Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:18 - ಪರಿಶುದ್ದ ಬೈಬಲ್‌

18 ಅನಂತರ ಅವರು ಅರಸನಾದ ಹಿಜ್ಕೀಯನ ಬಳಿಗೆ ಹೋಗಿ, “ಅರಸನಾದ ಹಿಜ್ಕೀಯನೇ, ನಾವು ದೇವಾಲಯವನ್ನೂ ಯಜ್ಞವೇದಿಕೆಯನ್ನೂ ದೇವಾಲಯದ ಸಾಮಾಗ್ರಿಗಳನ್ನೂ ಶುದ್ಧ ಮಾಡಿದೆವು. ರೊಟ್ಟಿಯನ್ನಿಡುವ ಮೇಜನ್ನೂ ಶುದ್ಧ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, “ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗು ಅದರ ಸಾಮಾನುಗಳನ್ನೂ ಶುದ್ಧಿಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಮೇಲೆ ಅವರು ಅರಮನೆಗೆ ಹೋಗಿ, ಅರಸ ಹಿಜ್ಕೀಯನಿಗೆ, “ನಾವು ಸರ್ವೇಶ್ವರನ ಆಲಯವನ್ನು ಪೂರ್ತಿಯಾಗಿ ಶುದ್ಧೀಕರಿಸಿದೆವು. ಬಲಿಪೀಠವನ್ನು, ಅದರ ಉಪಕರಣಗಳನ್ನು, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನು ಹಾಗು ಅದರ ಸಾಮಗ್ರಿಗಳನ್ನೂ ಶುದ್ಧಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಮೇಲೆ ಅವರು ಅರಮನೆಯೊಳಕ್ಕೆ ಹೋಗಿ ಅರಸನಾದ ಹಿಜ್ಕೀಯನಿಗೆ - ನಾವು ಯೆಹೋವನ ಸಮಸ್ತಾಲಯವನ್ನೂ ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಅದರ ಸಾಮಾನುಗಳನ್ನೂ ಶುದ್ಧಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರ ಆಲಯವನ್ನೆಲ್ಲಾ, ದಹನಬಲಿಪೀಠವನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನು, ಅದರ ಎಲ್ಲಾ ಪಾತ್ರೆಗಳನ್ನೂ ಶುದ್ಧಿಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:18
6 ತಿಳಿವುಗಳ ಹೋಲಿಕೆ  

ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.


ಸೊಲೊಮೋನನು ತಾಮ್ರದ ಯಜ್ಞವೇದಿಕೆಯನ್ನು ಮಾಡಿಸಿದನು. ಅದು ಇಪ್ಪತ್ತು ಮೊಳ ಉದ್ದ; ಇಪ್ಪತ್ತು ಮೊಳ ಅಗಲ; ಮತ್ತು ಹತ್ತು ಮೊಳ ಎತ್ತರವಿತ್ತು.


ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು.


ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಲೇವಿಯರು ಪವಿತ್ರ ಸೇವೆಯನ್ನು ಮಾಡಲು ಸಿದ್ಧರಾದರು. ತಿಂಗಳಿನ ಎಂಟನೆಯ ದಿನದಲ್ಲಿ ದೇವಾಲಯದ ಮಂಟಪಕ್ಕೆ ಲೇವಿಯರು ಬಂದರು. ಎಂಟು ದಿನಗಳಲ್ಲಿ ಅವರು ದೇವಾಲಯವನ್ನೆಲ್ಲಾ ಶುಚಿಮಾಡಿದರು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಅವರು ಶುಚಿಮಾಡುವ ಕಾರ್ಯವನ್ನು ಮುಗಿಸಿದರು.


ಆಹಾಜನು ಅರಸನಾಗಿದ್ದ ಕಾಲದಲ್ಲಿ ಅವನು ದೇವರಿಗೆ ವಿರುದ್ಧವಾಗಿ ಎದ್ದನು. ದೇವಾಲಯದೊಳಗಿದ್ದ ಅನೇಕ ವಸ್ತುಗಳನ್ನು ಎತ್ತಿ ಬಿಸಾಡಿದನು. ಆದರೆ ನಾವು ಅವುಗಳನ್ನೆಲ್ಲಾ ಮತ್ತೆ ಯಥಾಸ್ಥಾನದಲ್ಲಿರಿಸಿ ಅದರ ವಿಶೇಷ ಉಪಯೋಗಕ್ಕಾಗಿ ಸಿದ್ಧಪಡಿಸಿದೆವು. ಈಗ ಅವು ಯೆಹೋವನ ವೇದಿಕೆಯ ಮುಂದೆ ಇಡಲ್ಪಟ್ಟಿವೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು