Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:32 - ಪರಿಶುದ್ದ ಬೈಬಲ್‌

32 ಹೀಗೆ ಒಟ್ಟು ಎಪ್ಪತ್ತು ಹೋರಿಗಳನ್ನೂ ನೂರು ಟಗರುಗಳನ್ನೂ ಇನ್ನೂರು ಕುರಿಗಳನ್ನೂ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆಗಾಗಿಯೇ ಮೀಸಲಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಹೀಗೆ ಸಭಿಕರು ದಹನಬಲಿದಾನಕ್ಕಾಗಿ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಸರ್ವೇಶ್ವರನಿಗೆ ದಹನಬಲಿ ಸಮರ್ಪಣೆಗಾಗಿಯೇ ಕೊಡಲಾದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲಾ ಯೆಹೋವನಿಗೆ ಸರ್ವಾಂಗಹೋಮಸಮರ್ಪಣೆಗಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಸಭೆಯು ತಂದ ದಹನಬಲಿಗಳ ಲೆಕ್ಕವೇನೆಂದರೆ: ಎಪ್ಪತ್ತು ಹೋರಿಗಳು, ನೂರು ಟಗರುಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಯೆಹೋವ ದೇವರಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:32
10 ತಿಳಿವುಗಳ ಹೋಲಿಕೆ  

ಆ ದಿವಸ ಸರ್ವಾಂಗಹೋಮವಾಗಿ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ ನಾನೂರು ಕುರಿಮರಿಗಳನ್ನೂ ಸಮರ್ಪಿಸಿದರು. ಎಲ್ಲಾ ಇಸ್ರೇಲರ ದೋಷ ಪರಿಹಾರಕ್ಕಾಗಿ ಕುಲಕ್ಕೆ ಒಂದರಂತೆ ಹನ್ನೆರಡು ಹೋತಗಳನ್ನು ಅರ್ಪಿಸಿದರು.


ಮರುದಿವಸ ಜನರು ಯೆಹೋವನಿಗೆ ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಅರ್ಪಿಸಿದರು. ಒಂದು ಸಾವಿರ ಹೋರಿಗಳು, ಒಂದುಸಾವಿರ ಟಗರುಗಳು, ಒಂದುಸಾವಿರ ಆಡುಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಿದರು. ಇಡೀ ಇಸ್ರೇಲ್ ಜನಾಂಗಕ್ಕಾಗಿ ಯಜ್ಞವನ್ನರ್ಪಿಸಿದರು.


ಸೊಲೊಮೋನನು ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಒಂದು ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಸಮಾಧಾನಯಜ್ಞವನ್ನಾಗಿ ಅರ್ಪಿಸಿದನು. ಹೀಗೆ ರಾಜನು ಮತ್ತು ಇಸ್ರೇಲರು ಆಲಯವನ್ನು ಯೆಹೋವನಿಗೆ ಪ್ರತಿಷ್ಠಿಸಿದರು.


ರಾಜನಾದ ಸೊಲೊಮೋನನು ಯಜ್ಞವನ್ನು ಅರ್ಪಿಸಲು ಗಿಬ್ಯೋನಿಗೆ ಹೋದನು. ಅದು ಅತ್ಯಂತ ಮುಖ್ಯವಾದ ಎತ್ತರದ ಸ್ಥಳವಾದುದರಿಂದ ಅವನು ಅಲ್ಲಿಗೆ ಹೋದನು. ಸೊಲೊಮೋನನು ಒಂದು ಸಾವಿರ ಯಜ್ಞಗಳನ್ನು ಯಜ್ಞವೇದಿಕೆಯ ಮೇಲೆ ಅರ್ಪಿಸಿದನು.


ಹಿಜ್ಕೀಯನು ಜನರಿಗೆ, “ಯೆಹೂದದ ಜನರೇ, ನೀವೀಗ ನಿಮ್ಮನ್ನು ಯೆಹೋವನಿಗೆ ಒಪ್ಪಿಸಿದ್ದೀರಿ. ನೀವೀಗ ಬಂದು ದೇವಾಲಯದಲ್ಲಿ ನಿಮ್ಮನಿಮ್ಮ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎಂದು ಹೇಳಲು ಜನರು ತಮ್ಮ ಯಜ್ಞಗಳನ್ನು ಸಮರ್ಪಿಸಲು ಮುಂದೆ ಬಂದರು. ಸರ್ವಾಂಗಹೋಮ ಅರ್ಪಿಸಬೇಕೆಂದಿದ್ದವರು ಸರ್ವಾಂಗಹೋಮಗಳನ್ನು ಅರ್ಪಿಸಿದರು.


ಪವಿತ್ರ ಯಜ್ಞಕ್ಕಾಗಿ ಆರುನೂರು ಹೋರಿಗಳನ್ನೂ ಮೂರುಸಾವಿರ ಆಡುಕುರಿಗಳನ್ನೂ ಸಮರ್ಪಿಸಿದರು.


ಆ ದಿವಸ ಎಷ್ಟೋ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಪಾನದ್ರವ್ಯದ ಹೋಮಗಳನ್ನೂ ಸಮರ್ಪಿಸಿದರು. ಹೀಗೆ ದೇವಾಲಯದಲ್ಲಿ ಆರಾಧನೆಯು ಮತ್ತೆ ಪ್ರಾರಂಭವಾಯಿತು.


ಯೆಹೋವನು ಮೋಶೆಯನ್ನು ಕರೆದು ದೇವದರ್ಶನಗುಡಾರದೊಳಗಿಂದ ಅವನ ಸಂಗಡ ಮಾತಾಡಿದನು. ಯೆಹೋವನು ಹೀಗೆ ಹೇಳಿದನು:


“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.


ಆ ಬಳಿಕ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ದರು. ಯಾಜಕರೂ ಲೇವಿಯರೂ ನಾಚಿಕೆಯಿಂದ ತಮ್ಮನ್ನು ಸೇವೆಗಾಗಿ ಸಿದ್ಧಪಡಿಸಿಕೊಂಡು ಸರ್ವಾಂಗಹೋಮಕ್ಕಾಗಿ ಕಾಣಿಕೆಗಳನ್ನು ಯೆಹೋವನ ಮಂದಿರಕ್ಕೆ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು