2 ಪೂರ್ವಕಾಲ ವೃತ್ತಾಂತ 29:19 - ಪರಿಶುದ್ದ ಬೈಬಲ್19 ಆಹಾಜನು ಅರಸನಾಗಿದ್ದ ಕಾಲದಲ್ಲಿ ಅವನು ದೇವರಿಗೆ ವಿರುದ್ಧವಾಗಿ ಎದ್ದನು. ದೇವಾಲಯದೊಳಗಿದ್ದ ಅನೇಕ ವಸ್ತುಗಳನ್ನು ಎತ್ತಿ ಬಿಸಾಡಿದನು. ಆದರೆ ನಾವು ಅವುಗಳನ್ನೆಲ್ಲಾ ಮತ್ತೆ ಯಥಾಸ್ಥಾನದಲ್ಲಿರಿಸಿ ಅದರ ವಿಶೇಷ ಉಪಯೋಗಕ್ಕಾಗಿ ಸಿದ್ಧಪಡಿಸಿದೆವು. ಈಗ ಅವು ಯೆಹೋವನ ವೇದಿಕೆಯ ಮುಂದೆ ಇಡಲ್ಪಟ್ಟಿವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅರಸನಾದ ಆಹಾಜನು ತನ್ನ ಆಳ್ವಿಕೆಯಲ್ಲಿ ದೈವದ್ರೋಹಿಯಾಗಿ ತಳ್ಳಿಬಿಟ್ಟಿದ್ದ ಪಾತ್ರೆಗಳನ್ನು ತಿರುಗಿ ತಂದಿಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಯೆಹೋವನ ಯಜ್ಞವೇದಿಯ ಮುಂದಿರುತ್ತವೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅರಸ ಅಹಾಜನು, ತನ್ನ ಆಳ್ವಿಕೆಯಲ್ಲಿ ದೇವದ್ರೋಹಿಯಾಗಿ ತಳ್ಳಿಬಿಟ್ಟಿದ್ದ ಪಾತ್ರೆಗಳನ್ನು ಮತ್ತೆ ತಂದು ಇಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಸರ್ವೇಶ್ವರನ ಬಲಿಪೀಠದ ಮುಂದಿರುತ್ತವೆ,” ಎಂದು ವರದಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅರಸನಾದ ಆಹಾಜನು ತನ್ನ ಆಳಿಕೆಯಲ್ಲಿ ದೇವದ್ರೋಹಿಯಾಗಿ ತಳ್ಳಿಬಿಟ್ಟ ಪಾತ್ರೆಗಳನ್ನು ತಿರಿಗಿ ತಂದಿಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಯೆಹೋವನ ಯಜ್ಞವೇದಿಯ ಮುಂದಿರುತ್ತವೆ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇದಲ್ಲದೆ ಅರಸನಾದ ಆಹಾಜನು ಆಳಿದಾಗ, ದೇವದ್ರೋಹಿಯಾಗಿ ಬಿಸಾಡಿದ ಎಲ್ಲಾ ಸಲಕರಣೆಗಳನ್ನು ಪುನಃ ತಂದು ಪ್ರತಿಷ್ಠೆ ಮಾಡಿದೆವು. ಅವು ಯೆಹೋವ ದೇವರ ಬಲಿಪೀಠದ ಮುಂದೆ ಇವೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |