Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:30 - ಪರಿಶುದ್ದ ಬೈಬಲ್‌

30 ರಾಜನಾದ ಹಿಜ್ಕೀಯನು ಮತ್ತು ಅವನ ಅಧಿಕಾರಿಗಳು ಯೆಹೋವನಿಗೆ ಸ್ತೋತ್ರ ಮಾಡಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಆಸಾಫ ಮತ್ತು ಅರಸನಾಗಿದ್ದ ದಾವೀದನು ರಚಿಸಿದ್ದ ಹಾಡುಗಳನ್ನು ಗಾಯಕರು ಹಾಡಿ ದೇವರನ್ನು ಸ್ತುತಿಸಿದರು. ಹೀಗೆ ಜನರೆಲ್ಲಾ ಸಂತೋಷಪಟ್ಟರು. ಅವರೆಲ್ಲರು ಅಡ್ಡಬಿದ್ದು ದೇವರನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅರಸ ಹಿಜ್ಕೀಯನೂ ಪದಾಧಿಕಾರಿಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಸರ್ವೇಶ್ವರನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅರಸನಾದ ಹಿಜ್ಕೀಯನೂ ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು ಅವರು ಉತ್ಸಾಹದಿಂದ ಸ್ತುತಿಸುತ್ತಾ ಬೊಗ್ಗಿಕೊಂಡು ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇದಲ್ಲದೆ ಅರಸನಾದ ಹಿಜ್ಕೀಯನೂ, ಪ್ರಧಾನರೂ ದಾವೀದನ ಮಾತುಗಳಿಂದಲೂ, ಆಸಾಫನ ಕೀರ್ತನೆಗಳಿಂದಲೂ ಯೆಹೋವ ದೇವರನ್ನು ಸ್ತುತಿಸಬೇಕೆಂದು ಲೇವಿಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಮೊಣಕಾಲೂರಿಕೊಂಡು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:30
19 ತಿಳಿವುಗಳ ಹೋಲಿಕೆ  

ಯಾವಾಗಲೂ ಪ್ರಭುವಿನಲ್ಲಿ ಆನಂದಿಸಿರಿ; ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ನೀತಿವಂತರೇ, ಹರ್ಷಿಸಿರಿ; ಯೆಹೋವನಲ್ಲಿ ಆನಂದಿಸಿರಿ. ಶುದ್ಧಹೃದಯವುಳ್ಳವರೇ, ಉಲ್ಲಾಸಿಸಿರಿ.


ಇಸ್ರೇಲರು ತಮ್ಮ ಸೃಷ್ಟಿಕರ್ತನಲ್ಲಿ ಉಲ್ಲಾಸಿಸಲಿ! ಚೀಯೋನಿನ ಜನರು ತಮ್ಮ ರಾಜನಲ್ಲಿ ಹರ್ಷಿಸಲಿ.


ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ. ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.


(ಬಹುಕಾಲದ ಹಿಂದೆ, ದಾವೀದನು ಆಳುತ್ತಿದ್ದಾಗ ಆಸಾಫನು ಗಾಯಕರಿಗೆ ನಿರ್ದೇಶಕನಾಗಿದ್ದನು. ಅವನು ದೇವರಿಗಾಗಿ ಅನೇಕ ಕೃತಜ್ಞತಾಗೀತೆಗಳನ್ನೂ ಸ್ತುತಿಗೀತೆಗಳನ್ನೂ ರಚಿಸಿದ್ದನು.)


ದೇವಾಧಿದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದವರೆಗೂ ಇರುವ ಭೂನಿವಾಸಿಗಳೆಲ್ಲರನ್ನು ತನ್ನ ಸನ್ನಿಧಿಗೆ ಬರಲು ಆಜ್ಞಾಪಿಸುವನು.


ನಮ್ಮ ಪೂರ್ವಿಕರು ಆತನ ಆಜ್ಞೆಗಳನ್ನು ನಂಬಿ ಆತನನ್ನು ಸಂಕೀರ್ತಿಸಿದರು.


ಸೇರಿಬಂದ ಇಸ್ರೇಲ್ ಜನರೆಲ್ಲಾ ಆಕಾಶದಿಂದ ಬೆಂಕಿ ಬೀಳುವದನ್ನೂ ದೇವಾಲಯದಲ್ಲಿ ಯೆಹೋವನ ಮಹಿಮೆ ತುಂಬಿದ್ದನ್ನೂ ನೋಡಿ ನೆಲದ ಮೇಲೆ ಬೋರಲಬಿದ್ದು “ಯೆಹೋವನು ಒಳ್ಳೆಯವನು, ಅವನ ಕರುಣೆಯು ನಿರಂತರಕ್ಕೂ ಇರುವಂಥದ್ದು” ಎಂದು ಹೇಳುತ್ತಾ ದೇವರನ್ನು ಸುತ್ತಿಸಿ ಕೊಂಡಾಡಿದರು.


