2 ಪೂರ್ವಕಾಲ ವೃತ್ತಾಂತ 29:3 - ಪರಿಶುದ್ದ ಬೈಬಲ್3 ಹಿಜ್ಕೀಯನು ದೇವಾಲಯದ ಬಾಗಿಲುಗಳನ್ನು ದುರಸ್ತಿಮಾಡಿ ಭದ್ರಪಡಿಸಿದನು; ತನ್ನ ಆಳ್ವಿಕೆಯ ಮೊದಲನೇ ವರ್ಷದ ಮೊದಲಿನ ತಿಂಗಳಿನಲ್ಲಿಯೇ ದೇವಾಲಯವನ್ನು ಮತ್ತೆ ತೆರೆಯಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಹಿಜ್ಕೀಯನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಸರ್ವೇಶ್ವರನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನು ತನ್ನ ಆಳಿಕೆಯ ಮೊದಲನೆಯ ವರುಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಹಿಜ್ಕೀಯನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವ ದೇವರ ಆಲಯದ ಬಾಗಿಲುಗಳನ್ನು ತೆರೆದು, ಅವುಗಳನ್ನು ಭದ್ರಪಡಿಸಿದನು. ಅಧ್ಯಾಯವನ್ನು ನೋಡಿ |
ಹಿಜ್ಕೀಯನು ಎಲ್ಲಾ ಯಾಜಕರನ್ನೂ ಲೇವಿಯರನ್ನೂ ಕರೆದು ದೇವಾಲಯದ ಪೂರ್ವದಿಕ್ಕಿನಲ್ಲಿದ್ದ ಅಂಗಳದಲ್ಲಿ ಒಟ್ಟುಗೂಡಿಸಿ ಅವರಿಗೆ, “ನನ್ನ ಮಾತುಗಳನ್ನು ಕೇಳಿರಿ. ಲೇವಿಯರೇ, ನೀವು ನಿಮ್ಮನ್ನು ಪವಿತ್ರ ಸೇವೆಗೆ ಸಿದ್ಧಮಾಡಿಕೊಳ್ಳಿರಿ. ಯೆಹೋವ ದೇವರ ಆಲಯವನ್ನು ಪವಿತ್ರ ಸೇವೆಗಾಗಿ ಶುದ್ಧಮಾಡಿರಿ. ನಮ್ಮ ಪೂರ್ವಿಕರು ಸೇವೆಮಾಡಿದ ದೇವರು ಆತನೇ. ದೇವಾಲಯದೊಳಗೆ ಇರಬಾರದ ವಸ್ತುಗಳನ್ನು ತೆಗೆದು ಹೊರಗೆಹಾಕಿರಿ. ಅವು ದೇವರ ಆಲಯವನ್ನು ಹೊಲಸು ಮಾಡುತ್ತವೆ.