ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.
ಆದ್ದರಿಂದ ಸಹೋದರರು ರಾಜ್ಯಪಾಲನಿಗೆ ಕೊಡಲು ಉಡುಗೊರೆಗಳನ್ನು ತೆಗೆದುಕೊಂಡರು; ಮೊದಲನೆ ಸಲ ತೆಗೆದುಕೊಂಡು ಹೋಗಿದ್ದ ಹಣಕ್ಕಿಂತ ಎರಡರಷ್ಟು ಹೆಚ್ಚಾಗಿ ತೆಗೆದುಕೊಂಡರು. ಬೆನ್ಯಾಮೀನನು ಸಹೋದರರೊಂದಿಗೆ ಈಜಿಪ್ಟಿಗೆ ಹೋದನು.
ಈ ಸಲ ಎರಡರಷ್ಟು ಹಣವನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗಿ. ಕಳೆದ ಸಲ ನೀವು ಪಾವತಿ ಮಾಡಿದ್ದರೂ ಹಿಂತಿರುಗಿಸಲಾದ ಹಣವನ್ನು ತೆಗೆದುಕೊಂಡು ಹೋಗಿ. ಒಂದುವೇಳೆ ರಾಜ್ಯಪಾಲನು ತಪ್ಪು ಮಾಡಿದ್ದಿರಬೇಕು.
ಫರೋಹನು ಯೋಸೇಫನಿಗೆ ಎರಡನೆಯ ರಾಜರಥವನ್ನು ಸಂಚಾರಕ್ಕಾಗಿ ಕೊಟ್ಟನು. ವಿಶೇಷಕಾವಲುಗಾರರು ಅವನ ರಥದ ಮುಂದೆ ನಡೆದುಹೋಗುತ್ತಾ “ಪ್ರಜೆಗಳೇ, ಯೋಸೇಫನಿಗೆ ತಲೆಬಾಗಿ ನಮಸ್ಕರಿಸಿರಿ” ಎಂದು ಪ್ರಕಟಿಸಿದರು. ಹೀಗೆ ಯೋಸೇಫನು ಈಜಿಪ್ಟಿಗೆಲ್ಲಾ ರಾಜ್ಯಪಾಲನಾದನು.
ಇಸ್ರೇಲರ ಸೈನ್ಯದವರು ಯೆಹೂದದಲ್ಲಿ ವಾಸಿಸುವ ಅವರ ಸ್ವಂತ ಕುಟುಂಬದವರಲ್ಲಿ ಎರಡು ಲಕ್ಷ ಮಂದಿಯನ್ನು ಸೆರೆಹಿಡಿದರು. ಅವರ ಹೆಂಗಸರು, ಮಕ್ಕಳು ಮತ್ತು ಅಧಿಕವಾದ ಬೆಲೆಬಾಳುವ ವಸ್ತುಗಳನ್ನು ಸೂರೆಮಾಡಿದರು. ಇಸ್ರೇಲರು ಇವರೆಲ್ಲರನ್ನೂ, ಅಮೂಲ್ಯ ವಸ್ತುಗಳನ್ನೂ ಸಮಾರ್ಯಕ್ಕೆ ತಂದರು.