25 ದಾವೀದನೂ ಅರಸನ ದರ್ಶಿಯಾಗಿದ್ದ ಗಾದನೂ ಮತ್ತು ಪ್ರವಾದಿಯಾಗಿದ್ದ ನಾತಾನನೂ ಆಜ್ಞಾಪಿಸಿದಂತೆ, ಅರಸನಾದ ಹಿಜ್ಕೀಯನು ಲೇವಿಯರನ್ನು ತಾಳ, ತಂತಿವಾದ್ಯ ಮತ್ತು ಕಿನ್ನರಿಗಳೊಂದಿಗೆ ದೇವಾಲಯದಲ್ಲಿ ಇರಿಸಿದನು. ಈ ಆಜ್ಞೆಯು ಯೆಹೋವನಿಂದ ಪ್ರವಾದಿಗಳ ಮೂಲಕ ಬಂದಿತ್ತು.
25 ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.
25 ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕಾಗಿ ಲೇವಿಯರನ್ನು ನೇಮಿಸಿದನು. ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿ ನಾತಾನ್ ಇವರ ಆಜ್ಞಾನುಸಾರ ಸರ್ವೇಶ್ವರನ ಆಲಯದಲ್ಲಿ ಈ ಗಾಯಕರನ್ನು ಇರಿಸಿದ್ದನು. ಸರ್ವೇಶ್ವರಸ್ವಾಮಿಯೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದರು.
25 ಇದಲ್ಲದೆ ಅವನು ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನೂ ಹಿಡಿದ ಲೇವಿಯರನ್ನು ದಾವೀದನೂ, ಅರಸನ ದರ್ಶಿಯಾದ ಗಾದನೂ, ಪ್ರವಾದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ, ಯೆಹೋವ ದೇವರ ಆಲಯದಲ್ಲಿ ನಿಲ್ಲಿಸಿದನು. ಏಕೆಂದರೆ ಯೆಹೋವ ದೇವರ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹೀಗೆ ಇತ್ತು.
ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.
ನಾಲ್ಕು ಸಾವಿರ ಮಂದಿ ಲೇವಿಯರು ದ್ವಾರಪಾಲಕರಾಗಿಯೂ ನಾಲ್ಕು ಸಾವಿರ ಮಂದಿ ಲೇವಿಯರು ಗಾಯಕರಾಗಿಯೂ ಸೇವೆ ಮಾಡಬೇಕು. ನಾನು ಅವರಿಗಾಗಿ ವಿಶೇಷ ವಾದ್ಯಗಳನ್ನು ತಯಾರಿಸಿಟ್ಟಿರುತ್ತೇನೆ. ಅವರು ಅವುಗಳನ್ನು ನುಡಿಸುತ್ತಾ ದೇವರಿಗೆ ಸ್ತೋತ್ರ ಮಾಡಬೇಕು” ಅಂದನು.
ಆಸಾಫನ ಕುಟುಂಬದವರಾದ ಲೇವಿಗಾಯಕರು ದಾವೀದನಿಂದ ನೇಮಕಗೊಂಡಿದ್ದ ಸ್ಥಳದಲ್ಲಿ ನಿಂತುಕೊಂಡರು. ಅವರು ಯಾರೆಂದರೆ: ಆಸಾಫ್, ಹೇಮಾನ್ ಮತ್ತು ಅರಸನ ಪ್ರವಾದಿಯಾಗಿದ್ದ ಯೆದೂತೂನ್. ದ್ವಾರಪಾಲಕರು ತಮ್ಮತಮ್ಮ ಸ್ಥಳಗಳಲ್ಲಿಯೇ ನಿಂತಿದ್ದರು. ಅವರು ತಮ್ಮ ಸ್ಥಳಗಳನ್ನು ಬಿಟ್ಟುಹೋಗುವ ಅಗತ್ಯವಿರಲಿಲ್ಲ ಯಾಕಂದೆರ ಪಸ್ಕದ ಯಜ್ಞಗಳನ್ನು ಅವರ ಸೋದರರಾದ ಲೇವಿಯರು ಅವರಿಗಾಗಿ ಮಾಡಿದರು.
ಗಾಯಕರು ಮತ್ತು ತಮ್ಮ ಕುಟುಂಬಗಳಿಗೆ ನಾಯಕರಾಗಿದ್ದ ಲೇವಿಯರು ದೇವಾಲಯದ ಕೋಣೆಗಳಲ್ಲಿ ಇರುತ್ತಿದ್ದರು. ಅವರು ಇತರ ಕೆಲಸಗಳನ್ನು ಮಾಡಬೇಕಾಗಿರಲಿಲ್ಲ; ಯಾಕೆಂದರೆ ದೇವಾಲಯದ ಹಗಲಿರುಳಿನ ಕೆಲಸಕಾರ್ಯಗಳ ಜವಾಬ್ದಾರಿಕೆ ಇವರದಾಗಿತ್ತು.
ಆಮೇಲೆ ದಾವೀದನು, “ನಕ್ಷೆಗಳನ್ನೆಲ್ಲ ಮಾಡಲು ಯೆಹೋವನೇ ನನ್ನನ್ನು ನಡಿಸಿ ಮಾರ್ಗದರ್ಶನ ಕೊಟ್ಟನು. ಈ ನಕ್ಷೆಗಳಲ್ಲಿರುವ ಸಕಲ ವಿಷಯಗಳನ್ನು ನಾನು ಅರಿತುಕೊಳ್ಳುವಂತೆ ಸಹಾಯ ಮಾಡಿದನು” ಎಂದು ಹೇಳಿದನು.
ದೇವಾಲಯದ ಪ್ರತಿಯೊಂದು ಭಾಗದ ನಕ್ಷೆಯನ್ನು ದಾವೀದನು ತಯಾರಿಸಿದ್ದನು. ದೇವಾಲಯದ ಸುತ್ತಣ ಅಂಗಳಗಳ ನಕ್ಷೆ ಮತ್ತು ಸುತ್ತಲೂ ಇರುವ ಕೋಣೆಗಳ ನಕ್ಷೆಯನ್ನು ದೇವಾಲಯದ ಪವಿತ್ರ ವಸ್ತುಗಳನ್ನು ಇಡುವ ಕೋಣೆಗಳ ಯೋಜನೆಯನ್ನು ಮತ್ತು ನಕ್ಷೆಗಳನ್ನು ಸೊಲೊಮೋನನಿಗೆ ಕೊಟ್ಟನು.
ಗಾದನು ದಾವೀದನ ಪ್ರವಾದಿಯಾಗಿದ್ದನು. ಯೆಹೋವನು ಗಾದನಿಗೆ, “ನೀನು ದಾವೀದನಿಗೆ ಹೀಗೆ ಹೇಳು: ‘ಇದು ಯೆಹೋವನ ನುಡಿ. ನಾನು ನಿನಗೆ ಕೊಡಲಿರುವ ಮೂರು ಶಿಕ್ಷೆಯಲ್ಲಿ ಒಂದನ್ನು ಆರಿಸಿಕೊಳ್ಳಬೇಕು. ನೀನು ಆರಿಸಿಕೊಂಡ ಪ್ರಕಾರವೇ ನಾನು ನಿನ್ನನ್ನು ಶಿಕ್ಷಿಸುವೆನು’” ಅಂದನು.
ಇಸ್ರೇಲರು ಜೆರುಸಲೇಮಿನಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸಗಳ ತನಕ ಆಚರಿಸಿದರು. ಅವರೆಲ್ಲಾ ಹರ್ಷದಿಂದ ತುಂಬಿ ಹಬ್ಬವನ್ನು ಆಚರಿಸಿದರು. ಯಾಜಕರೂ ಲೇವಿಯರೂ ಪ್ರತಿದಿನ ಗಟ್ಟಿಯಾಗಿ ಸ್ತುತಿಗೀತೆಗಳನ್ನು ಹಾಡಿದರು.
ಜನರು ಜೆರುಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸಿದರು. ಅವರು ಎಲ್ಲಾ ಲೇವಿಯರನ್ನು ನಗರಕ್ಕೆ ಕರೆತಂದು ಪ್ರತಿಷ್ಠೆ ಮಾಡಿದರು. ಅವರು ದೇವರಿಗೆ ಸ್ತುತಿಪದಗಳನ್ನು, ತಾಳ, ಸ್ವರಮಂಡಲ, ಕಿನ್ನರಿಗಳನ್ನು ಬಾರಿಸುತ್ತಾ ಹಾಡಿದರು.