ಆ ಬಳಿಕ ಯೆಹೋಯಾದನು ದೇವಾಲಯದೊಳಗೆ ಸೇವೆಮಾಡುವ ಜವಾಬ್ದಾರಿಕೆಯನ್ನು ಕೆಲವು ಯಾಜಕರಿಗೆ ವಹಿಸಿದನು. ಅವರೆಲ್ಲಾ ಲೇವಿಯರಾಗಿದ್ದರು. ದಾವೀದನು ಅವರಿಗೆ ದೇವಾಲಯದ ಜವಾಬ್ದಾರಿಕೆಯನ್ನು ಕೊಟ್ಟಿದ್ದನು. ಮೋಶೆಯು ಕೊಟ್ಟಿದ್ದ ನಿಯಮಕ್ಕನುಸಾರವಾಗಿ ಅವರು ಸರ್ವಾಂಗಹೋಮವನ್ನು ಅರ್ಪಿಸಿದರು. ದಾವೀದನು ಆಜ್ಞಾಪಿಸಿದಂತೆ ಅವರು ಹೋಮಗಳನ್ನೂ ಯಜ್ಞಗಳನ್ನೂ ಅರ್ಪಿಸುವಾಗ ಹಾಡುತ್ತಾ ಸಂತೋಷದಿಂದ ತಮ್ಮ ಕೆಲಸವನ್ನು ಮಾಡಿದರು.


ಇಸ್ರೇಲರು ಜೆರುಸಲೇಮಿನಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸಗಳ ತನಕ ಆಚರಿಸಿದರು. ಅವರೆಲ್ಲಾ ಹರ್ಷದಿಂದ ತುಂಬಿ ಹಬ್ಬವನ್ನು ಆಚರಿಸಿದರು. ಯಾಜಕರೂ ಲೇವಿಯರೂ ಪ್ರತಿದಿನ ಗಟ್ಟಿಯಾಗಿ ಸ್ತುತಿಗೀತೆಗಳನ್ನು ಹಾಡಿದರು.


ಬಂದವರೆಲ್ಲರೂ ಇನ್ನೂ ಏಳು ದಿವಸ ಅಲ್ಲಿಯೇ ಇರಲು ಒಪ್ಪಿಕೊಂಡರು. ಇನ್ನೂ ಏಳು ದಿವಸ ಪಸ್ಕಹಬ್ಬ ಆಚರಿಸಲು ಅವರು ಸಂತೋಷಪಟ್ಟರು.


ಜೆರುಸಲೇಮಿನಲ್ಲಿ ಸಂತಸವು ತುಂಬಿತ್ತು. ಸೊಲೊಮೋನ್ ಅರಸನ ಸಮಯದಿಂದ ಅಂದಿನ ತನಕ ಅಂಥಾ ಹಬ್ಬವು ಆಚರಿಸಲ್ಪಟ್ಟಿರಲಿಲ್ಲ.


ಅನಂತರ ಇಸ್ರೇಲರೆಲ್ಲರೂ ಸೇರಿ ದೇವಾಲಯವನ್ನು ಅತ್ಯಂತ ಹರ್ಷದಿಂದ ಪ್ರತಿಷ್ಠೆ ಮಾಡಿದರು. ಸೆರೆವಾಸದಿಂದ ಹಿಂತಿರುಗಿ ಬಂದಿದ್ದ ಯಾಜಕರು, ಲೇವಿಯರು ಮತ್ತು ಎಲ್ಲಾ ಜನರು ಈ ಆಚರಣೆಯಲ್ಲಿ ಭಾಗವಹಿಸಿದರು.


ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಅವರು ಏಳು ದಿನಗಳ ತನಕ ಸಂತಸದಿಂದ ಆಚರಿಸಿದರು. ಯಾಕೆಂದರೆ ಅಶ್ಶೂರದ ಅರಸನ ಮನಸ್ಸನ್ನು ಮಾರ್ಪಡಿಸುವುದರ ಮೂಲಕ ಯೆಹೋವನು ಯೆಹೂದ್ಯರನ್ನು ಬಹಳ ಸಂತೋಷಗೊಳಿಸಿದ್ದನು. ಇಸ್ರೇಲ್ ದೇವರ ಆಲಯದ ಕಟ್ಟಡವು ಪೂರ್ಣಗೊಳ್ಳಲು ಅಶ್ಶೂರದ ಅರಸನು ಸಹಾಯ ಮಾಡಿದನು.


ಯೆಹೋವನನ್ನು ಆತನ ಸುಂದರವಾದ ಆಲಯದಲ್ಲಿ ಆರಾಧಿಸಿರಿ. ಭೂನಿವಾಸಿಗಳೆಲ್ಲರೇ, ಆತನನ್ನೇ ಆರಾಧಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು