Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 3:17 - ಪರಿಶುದ್ದ ಬೈಬಲ್‌

17 ಈ ಕಂಬಗಳನ್ನು ದೇವಾಲಯದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ನಿಲ್ಲಿಸಿದನು. ಬಲಗಡೆಯ ಕಂಬಕ್ಕೆ ಯಾಕೀನ್ ಎಂತಲೂ ಎಡಗಡೆಯ ಕಂಬಕ್ಕೆ ಬೋವಜ್ ಎಂತಲೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸ್ತಂಭಗಳನ್ನು ದೇವಾಲಯದ ಮುಂಭಾಗದಲ್ಲಿ, ಒಂದನ್ನು ಬಲಗಡೆಗೂ, ಇನ್ನೊಂದನ್ನು ಎಡಗಡೆಗೂ ನಿಲ್ಲಿಸಿದನು. ಬಲಗಡೆಯ ಕಂಬಕ್ಕೆ “ಯಾಕೀನ್” ಎಂದೂ ಎಡಗಡೆಯಿದ್ದ ಕಂಬಕ್ಕೆ “ಬೋವಜ್” ಎಂದೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ಕಂಬಗಳನ್ನು, ದೇವಾಲಯದ ಮುಂಭಾಗದಲ್ಲಿ ಒಂದನ್ನು ಬಲಗಡೆಗೂ, ಇನ್ನೊಂದನ್ನು ಎಡಗಡೆಗೂ ನಿಲ್ಲಿಸಿ, ಬಲಗಡೆಯದಕ್ಕೆ ‘ಯಾಕೀನ್’ ಎಂದೂ ಎಡಗಡೆಯದಕ್ಕೆ ‘ಬೋವಜ್’ ಎಂದೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಕಂಬಗಳನ್ನು ದೇವಾಲಯದ ಮುಂಭಾಗದಲ್ಲಿ ಒಂದನ್ನು ಬಲಗಡೆಗೂ ಇನ್ನೊಂದನ್ನು ಎಡಗಡೆಗೂ ನಿಲ್ಲಿಸಿ ಬಲಗಡೆಯದಕ್ಕೆ ಯಾಕೀನ್ ಎಂದೂ ಎಡಗಡೆಯದಕ್ಕೆ ಬೋವಜ್ ಎಂದೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆ ಸ್ತಂಭಗಳನ್ನು ಮಂದಿರದ ಮುಂಭಾಗದಲ್ಲಿ ಒಂದನ್ನು ಬಲಗಡೆಯಲ್ಲಿಯೂ, ಇನ್ನೊಂದನ್ನು ಎಡಗಡೆಯಲ್ಲಿಯೂ ನಿಲ್ಲಿಸಿದನು. ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ, ಎಡಗಡೆಯ ಸ್ತಂಭಕ್ಕೆ ಬೋವಾಜ್ ಎಂದೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 3:17
4 ತಿಳಿವುಗಳ ಹೋಲಿಕೆ  

ಹೀರಾಮನು ಈ ಹಿತ್ತಾಳೆಯ ಕಂಬಗಳನ್ನು ದೇವಾಲಯದ ಮಂಟಪದಲ್ಲಿ ಇಟ್ಟನು. ಒಂದು ಸ್ತಂಭವನ್ನು ಪ್ರವೇಶದ್ವಾರದ ದಕ್ಷಿಣದಿಕ್ಕಿನ ಕಡೆಯಲ್ಲೂ ಮತ್ತೊಂದನ್ನು ಉತ್ತರದಿಕ್ಕಿನ ಕಡೆಯಲ್ಲೂ ಇಟ್ಟನು. ದಕ್ಷಿಣದ ಸ್ತಂಭಕ್ಕೆ ಯಾಕೀನ್ ಎಂದು ಹೆಸರಿಟ್ಟನು. ಉತ್ತರದ ಸ್ತಂಭಕ್ಕೆ ಬೋವಜ್ ಎಂದು ಹೆಸರಿಟ್ಟನು.


ಸಿಮೆಯೋನನ ಮಕ್ಕಳು: ಯೆಮೂವೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ.


ಅವನು ಕೊರಳಿನ ಸರಗಳನ್ನು ಮಾಡಿಸಿ ಅವುಗಳನ್ನು ಕಂಬಗಳ ಮೇಲ್ಭಾಗದಲ್ಲಿ ಸಿಕ್ಕಿಸಿದನು. ಅವನು ನೂರು ದಾಳಿಂಬೆ ಹಣ್ಣುಗಳನ್ನು ಮಾಡಿಸಿ ತೂಗುಹಾಕಿದನು.


ಕೈಸಾಲೆಯು ಇಪ್ಪತ್ತು ಮೊಳ ಅಗಲ ಮತ್ತು ಹನ್ನೆರಡು ಮೊಳ ಉದ್ದವಾಗಿತ್ತು. ಆ ಕೈಸಾಲೆಯನ್ನು ಹತ್ತಲು ಹತ್ತು ಮೆಟ್ಟಿಲುಗಳಿದ್ದವು. ಕೈಸಾಲೆಯ ಇಕ್ಕೆಡೆಗಳಲ್ಲಿಯೂ ಗೋಡೆಗಳಿಗೆ ಸ್ತಂಭಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು