Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:29 - ಪರಿಶುದ್ದ ಬೈಬಲ್‌

29 ಯಜ್ಞಸಮರ್ಪಣೆ ಮುಗಿದ ಬಳಿಕ ಅರಸನಾದ ಹಿಜ್ಕೀಯನೂ ಪ್ರಜೆಗಳೂ ಯೆಹೋವನಿಗೆ ಸಾಷ್ಟಾಂಗನಮಸ್ಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಸರ್ವಾಂಗಹೋಮ ಸಮರ್ಪಣೆಯು ಮುಗಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ದಹನಬಲಿ ಸಮರ್ಪಣೆ ತೀರಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಸರ್ವಾಂಗಹೋಮಸಮರ್ಪಣೆಯು ತೀರಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗನಮಸ್ಕಾರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವರು ಅರ್ಪಿಸುವುದು ತೀರಿಸಿದಾಗ ಅರಸನೂ, ಅವನ ಸಂಗಡ ಇದ್ದವರೆಲ್ಲರೂ ಮೊಣಕಾಲೂರಿ ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:29
10 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನು ನೆಲದ ಮೇಲೆ ಸಾಷ್ಟಾಂಗನಮಸ್ಕಾರ ಮಾಡಿದನು. ಹಾಗೆಯೇ, ನೆರೆದಿದ್ದ ಜನರೆಲ್ಲರೂ ಯೆಹೋವನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.


ಹೌದು, ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “‘ಪ್ರತಿಯೊಬ್ಬನೂ ನನಗೆ ಅಡ್ಡಬೀಳುವನು. ಪ್ರತಿಯೊಬ್ಬನೂ ನನ್ನನ್ನು ದೇವರೆಂದು ಹೇಳುವನು. ನನ್ನ ಜೀವದಾಣೆಯಾಗಿಯೂ ಈ ಸಂಗತಿಗಳು ನೆರವೇರುತ್ತವೆ’ ಎನ್ನುತ್ತಾನೆ ಪ್ರಭುವು.”


ಅರಸರುಗಳೆಲ್ಲಾ ನಮ್ಮ ರಾಜನಿಗೆ ಅಡ್ಡಬೀಳಲಿ. ಜನಾಂಗಗಳೆಲ್ಲಾ ಅವನ ಸೇವೆಮಾಡಲಿ.


ನೆರೆದು ಬಂದವರಿಗೆ ದಾವೀದನು, “ದೇವರಾದ ಯೆಹೋವನಿಗೆ ಸ್ತೋತ್ರಮಾಡಿರಿ” ಎಂದನು. ಆಗ ಎಲ್ಲರೂ ಅವರ ಪೂರ್ವಿಕರ ದೇವರಿಗೆ ಸ್ತುತಿಸುತ್ತಾ ತಲೆಬಾಗಿ ದೇವರನ್ನೂ ಅರಸನನ್ನೂ ನಮಸ್ಕರಿಸಿದರು.


ಸೇರಿ ಬಂದಿದ್ದ ಜನಸಮೂಹದವರು ಸಾಷ್ಟಾಂಗನಮಸ್ಕಾರ ಮಾಡಿದರು. ಯಜ್ಞವು ಮುಗಿಯುವ ತನಕ ದೇವರ ಸ್ತೋತ್ರಗಾನ ಮುಂದುವರಿಯಿತು.


ಅಹಾಜನ ಮಗನಾದ ಹಿಜ್ಕೀಯನು ಯೆಹೂದದ ರಾಜನಾದನು. ಏಲನ ಮಗನಾದ ಹೋಶೇಯನು ಇಸ್ರೇಲಿನ ರಾಜನಾಗಿದ್ದ ಮೂರನೆಯ ವರ್ಷದಲ್ಲಿ ಹಿಜ್ಕೀಯನು ಆಳಲಾರಂಭಿಸಿದನು.


ಸೇರಿಬಂದ ಇಸ್ರೇಲ್ ಜನರೆಲ್ಲಾ ಆಕಾಶದಿಂದ ಬೆಂಕಿ ಬೀಳುವದನ್ನೂ ದೇವಾಲಯದಲ್ಲಿ ಯೆಹೋವನ ಮಹಿಮೆ ತುಂಬಿದ್ದನ್ನೂ ನೋಡಿ ನೆಲದ ಮೇಲೆ ಬೋರಲಬಿದ್ದು “ಯೆಹೋವನು ಒಳ್ಳೆಯವನು, ಅವನ ಕರುಣೆಯು ನಿರಂತರಕ್ಕೂ ಇರುವಂಥದ್ದು” ಎಂದು ಹೇಳುತ್ತಾ ದೇವರನ್ನು ಸುತ್ತಿಸಿ ಕೊಂಡಾಡಿದರು.


ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ. ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.


ಯೆಹೋವನನ್ನು ಆತನ ಸುಂದರವಾದ ಆಲಯದಲ್ಲಿ ಆರಾಧಿಸಿರಿ. ಭೂನಿವಾಸಿಗಳೆಲ್ಲರೇ, ಆತನನ್ನೇ ಆರಾಧಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು