2 ಪೂರ್ವಕಾಲ ವೃತ್ತಾಂತ 28:8 - ಪರಿಶುದ್ದ ಬೈಬಲ್8 ಇಸ್ರೇಲರ ಸೈನ್ಯದವರು ಯೆಹೂದದಲ್ಲಿ ವಾಸಿಸುವ ಅವರ ಸ್ವಂತ ಕುಟುಂಬದವರಲ್ಲಿ ಎರಡು ಲಕ್ಷ ಮಂದಿಯನ್ನು ಸೆರೆಹಿಡಿದರು. ಅವರ ಹೆಂಗಸರು, ಮಕ್ಕಳು ಮತ್ತು ಅಧಿಕವಾದ ಬೆಲೆಬಾಳುವ ವಸ್ತುಗಳನ್ನು ಸೂರೆಮಾಡಿದರು. ಇಸ್ರೇಲರು ಇವರೆಲ್ಲರನ್ನೂ, ಅಮೂಲ್ಯ ವಸ್ತುಗಳನ್ನೂ ಸಮಾರ್ಯಕ್ಕೆ ತಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ, ಇಸ್ರಾಯೇಲರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಹೆಂಗಸರನ್ನೂ, ಗಂಡು, ಹೆಣ್ಣು ಮಕ್ಕಳನ್ನೂ ಸೆರೆಹಿಡಿದು, ದೊಡ್ಡ ಕೊಳ್ಳೆಯನ್ನೂ ಸೂರೆಮಾಡಿಕೊಂಡು ಸಮಾರ್ಯಕ್ಕೆ ಒಯ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇದಲ್ಲದೆ, ಇಸ್ರಯೇಲರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಮಂದಿ ಹೆಂಗಸರನ್ನೂ ಗಂಡು ಹೆಣ್ಣು ಮಕ್ಕಳನ್ನೂ ಸೆರೆಹಿಡಿದು, ದೊಡ್ಡ ಕೊಳ್ಳೆಯನ್ನೂ ಕೂಡಿಸಿಕೊಂಡು, ಸಮಾರಿಯಕ್ಕೆ ಒಯ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ಇಸ್ರಾಯೇಲ್ಯರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಮಂದಿ ಹೆಂಗಸರನ್ನೂ ಗಂಡು ಹೆಣ್ಣು ಮಕ್ಕಳನ್ನೂ ಸೆರೆಹಿಡಿದು ದೊಡ್ಡ ಕೊಳ್ಳೆಯನ್ನೂ ಕೂಡಿಸಿಕೊಂಡು ಸಮಾರ್ಯಕ್ಕೆ ಒಯ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇಸ್ರಾಯೇಲರು ತಮ್ಮ ಸಹೋದರರಲ್ಲಿ ಎರಡು ಲಕ್ಷಮಂದಿ ಸ್ತ್ರೀಯರನ್ನೂ, ಪುತ್ರಪುತ್ರಿಯರನ್ನೂ ಸೆರೆಯಾಗಿ ತೆಗೆದುಕೊಂಡು ಹೋದರು. ಅವರಿಂದ ಬಹು ಕೊಳ್ಳೆಯನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಬಂದರು. ಅಧ್ಯಾಯವನ್ನು ನೋಡಿ |