8 ಆದ್ದರಿಂದ ಯೆಹೋವನು ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಬಹು ಕೋಪಗೊಂಡು ಅವರನ್ನು ಶಿಕ್ಷಿಸಿದನು. ಯೆಹೋವನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮಾಡಿದ್ದ ಸಂಗತಿಗಳನ್ನು ನೋಡಿದ ಅನ್ಯರು ಗೇಲಿ ಮಾಡುತ್ತ ವೈರತ್ವದಿಂದ ತಲೆಯಾಡಿಸಿದರು. ಇವೆಲ್ಲಾ ಸತ್ಯವೆಂದು ನಿಮಗೆ ತಿಳಿದದೆ. ಇದನ್ನು ನಿಮ್ಮ ಸ್ವಂತ ಕಣ್ಣುಗಳಿಂದ ನೋಡಿದ್ದೀರಿ.
ನಾನು ಈ ದ್ರಾಕ್ಷಾರಸವನ್ನು ಜೆರುಸಲೇಮಿನ ಮತ್ತು ಯೆಹೂದದ ಜನರಿಗೆ ಸುರಿದೆನು. ನಾನು ರಾಜನನ್ನು ಮತ್ತು ಯೆಹೂದದ ನಾಯಕರನ್ನು ಈ ಪಾತ್ರೆಯಲ್ಲಿಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು. ಅವರು ಬರಿದಾದ ಮರುಭೂಮಿಯಂತಾಗಲೆಂದು ಹೀಗೆ ಮಾಡಿದೆನು. ಆ ಸ್ಥಳವು ತುಂಬಾ ಹಾಳಾಗಲಿ, ಜನರು ಅದರ ಬಗ್ಗೆ ಸಿಳ್ಳುಹಾಕಲಿ, ಶಾಪಹಾಕಲಿ ಎಂಬ ಉದ್ದೇಶದಿಂದ ನಾನು ಹಾಗೆ ಮಾಡಿದೆನು. ಹಾಗೆಯೇ ಆಯಿತು. ಯೆಹೂದವು ಈಗ ಹಾಗೆಯೇ ಇದೆ.
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.
ಅರಸನೂ ಆ ನಾಯಕರುಗಳೂ ದೇವಾಲಯವನ್ನು ನಿರಾಕರಿಸಿ ಅಶೇರ ಸ್ತಂಭಗಳನ್ನೂ ಇತರ ವಿಗ್ರಹಗಳನ್ನೂ ಆರಾಧಿಸಿದರು. ಯೆಹೋವನು ಜೆರುಸಲೇಮಿನ ಮತ್ತು ಯೆಹೂದದ ಜನರ ಮೇಲೆ ಕೋಪಗೊಂಡನು. ಯಾಕೆಂದರೆ ಅರಸನೂ ಆ ನಾಯಕರುಗಳೂ ಯೆಹೋವನ ಮುಂದೆ ದೋಷಿಗಳಾಗಿದ್ದರು.
“ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.
ಈ ಆಲಯವನ್ನು ನಾಶಗೊಳಿಸುತ್ತೇನೆ. ಇದನ್ನು ನೋಡುವ ಪ್ರತಿಯೊಬ್ಬರೂ ವಿಸ್ಮಿತರಾಗುವರು. ‘ಈ ದೇಶಕ್ಕೂ ಈ ಆಲಯಕ್ಕೂ ಇಂತಹ ಭೀಕರ ಕಾರ್ಯವನ್ನು ಯೆಹೋವನು ಏಕೆ ಮಾಡಿದನು?’ ಎಂದು ಜನರು ಕೇಳುತ್ತಾರೆ.
ಜೆಕರ್ಯನ ಮೇಲೆ ದೇವರಾತ್ಮನು ಬಂದನು. ಅವನು ಯಾಜಕನಾದ ಯೆಹೋಯಾದನ ಮಗ. ಜೆಕರ್ಯನು ಜನರ ಮುಂದೆ ನಿಂತು, “ಯೆಹೋವನು ಹೀಗೆನ್ನುತ್ತಾನೆ: ‘ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲು ನೀವು ಏಕೆ ನಿರಾಕರಿಸುತ್ತೀರಿ? ಏತಕ್ಕೆ? ನೀವು ಉದ್ಧಾರವಾಗುವುದಿಲ್ಲ. ನೀವು ಯೆಹೋವನನ್ನು ತೊರೆದದ್ದರಿಂದ ಆತನು ನಿಮ್ಮನ್ನೂ ತೊರೆದುಬಿಟ್ಟಿರುತ್ತಾನೆ’” ಎಂದು ಹೇಳಿದನು.
ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದ ಕಾರಣ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಇದಕ್ಕೆ ನೀವೇ ಸಾಕ್ಷಿಗಳು.
“ಹೋಗಿ ನನ್ನ ವಿಷಯವಾಗಿಯೂ ಇಸ್ರೇಲ್ ಮತ್ತು ಯೆಹೂದದಲ್ಲಿರುವ ಜನರಿಗೋಸ್ಕರವಾಗಿಯೂ ಯೆಹೋವನಲ್ಲಿ ವಿಚಾರಿಸಿರಿ. ಯೆಹೋವನು ನಮ್ಮ ಮೇಲೆ ಕೋಪಗೊಂಡಿದ್ದಾನೆ. ಯಾಕೆಂದರೆ ನಮ್ಮ ಪೂರ್ವಿಕರು ಆತನ ಧರ್ಮಶಾಸ್ತ್ರದ ಪ್ರಕಾರ ನಡೆದುಕೊಂಡಿಲ್ಲ. ಈ ಪುಸ್ತಕದಲ್ಲಿ ಮಾಡಬೇಕೆಂದು ಹೇಳಿದ್ದನ್ನು ಅವರು ಮಾಡದೆ ಹೋಗಿದ್ದಾರೆ” ಎಂದು ಹೇಳಿದನು.
‘ಇದು ಏಕೆ ಸಂಭವಿಸಿತೆಂದರೆ, ಅವರು ತಮ್ಮ ದೇವರಾದ ಯೆಹೋವನನ್ನು ತ್ಯಜಿಸಿದರು. ಆತನು ಅವರ ಪೂರ್ವಿಕರನ್ನು ಈಜಿಪ್ಟಿನಿಂದ ಬರಮಾಡಿದನು. ಆದರೆ ಅವರು ಅನ್ಯದೇವರುಗಳನ್ನು ಅನುಸರಿಸಲು ತೀರ್ಮಾನಿಸಿದರು. ಅವರು ಆ ದೇವರುಗಳ ಪೂಜೆಯನ್ನೂ ಸೇವೆಯನ್ನೂ ಮಾಡಲಾರಂಭಿಸಿದರು. ಆದಕಾರಣವೇ ಈ ಕೆಟ್ಟಕಾರ್ಯಗಳೆಲ್ಲಾ ಅವರಿಗೆ ಸಂಭವಿಸುವಂತೆ ಯೆಹೋವನು ಮಾಡಿದನು’ ಎಂದು ಅನ್ಯಜನರು ಉತ್ತರಿಸುವರು.”
ನಿನ್ನ ಸುತ್ತಲೂ ಇರುವ ಜನಾಂಗಗಳು ನಿನಗೆ ಅವಮಾನ ಮಾಡಿ ಗೇಲಿ ಮಾಡುತ್ತವೆ. ನೀನು ಅವರಿಗೆ ಎಚ್ಚರಿಕೆಯಾಗಿಯೂ ಭಯೋತ್ಪಾದಕಕಾರಿಯಾಗಿಯೂ ಇರುವಿ. ನಾನು ನನ್ನ ಮಹಾಕೋಪದಿಂದ ನಿನ್ನನ್ನು ದಂಡಿಸಿದಾಗ ಇದು ಸಂಭವಿಸುವುದು. ಯೆಹೋವನಾದ ನಾನೇ ಇದನ್ನು ಹೇಳಿದ್ದೇನೆ.