27 ಆ ಬಳಿಕ ಹಿಜ್ಕೀಯನು ಸರ್ವಾಂಗಹೋಮವನ್ನು ಅರ್ಪಿಸಲು ಆಜ್ಞಾಪಿಸಿದನು. ಸರ್ವಾಂಗಹೋಮ ಆರಂಭವಾದ ಕೂಡಲೇ ದೇವರಿಗೆ ಸ್ತೋತ್ರಗಾನ ಹಾಡುವದೂ ಪ್ರಾರಂಭವಾಯಿತು. ತುತ್ತೂರಿಯನ್ನು ಊದಿ ದಾವೀದನ ವಾದ್ಯಗಳನ್ನು ಬಾರಿಸಿದರು.
27 ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ, ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗಳಿಂದಲೂ ಯೆಹೋವ ದೇವರ ಹಾಡು ಆರಂಭವಾಯಿತು.
ಆ ಬಳಿಕ ಯೆಹೋಯಾದನು ದೇವಾಲಯದೊಳಗೆ ಸೇವೆಮಾಡುವ ಜವಾಬ್ದಾರಿಕೆಯನ್ನು ಕೆಲವು ಯಾಜಕರಿಗೆ ವಹಿಸಿದನು. ಅವರೆಲ್ಲಾ ಲೇವಿಯರಾಗಿದ್ದರು. ದಾವೀದನು ಅವರಿಗೆ ದೇವಾಲಯದ ಜವಾಬ್ದಾರಿಕೆಯನ್ನು ಕೊಟ್ಟಿದ್ದನು. ಮೋಶೆಯು ಕೊಟ್ಟಿದ್ದ ನಿಯಮಕ್ಕನುಸಾರವಾಗಿ ಅವರು ಸರ್ವಾಂಗಹೋಮವನ್ನು ಅರ್ಪಿಸಿದರು. ದಾವೀದನು ಆಜ್ಞಾಪಿಸಿದಂತೆ ಅವರು ಹೋಮಗಳನ್ನೂ ಯಜ್ಞಗಳನ್ನೂ ಅರ್ಪಿಸುವಾಗ ಹಾಡುತ್ತಾ ಸಂತೋಷದಿಂದ ತಮ್ಮ ಕೆಲಸವನ್ನು ಮಾಡಿದರು.
ಯೆಹೋಷಾಫಾಟನು ಜನರ ಸಲಹೆಗಳನ್ನು ಕೇಳಿದನು; ಯೆಹೋವನನ್ನು ಸ್ತುತಿಸಲು ಗಾಯಕರನ್ನು ಆರಿಸಿದನು; ಯಾಕೆಂದರೆ ಆತನು ಪರಿಶುದ್ಧನು ಮತ್ತು ಅದ್ಭುತಸ್ವರೂಪನು. ಅವರು ಸೈನ್ಯದ ಮುಂದುಗಡೆಯಲ್ಲಿ ಹೋಗುತ್ತಾ ಆತನಿಗೆ ಸ್ತುತಿಗೀತೆಯನ್ನು ಹಾಡಿದರು. ಆ ಗಾಯಕರು, “ಯೆಹೋವನಿಗೆ ಸ್ತೋತ್ರಮಾಡಿರಿ. ಆತನ ಕರುಣೆಯು ನಿರಂತರವಾದದ್ದು” ಎಂದು ಹಾಡಿದರು.
ಸೇರಿಬಂದ ಇಸ್ರೇಲ್ ಜನರೆಲ್ಲಾ ಆಕಾಶದಿಂದ ಬೆಂಕಿ ಬೀಳುವದನ್ನೂ ದೇವಾಲಯದಲ್ಲಿ ಯೆಹೋವನ ಮಹಿಮೆ ತುಂಬಿದ್ದನ್ನೂ ನೋಡಿ ನೆಲದ ಮೇಲೆ ಬೋರಲಬಿದ್ದು “ಯೆಹೋವನು ಒಳ್ಳೆಯವನು, ಅವನ ಕರುಣೆಯು ನಿರಂತರಕ್ಕೂ ಇರುವಂಥದ್ದು” ಎಂದು ಹೇಳುತ್ತಾ ದೇವರನ್ನು ಸುತ್ತಿಸಿ ಕೊಂಡಾಡಿದರು.
ಯಾಜಕರು ತಮ್ಮ ಕೆಲಸಗಳನ್ನು ಮಾಡಲು ತಮ್ಮ ತಮ್ಮ ಸ್ಥಳಗಳಲ್ಲಿ ತಯಾರಾಗಿ ನಿಂತಿದ್ದರು. ಲೇವಿಕುಲದ ಗಾಯಕರು ತಮ್ಮ ವಾದ್ಯಗಳೊಂದಿಗೆ ದೇವರನ್ನು ಸ್ತುತಿಸಲು ನಿಂತಿದ್ದರು. ಆ ವಾದ್ಯಗಳನ್ನು ಅರಸನಾದ ದಾವೀದನು ದೇವರನ್ನು ಸ್ತುತಿಸುವದಕ್ಕೋಸ್ಕರ ತಯಾರಿಸಿದ್ದನು. ಯಾಜಕರೂ ಲೇವಿಯರೂ, “ದೇವರಾದ ಯೆಹೋವನ ಕೃಪೆಯು ನಿರಂತರವಾದದ್ದು” ಎಂದು ಹೇಳುತ್ತಿದ್ದರು. ಯಾಜಕರು ಲೇವಿಯರಿಗೆ ಎದುರಾಗಿ ನಿಂತುಕೊಂಡು ತುತ್ತೂರಿಯನ್ನು ಊದಿದರು. ಇಸ್ರೇಲರೆಲ್ಲರೂ ನಿಂತುಕೊಂಡರು.
ಇಸ್ರೇಲರು ಜೆರುಸಲೇಮಿನಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸಗಳ ತನಕ ಆಚರಿಸಿದರು. ಅವರೆಲ್ಲಾ ಹರ್ಷದಿಂದ ತುಂಬಿ ಹಬ್ಬವನ್ನು ಆಚರಿಸಿದರು. ಯಾಜಕರೂ ಲೇವಿಯರೂ ಪ್ರತಿದಿನ ಗಟ್ಟಿಯಾಗಿ ಸ್ತುತಿಗೀತೆಗಳನ್ನು ಹಾಡಿದರು.