2 ಪೂರ್ವಕಾಲ ವೃತ್ತಾಂತ 29:16 - ಪರಿಶುದ್ದ ಬೈಬಲ್16 ಯಾಜಕರು ದೇವಾಲಯದ ಒಳಭಾಗವನ್ನು ಪ್ರವೇಶಿಸಿ ಶುಚಿಮಾಡಿದರು. ದೇವಾಲಯದೊಳಗೆ ಇದ್ದ ಎಲ್ಲಾ ಹೊಲಸು ವಸ್ತುಗಳನ್ನು ಹೊರತೆಗೆದರು. ದೇವಾಲಯದ ಅಂಗಳಕ್ಕೆ ತಂದು ಅಲ್ಲಿಂದ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಬಿಸಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವುದಕ್ಕಾಗಿ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯಾಜಕರು ಸರ್ವೇಶ್ವರನ ಆಲಯವನ್ನು ಶುದ್ಧಮಾಡುವುದಕ್ಕೆ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ಹೊರಗೆ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವದಕ್ಕೋಸ್ಕರ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯಾಜಕರು ಯೆಹೋವ ದೇವರ ಆಲಯವನ್ನು ಶುದ್ಧಿಮಾಡಲು ಅದರ ಒಳಭಾಗವನ್ನು ಪ್ರವೇಶಿಸಿ, ಯೆಹೋವ ದೇವರ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಯೆಹೋವ ದೇವರ ಆಲಯದ ಅಂಗಳದೊಳಗೆ ತಂದರು. ಆಗ ಲೇವಿಯರು ಅದನ್ನು ತೆಗೆದುಕೊಂಡು, ಕಿದ್ರೋನ್ ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು. ಅಧ್ಯಾಯವನ್ನು ನೋಡಿ |