊ ಊರಿನವರು 345


ಆಗ ಶ್ರೀಮಂತರೂ ಅಧಿಕಾರಿಗಳೂ, “ನಾವು ಹಿಂದಕ್ಕೆ ಕೊಡುತ್ತೇವೆ. ಅವರಿಂದ ನಾವು ಹೆಚ್ಚೇನೂ ಕೇಳುವುದಿಲ್ಲ. ನೆಹೆಮೀಯನೇ, ನೀನು ಹೇಳಿದಂತೆಯೇ ನಾವು ಮಾಡುತ್ತೇವೆ” ಎಂದರು. ಆಗ ನಾನು ದೇವರ ಮುಂದೆ ಅವರಿಂದ ಪ್ರತಿಜ್ಞೆ ಮಾಡಿಸಲು ಯಾಜಕರನ್ನು ಕರೆದೆನು.


ಇಸ್ರೇಲಿನ ರಾಜನು ಅರಾಮ್ಯರ ಸೇನೆಗೆ ಆಹಾರವನ್ನು ಹೇರಳವಾಗಿ ಸಿದ್ಧಪಡಿಸಿದನು. ಅರಾಮ್ಯರ ಸೇನೆಯು ಊಟಮಾಡಿ, ನೀರನ್ನು ಕುಡಿದರು. ನಂತರ ಇಸ್ರೇಲಿನ ರಾಜನು ಅರಾಮ್ಯರ ಸೇನೆಗೆ ತಮ್ಮ ಒಡೆಯನ ಬಳಿಗೆ ಹೋಗಲು ಆಜ್ಞಾಪಿಸಿದನು. ಅಂದಿನಿಂದ ಇಸ್ರೇಲ್ ದೇಶದ ಮೇಲೆ ಧಾಳಿಮಾಡಲು ಯಾವ ಸೈನಿಕರನ್ನೂ ಅರಾಮ್ಯರು ಕಳುಹಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು