Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:22 - ಪರಿಶುದ್ದ ಬೈಬಲ್‌

22 ಆಹಾಜನಿಗೆ ಸಂಕಟ ಬಂದಾಗಲೂ ಇನ್ನೂ ಹೆಚ್ಚಾಗಿ ಪಾಪ ಮಾಡುತ್ತಾ ಯೆಹೋವನಿಗೆ ಇನ್ನೂ ಹೆಚ್ಚಾಗಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಕಷ್ಟಬಂದಾಗ ಅರಸ ಅಹಾಜನು ಸರ್ವೇಶ್ವರನಿಗೆ ಮತ್ತಷ್ಟು ದ್ರೋಹಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದಲ್ಲದೆ ಈ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಇನ್ನೂ ಅಧಿಕವಾಗಿ ಯೆಹೋವ ದೇವರಿಗೆ ಅಪನಂಬಿಗಸ್ತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:22
10 ತಿಳಿವುಗಳ ಹೋಲಿಕೆ  

ನಾನು ನಿಮ್ಮನ್ನು ಯಾಕೆ ಶಿಕ್ಷಿಸುತ್ತಲೇ ಇರಬೇಕು? ನಾನು ನಿಮ್ಮನ್ನು ಶಿಕ್ಷಿಸಿದೆನು, ಆದರೆ ನೀವು ಬದಲಾಗಲಿಲ್ಲ. ನೀವು ನನಗೆ ವಿರುದ್ಧವಾಗಿ ಏಳುತ್ತಲೇ ಇದ್ದೀರಿ. ಈಗ ಪ್ರತಿಯೊಂದು ತಲೆಯೂ ಪ್ರತಿಯೊಂದು ಹೃದಯವೂ ರೋಗಕ್ಕೆ ಬಲಿಯಾಗಿದೆ.


ಜನರು ತಮ್ಮ ದೋಷವನ್ನು ಒಪ್ಪಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹಿಂತಿರುಗಿ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು, ತಮ್ಮ ಸಂಕಟದಲ್ಲಿ ನನ್ನನ್ನು ಹುಡುಕಲು ಅತಿಯಾಗಿ ಪ್ರಯತ್ನಿಸುವರು.”


ಯಾಕೆಂದರೆ ಶೋಧನೆಯು ಸಂಭವಿಸಿತು. ಆದರೆ ನೀನು ಬೆತ್ತದ ಶಿಕ್ಷೆ ಅನುಭವಿಸಲು ನಿರಾಕರಿಸಿದಿ. ಹಾಗಾದರೆ ನಾನು ನಿನಗೆ ಏನು ಉಪಯೋಗಿಸಬೇಕು? ಹೌದು, ಖಡ್ಗವೇ?’” ನನ್ನ ಒಡೆಯನಾದ ಯೆಹೋವನು ನುಡಿದಿದ್ದಾನೆ.


ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.


“ದೇವರ ಮೇಲೆ ಅವಲಂಬಿಸಿಕೊಳ್ಳದ ಇವನಿಗೆ ಏನಾಯಿತು? ತನ್ನ ಐಶ್ವರ್ಯವೂ ಸುಳ್ಳುಗಳೂ ತನ್ನನ್ನು ಕಾಪಾಡುತ್ತವೆ ಎಂದು ಭಾವಿಸಿಕೊಂಡವನು ಇವನೇ.”


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ಎಸ್ತೇರಳು ಉತ್ತರಿಸುತ್ತಾ, “ನಮ್ಮನ್ನು ದ್ವೇಷಿಸುವ ಮನುಷ್ಯನು ಈ ಕೆಟ್ಟ ಹಾಮಾನನೇ” ಎಂದು ಹೇಳಿದಳು. ಆಗ ಹಾಮಾನನು ಭಯದಿಂದ ನಡುಗಿದನು.


ಈ ಸಂಕಷ್ಟಗಳು ಅವನಿಗೆ ಒದಗಿದಾಗ ಅವನು ದೇವರಾದ ಯೆಹೋವನನ್ನು ತನಗೆ ಸಹಾಯ ಮಾಡಲು ಬೇಡಿದನು. ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡನು.


ರಾಜನಾದ ಯಾರೊಬ್ಬಾಮನು ಬದಲಾವಣೆಯಾಗಲಿಲ್ಲ. ಅವನು ಕೆಟ್ಟಕಾರ್ಯಗಳನ್ನು ಮಾಡುತ್ತಲೇ ಇದ್ದನು. ಅವನು ಬೇರೆಬೇರೆ ಕುಲಗಳಿಂದ ಯಾಜಕರನ್ನು ಆರಿಸಿಕೊಳ್ಳುತ್ತಲೇ ಇದ್ದನು. ಆ ಯಾಜಕರು ಎತ್ತರದ ಸ್ಥಳಗಳಲ್ಲಿ ಸೇವೆಯನ್ನು ಮಾಡುತ್ತಿದ್ದರು. ಯಾಜಕನಾಗಬೇಕೆಂದು ಯಾವ ವ್ಯಕ್ತಿಯಾದರೂ ಇಚ್ಛಿಸಿದರೆ, ಯಾಜಕನಾಗಲು ಅವನಿಗೆ ಅವಕಾಶ ಕಲ್ಪಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು