Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:2 - ಪರಿಶುದ್ದ ಬೈಬಲ್‌

2 ಹಿಜ್ಕೀಯನು ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನಿಗೆ ಸರಿಯಾಗಿ ನಡೆದುಕೊಂಡನು. ಅವನು ದೇವರ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಎಲ್ಲಾ ವಿಷಯಗಳಲ್ಲಿಯೂ ನೀತಿವಂತನಾಗಿ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಎಲ್ಲಾ ವಿಷಯಗಳಲ್ಲೂ ತನ್ನ ಪೂರ್ವಜ ದಾವೀದನಂತೆ ಸರ್ವೇಶ್ವರನ ಚಿತ್ತಾನುಸಾರ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಎಲ್ಲಾ ವಿಷಯಗಳಲ್ಲಿಯೂ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ತನ್ನ ತಂದೆ ದಾವೀದನು ಮಾಡಿದ ಪ್ರಕಾರ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:2
6 ತಿಳಿವುಗಳ ಹೋಲಿಕೆ  

ಯೋಷೀಯನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನೇ ಮಾಡಿದನು. ಅವನು ತನ್ನ ಪೂರ್ವಿಕನಾದ ದಾವೀದನಂತೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು. ಅವನು ಒಳ್ಳೆಯ ಕಾರ್ಯಗಳನ್ನು ಮಾಡುವುದನ್ನು ಬಿಟ್ಟುಬಿಡಲಿಲ್ಲ.


ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿದ್ದು ಹದಿನಾರು ವರ್ಷ ರಾಜ್ಯಭಾರ ಮಾಡಿದನು. ಆಹಾಜನು ತನ್ನ ಪೂರ್ವಿಕನಾದ ದಾವೀದನಂತೆ ಸರಿಯಾದ ರೀತಿಯಲ್ಲಿ ನಡೆದುಕೊಳ್ಳಲಿಲ್ಲ. ದೇವರ ಚಿತ್ತದ ಪ್ರಕಾರ ಜೀವಿಸಲಿಲ್ಲ.


ಹಿಜ್ಕೀಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೊಂಭತ್ತು ವರ್ಷ ವಯಸ್ಸಾಗಿತ್ತು. ಹಿಜ್ಕೀಯನು ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬ ಹೆಸರಿನವಳು ಅವನ ತಾಯಿ.


ಯೆಹೋವನು ಯೆಹೋಷಾಫಾಟನೊಂದಿಗೆ ಇದ್ದನು; ಯಾಕೆಂದರೆ ಯೆಹೋಷಾಫಾಟನು ತನ್ನ ಯೌವನ ಕಾಲದಲ್ಲಿಯೇ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಜೀವಿಸಿದನು. ಅವನು ಬಾಳನ ಪೂಜೆಯನ್ನು ಮಾಡಲಿಲ್ಲ.


ತನ್ನ ಪೂರ್ವಿಕರು ಅನುಸರಿಸಿದ ದೇವರನ್ನು ನಿರೀಕ್ಷಿಸಿದನು. ಆತನ ಆಜ್ಞೆಗಳನ್ನು ಅನುಸರಿಸಿದನು. ಇಸ್ರೇಲಿ ಅರಸರು ನಡೆದಂತೆ ಇವನು ನಡೆಯಲಿಲ್ಲ.


ಉಜ್ಜೀಯನು ತನ್ನ ತಂದೆಯಾದ ಅಮಚ್ಯನಂತೆ ದೇವರ ಮುಂದೆ ಯೋಗ್ಯನಾಗಿ ನಡೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು