Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:16 - ಪರಿಶುದ್ದ ಬೈಬಲ್‌

16-17 ಅದೇ ಸಮಯದಲ್ಲಿ ಎದೋಮ್ಯರು ಬಂದು ಯೆಹೂದ ಜನರ ಮೇಲೆ ಧಾಳಿಮಾಡಿ ಅವರನ್ನು ಸೋಲಿಸಿದರು. ಯೆಹೂದ ಜನರನ್ನು ಸೆರೆಹಿಡಿದು ತಮ್ಮ ದೇಶಕ್ಕೊಯ್ದರು. ಆಗ ಅರಸನಾದ ಆಹಾಜನು ಅಶ್ಶೂರದ ಅರಸನ ಸಹಾಯ ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯ ಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆ ಕಾಲದಲ್ಲಿ ಅರಸ ಅಹಾಜನು ತನಗೆ ಸಹಾಯ ಮಾಡಬೇಕೆಂದು ಅಸ್ಸೀರಿಯದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅದೇ ಕಾಲದಲ್ಲಿ ಅರಸನಾದ ಆಹಾಜನು ಅಸ್ಸೀರಿಯದ ಅರಸರ ಬಳಿಗೆ ಕಳುಹಿಸಿ ಸಹಾಯ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:16
8 ತಿಳಿವುಗಳ ಹೋಲಿಕೆ  

“ಆದರೆ ನೀವು ಯೆಹೋವನಿಗೆ ಭಯಪಡುವವರಾಗಿರಬೇಕು. ಯಾಕೆಂದರೆ ಆತನು ನಿಮಗೆ ಸಂಕಟದ ಕಾಲವನ್ನು ತಂದೊಡ್ಡುವನು. ಅದು ಎಫ್ರಾಯೀಮ್ ಯೆಹೂದದಿಂದ ಅಗಲಿಹೋದ ಸಮಯದಲ್ಲಾದ ಸಂಕಟದಂತಿರುವುದು. ಆ ಸಂಕಟವು ನಿಮ್ಮ ಜನಗಳಿಗೂ ನಿಮ್ಮ ಪೂರ್ವಿಕರ ಕುಟುಂಬಕ್ಕೂ ಬರುವದು. ದೇವರು ಏನು ಮಾಡುವನು? ಆತನು ಅಶ್ಶೂರದ ರಾಜನನ್ನು ನಿಮಗೆ ವಿರುದ್ಧವಾಗಿ ಯುದ್ಧಕ್ಕೆ ಬರಮಾಡುವನು.


ನಿನ್ನ ವಿಚಾರಗಳನ್ನು ಬದಲಾಯಿಸುವದು ನಿನಗೆ ಸುಲಭ. ಅಸ್ಸೀರಿಯಾ ನಿನ್ನನ್ನು ನಿರಾಶೆಗೊಳಿಸಿತು. ಆಗ ನೀನು ಅಸ್ಸೀರಿಯರನ್ನು ಬಿಟ್ಟು ಈಜಿಪ್ಟಿನ ಸಹಾಯವನ್ನು ಕೇಳಿದೆ, ಈಜಿಪ್ಟ್ ನಿನ್ನನ್ನು ನಿರಾಶೆಗೊಳಿಸುತ್ತದೆ.


ಆ ಬಳಿಕ ನೀನು ಅಶ್ಶೂರದವರೊಂದಿಗೆ ಸಂಭೋಗಿಸಲು ಹೋದಿ. ನೀನು ತೃಪ್ತಿಗೊಳ್ಳುವಷ್ಟು ಆನಂದ ಸಿಗಲಿಲ್ಲ. ನೀನೆಂದೂ ತೃಪ್ತಿಗೊಂಡವಳಲ್ಲ.


ಆಗ ಯಾಕೋಬನ ಮನೆತನದವರು, ಇಸ್ರೇಲರಲ್ಲಿ ಅಳಿದುಳಿದವರು, ತಮ್ಮನ್ನು ಹೊಡೆಯುವವರನ್ನು ಆಧಾರಮಾಡಿಕೊಳ್ಳದೆ ಇಸ್ರೇಲಿನ ಅತೀ ಪರಿಶುದ್ಧನಾದ ಯೆಹೋವನನ್ನೇ ಆಧಾರಮಾಡಿಕೊಳ್ಳುವರು.


ಯೆಹೂದದ ಜನರೇ, ಅದರ ಬಗ್ಗೆ ಯೋಚಿಸಿರಿ. ಇದರಿಂದ ನಿಮಗೆ ಈಜಿಪ್ಟಿಗೆ ಹೋಗಲು ಸಹಾಯವಾಯಿತೇ? ನೈಲ್ ನದಿಯ ನೀರನ್ನು ಕುಡಿಯಲು ಈಜಿಪ್ಟಿಗೆ ಹೋಗುವುದೇಕೆ? ಅವರ ನದಿಯ ನೀರನ್ನು ಕುಡಿಯಲು ಅಸ್ಸೀರಿಯಕ್ಕೆ ಹೋಗುವುದೇಕೆ?


ಎಫ್ರಾಯೀಮು ತನ್ನ ವ್ಯಾಧಿಯನ್ನು ನೋಡಿದನು. ಯೆಹೂದವು ತನ್ನ ಗಾಯಗಳನ್ನು ನೋಡಿದನು. ಆಮೇಲೆ ಸಹಾಯಕ್ಕಾಗಿ ಅಶ್ಶೂರ್ಯರ ಬಳಿಗೆ ಹೋದರು. ಆ ಮಹಾ ಅರಸನ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಆದರೆ ಆ ಅರಸನು ನಿಮ್ಮನ್ನು ಗುಣಮಾಡನು. ನಿಮ್ಮ ಗಾಯಗಳನ್ನು ಗುಣಮಾಡಲು ಸಾಧ್ಯವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು