Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 3:5 - ಪರಿಶುದ್ದ ಬೈಬಲ್‌

5 ದೊಡ್ಡ ಕೋಣೆಯ ಗೋಡೆಗೆ ಸೊಲೊಮೋನನು ತುರಾಯಿ ಮರದ ಹಲಗೆಗಳಿಂದ ಹೊದಿಸಿ ಅದರ ಮೇಲೆ ಬಂಗಾರದ ತಗಡನ್ನು ಹೊದಿಸಿದನು. ಅದರಲ್ಲಿ ಖರ್ಜೂರ ಮರಗಳೂ ಸರಪಣಿಗಳೂ ಬಂಗಾರದಿಂದ ಮಾಡಲ್ಪಟ್ಟು ಜೋಡಿಸಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಗೆಗಳಿಂದ ಮುಚ್ಚಿ, ಅದನ್ನು ಶುದ್ಧ ಬಂಗಾರದಿಂದ ಹೊದಿಸಿ, ಆದರ ಹಲಗೆಗಳ ಮೇಲೆ ಖರ್ಜೂರದ ಮರಗಳನ್ನೂ ಬಳ್ಳಿಗಳನ್ನೂ ಸರಪಣಿಗಳನ್ನು ಕೆತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಗೆಗಳಿಂದಲೂ ಆ ಹಲಗೆಗಳನ್ನು ತೋರಣ, ಖರ್ಜೂರಗಳ ಚಿತ್ರಗಳುಳ್ಳ ಚೊಕ್ಕ ಬಂಗಾರದ ತಗಡಿನಿಂದಲೂ ಹೊದಿಸಿ, ಅದನ್ನು ರತ್ನಗಳಿಂದ ಅಲಂಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಿಗೆಗಳಿಂದಲೂ ಆ ಹಲಿಗೆಗಳನ್ನು ತೋರಣ ಖರ್ಜೂರಗಳ ಚಿತ್ರಗಳುಳ್ಳ ಚೊಕ್ಕಬಂಗಾರದ ತಗಡಿನಿಂದಲೂ ಹೊದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ದೊಡ್ಡ ತುರಾಯಿ ಮರಗಳಿಂದ ಮುಚ್ಚಿದ ಕೋಣೆಯನ್ನು ಶುದ್ಧ ಬಂಗಾರದಿಂದ ಹೊದಿಸಿ, ಅದರ ಮೇಲೆ ಖರ್ಜೂರದ ಗಿಡಗಳನ್ನೂ, ಸರಪಣಿಗಳನ್ನೂ ಕೆತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 3:5
6 ತಿಳಿವುಗಳ ಹೋಲಿಕೆ  

ದೇವಾಲಯವನ್ನು ಬೆಲೆಯುಳ್ಳ ರತ್ನಗಳಿಂದ ಅಲಂಕರಿಸಿದನು. ಸೊಲೊಮೋನನು ಪರ್ವಯಿಮ್ ದೇಶದ ಬಂಗಾರವನ್ನು ಉಪಯೋಗಿಸಿದನು.


ನಮ್ಮ ಮನೆಯ ತೊಲೆಗಳು ದೇವದಾರು ಮರದ ತೊಲೆಗಳು. ನಮ್ಮ ಮನೆಯ ಜಂತೆಗಳು ತುರಾಯಿ ಮರದ ಜಂತೆಗಳು.


ಪ್ರತೀ ಕಾವಲು ಮನೆಯ ಮೇಲ್ಗಡೆ ಸಣ್ಣ ಕಿಟಕಿಗಳು, ಗೋಡೆ ಮತ್ತು ಜಗಲಿಗಳು ಇದ್ದವು. ಕಿಟಕಿಯ ಅಗಲದ ಭಾಗವು ಪ್ರವೇಶದ್ವಾರಕ್ಕೆ ಮುಖ ಮಾಡಿದ್ದವು. ಪ್ರವೇಶದ್ವಾರದ ಎರಡೂ ಪಕ್ಕದಲ್ಲಿದ್ದ ಗೋಡೆಗಳ ಮೇಲೆ ಖರ್ಜೂರ ವೃಕ್ಷದ ಚಿತ್ರವನ್ನು ಕೆತ್ತಲಾಗಿತ್ತು.


ಕೆರೂಬಿದೂತರ ಮತ್ತು ಖರ್ಜೂರ ವೃಕ್ಷಗಳ ಚಿತ್ರ ಬಿಡಿಸಲ್ಪಟ್ಟಿತ್ತು. ಎರಡು ಕೆರೂಬಿದೂತರ ನಡುವೆ ಒಂದು ಖರ್ಜೂರ ವೃಕ್ಷವಿತ್ತು. ಪ್ರತಿ ಕೆರೂಬಿದೂತರಿಗೆ ಎರಡು ಮುಖಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು