Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:15 - ಪರಿಶುದ್ದ ಬೈಬಲ್‌

15 ಈ ಲೇವಿಯರೆಲ್ಲಾ ಒಟ್ಟಾಗಿ ಸೇರಿ ತಮ್ಮ ಸಹೋದರರೊಂದಿಗೆ ದೇವಾಲಯದ ಪವಿತ್ರ ಸೇವೆಯನ್ನು ಆರಂಭಿಸಲು ಸಿದ್ಧರಾದರು; ಅರಸನ ಮೂಲಕವಾಗಿ ಬಂದ ದೇವರ ಆಜ್ಞೆಗೆ ವಿಧೇಯರಾದರು; ದೇವಾಲಯವನ್ನು ಶುದ್ಧೀಕರಿಸಲು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಎಂಬ ಲೇವಿಯರು ಎದ್ದು ತಮ್ಮ ಸಹೋದರರನ್ನು ಸೇರಿಕೊಂಡರು. ಅವರು ಅರಸನ ಆಜ್ಞಾನುಸಾರವಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧೀಕರಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವುದಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಎಂಬ ಲೇವಿಯರು ಮುಂದೆ ಬಂದು ತಮ್ಮ ಸಹೋದರರನ್ನು ಒಂದುಗೂಡಿಸಿದರು. ಅವರು ಅರಸನ ಆಜ್ಞಾಧಾರಕರಾಗಿ ಸರ್ವೇಶ್ವರನ ಧರ್ಮಶಾಸ್ತ್ರವಿಧಿಯ ಮೇರೆಗೆ ತಮ್ಮನ್ನು ಶುದ್ಧಪಡಿಸಿಕೊಂಡು ಸರ್ವೇಶ್ವರನ ಆಲಯವನ್ನು ಶುದ್ಧೀಕರಿಸುವುದಕ್ಕೆ ಸಿದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ಅರಸನ ಆಜ್ಞಾಧಾರಕರಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧಪಡಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವದಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇವರು ಅರಸನ ಆಜ್ಞಾಧಾರಕರಾಗಿ ಯೆಹೋವ ದೇವರ ವಾಕ್ಯವನ್ನು ಅನುಸರಿಸಿ, ತಮ್ಮ ಸಹೋದರರನ್ನು ಕೂಡಿಸಿ, ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯವನ್ನು ಶುಚಿಮಾಡಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:15
6 ತಿಳಿವುಗಳ ಹೋಲಿಕೆ  

ಇದಲ್ಲದೆ, ದೇವರ ಶಕ್ತಿಯು ಯೆಹೂದದ ಜನರನ್ನು ಒಂದಾಗಿ ಮಾಡಿತು. ಆದ್ದರಿಂದ ಅವರು ಅರಸನಿಗೆ ಮತ್ತು ಅಧಿಕಾರಿಗಳಿಗೆ ವಿಧೇಯರಾದರು. ಹೀಗೆ ಜನರು ಯೆಹೋವನ ಕಟ್ಟಳೆಗಳಿಗೆ ವಿಧೇಯರಾದರು.


ಲೇವಿಯರು ಆರೋನನ ಸಂತತಿಯವರಾದ ಯಾಜಕರಿಗೆ ದೇವಾಲಯದಲ್ಲಿ ಸೇವೆಮಾಡಲು ಸಹಾಯ ಮಾಡುತ್ತಿದ್ದರು. ಇದಲ್ಲದೆ ಅವರು ದೇವಾಲಯದ ಹೊರಗಿನ ಅಂಗಳವನ್ನೂ ದೇವಾಲಯದ ಎಡಬಲಗಡೆಗಳಲ್ಲಿದ್ದ ಕೋಣೆಗಳನ್ನೂ ನೋಡಿಕೊಳ್ಳುತ್ತಿದ್ದರು; ಪರಿಶುದ್ಧ ಸಾಮಾಗ್ರಿಗಳನ್ನು ಯಾವಾಗಲೂ ಶುದ್ಧವಾಗಿಡುತ್ತಿದ್ದರು. ಹೀಗೆ ದೇವಾಲಯದ ಸೇವೆಯನ್ನು ಮಾಡುತ್ತಿದ್ದರು.


ಆ ಕೋಣೆಗಳನ್ನು ಶುದ್ಧಮಾಡಲು ನಾನು ಆಜ್ಞೆ ಮಾಡಿದೆನು. ಆಮೇಲೆ ದೇವಾಲಯದ ಪಾತ್ರೆಗಳನ್ನು, ವಸ್ತುಗಳನ್ನು, ಧಾನ್ಯಸಮರ್ಪಣೆಗಳನ್ನು ಮತ್ತು ಧೂಪವನ್ನು ಆ ಕೋಣೆಯೊಳಗೆ ತಂದಿಟ್ಟೆನು.


ಅಲ್ಲಿ ನೆರೆದುಬಂದಿದ್ದ ಯಾಜಕರೆಲ್ಲರೂ ಯಾವ ವರ್ಗವ್ಯತ್ಯಾಸವಿಲ್ಲದೆ ಆಚಾರಕ್ಕನುಸಾರವಾಗಿ ತಮ್ಮನ್ನು ಶುದ್ಧೀಕರಿಸಿಕೊಂಡರು. ಬಳಿಕ ಅವರು ಪವಿತ್ರ ಸ್ಥಳದಿಂದ ಹೊರಬಂದು ಒಟ್ಟಾಗಿ ನಿಂತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು