Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 3:11 - ಪರಿಶುದ್ದ ಬೈಬಲ್‌

11 ಕೆರೂಬಿಗಳ ಒಂದೊಂದು ರೆಕ್ಕೆಯು ಐದೈದು ಮೊಳ ಉದ್ದವಿದ್ದವು. ರೆಕ್ಕೆಗಳ ಒಟ್ಟು ಉದ್ದ ಇಪ್ಪತ್ತು ಮೊಳ. ಕೆರೂಬಿಯ ಒಂದು ರೆಕ್ಕೆಯು ಗೋಡೆಗೆ ತಾಗಿತ್ತು; ಅದರ ಇನ್ನೊಂದು ರೆಕ್ಕೆಯು ಮತ್ತೊಂದು ಕೆರೂಬಿಯ ರೆಕ್ಕೆಯನ್ನು ತಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕೆರೂಬಿಗಳ ರೆಕ್ಕೆಗಳು ಒಟ್ಟು ಇಪ್ಪತ್ತು ಮೊಳ ಉದ್ದವಾಗಿದ್ದವು. ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಕೋಣೆಯ ಗೋಡೆಯವರೆಗೆ ತಗಲುತ್ತಿತ್ತು; ಐದು ಮೊಳ ಉದ್ದವಾದ ಇನ್ನೊಂದು ರೆಕ್ಕೆಯು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕೆರೂಬಿಗಳ ರೆಕ್ಕೆಗಳು ಒಟ್ಟಾಗಿ ಒಂಬತ್ತು ಮೀಟರ್ ಉದ್ದವಿದ್ದವು. (ಮೊದಲನೆಯ ಕೆರೂಬಿಯ) ಒಂದು ರೆಕ್ಕೆ 2:2 ಮೀಟರ್ ಉದ್ದವಾಗಿದ್ದು ಮನೆಯ ಗೋಡೆಗೆ ತಗಲುತ್ತಿತ್ತು. 2:2 ಮೀಟರ್ ಉದ್ದವಾದ ಇನ್ನೊಂದು ರೆಕ್ಕೆಯು ಎರಡನೆಯ ಕೆರೂಬಿಯ ರೆಕ್ಕೆಗೆ ತಗಲುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕೆರೂಬಿಗಳ ರೆಕ್ಕೆಗಳು ಒಟ್ಟಾಗಿ ಇಪ್ಪತ್ತು ಮೊಳ ಉದ್ದವಿದ್ದವು. [ಮೊದಲನೆಯ ಕೆರೂಬಿಯ] ಒಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಮನೆಯ ಗೋಡೆಗೆ ತಗುಲಿತು. ಐದು ಮೊಳ ಉದ್ದವಾದ ಇನ್ನೊಂದು ರೆಕ್ಕೆಯು ಎರಡನೆಯ ಕೆರೂಬಿಯ ರೆಕ್ಕೆಗೆ ತಗುಲಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕೆರೂಬಿಗಳ ರೆಕ್ಕೆಗಳು 9 ಮೀಟರ್ ಉದ್ದವಾಗಿದ್ದವು. ಒಂದು ರೆಕ್ಕೆಯು ಎರಡೂವರೆ ಮೀಟರ್ ಉದ್ದವಾಗಿದ್ದು, ಆಲಯದ ಗೋಡೆಯವರೆಗೆ ಮುಟ್ಟಿತ್ತು; ಮತ್ತೊಂದು ರೆಕ್ಕೆ ಎರಡೂವರೆ ಮೀಟರ್ ಉದ್ದವಾಗಿದ್ದು, ಇನ್ನೊಂದು ಕೆರೂಬಿಯ ರೆಕ್ಕೆಯವರೆಗೂ ಮುಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 3:11
4 ತಿಳಿವುಗಳ ಹೋಲಿಕೆ  

ಸೊಲೊಮೋನನು ಮಹಾಪವಿತ್ರ ಸ್ಥಾನದೊಳಗೆ ಇಡುವದಕ್ಕಾಗಿ ಎರಡು ಕೆರೂಬಿಗಳನ್ನು ಮಾಡಿಸಿ ಅವುಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು.


ಅಂತೆಯೇ ಎರಡನೆಯ ಕೆರೂಬಿಯ ಇನ್ನೊಂದು ರೆಕ್ಕೆಯು ಮತ್ತೊಂದು ಗೋಡೆಗೆ ತಾಗಿತ್ತು.


ಈ ಕೆರೂಬಿಗಳನ್ನು ಮಹಾಪವಿತ್ರ ಸ್ಥಳದಲ್ಲಿಟ್ಟರು. ಅವುಗಳು ಒಂದಕ್ಕೊಂದು ಸಮೀಪದಲ್ಲಿದ್ದವು. ಅವುಗಳ ರೆಕ್ಕೆಗಳು ಕೊಠಡಿಯ ಮಧ್ಯಭಾಗದಲ್ಲಿ ಒಂದನ್ನೊಂದು ತಾಕುತ್ತಿದ್ದವು. ಉಳಿದೆರಡು ರೆಕ್ಕೆಗಳು ಎರಡು ಕಡೆಗಳಲ್ಲಿದ್ದ ಗೋಡೆಗಳನ್ನು ತಾಕುತ್ತಿದ್ದವು.


ಆ ರೆಕ್ಕೆಗಳು ಒಂದಕ್ಕೊಂದು ತಾಕಿದ್ದವು. ಆ ಜೀವಿಗಳು ಚಲಿಸುವಾಗ ಅತ್ತಿತ್ತ ತಿರುಗುತ್ತಿರಲಿಲ್ಲ. ತಮ್ಮ ದೃಷ್ಟಿಯಿದ್ದ ಕಡಗೆ ನೆಟ್ಟಗೆ ಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು