2 ಪೂರ್ವಕಾಲ ವೃತ್ತಾಂತ 29:6 - ಪರಿಶುದ್ದ ಬೈಬಲ್6 ನಮ್ಮ ಪೂರ್ವಿಕರು ಯೆಹೋವನನ್ನು ತೊರೆದು ಆತನ ದೃಷ್ಟಿಯಲ್ಲಿ ಪಾಪಮಾಡಿದರು; ಆತನ ಆಲಯಕ್ಕೆ ವಿಮುಖರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಮ್ಮ ಪೂರ್ವಿಕರು ನಮ್ಮ ದೇವರಾದ ಯೆಹೋವನಿಗೆ ದ್ರೋಹಮಾಡಿ, ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ತೊರೆದುಬಿಟ್ಟರು. ಅವರು ಆತನ ನಿವಾಸ ಸ್ಥಳವನ್ನು ತೊರೆದು ವಿಮುಖರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿಮ್ಮ ಪೂರ್ವಜರು ನಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಮಾಡಿ ಅವರ ಚಿತ್ತಕ್ಕೆ ವಿರುದ್ಧ ನಡೆದು ಅವರನ್ನು ತೊರೆದುಬಿಟ್ಟರು; ಅವರ ನಿವಾಸ ಸ್ಥಳಕ್ಕೆ ಬೆನ್ನುಕೊಟ್ಟು ವಿಮುಖರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಮ್ಮ ಪಿತೃಗಳು ನಮ್ಮ ದೇವರಾದ ಯೆಹೋವನಿಗೆ ದ್ರೋಹ ಮಾಡಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ಬಿಟ್ಟರು. ಅವರು ಆತನ ನಿವಾಸ ಸ್ಥಳಕ್ಕೆ ಬೆನ್ನುಕೊಟ್ಟು ವಿಮುಖರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಏಕೆಂದರೆ ನಮ್ಮ ಪಿತೃಗಳು ಅಪನಂಬಿಗಸ್ತರಾಗಿ, ನಮ್ಮ ದೇವರಾದ ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ, ಅವರನ್ನು ಬಿಟ್ಟುಬಿಟ್ಟರು. ಇದಲ್ಲದೆ ಅವರು ಯೆಹೋವ ದೇವರ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ, ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ. ಅಧ್ಯಾಯವನ್ನು ನೋಡಿ |
ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ.
ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.
ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.
“ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು; ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ.
“ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನನ್ನು ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನ್ನು ಗೌರವಿಸುತ್ತಿದ್ದನೆಂಬುದು ನಿಮಗೆ ಗೊತ್ತು. ಅವನು ಯೆಹೋವನನ್ನು ಸಂತೋಷಪಡಿಸಲು ಬಯಸಿದನು. ಯೆಹೂದಕ್ಕೆ ಕೇಡನ್ನು ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ಕೇಡನ್ನು ಬರಮಾಡಲಿಲ್ಲ. ನಾವು ಯೆರೆಮೀಯನನ್ನು ಕೊಂದರೆ ಅನೇಕ ಕಷ್ಟಗಳನ್ನು ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”