Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 3:6 - ಪರಿಶುದ್ದ ಬೈಬಲ್‌

6 ದೇವಾಲಯವನ್ನು ಬೆಲೆಯುಳ್ಳ ರತ್ನಗಳಿಂದ ಅಲಂಕರಿಸಿದನು. ಸೊಲೊಮೋನನು ಪರ್ವಯಿಮ್ ದೇಶದ ಬಂಗಾರವನ್ನು ಉಪಯೋಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಮೂಲ್ಯವಾದ ರತ್ನದ ಕಲ್ಲುಗಳಿಂದ ಅಲಯವನ್ನು ಅಲಂಕರಿಸಿದನು. ಆದರ ಬಂಗಾರವು ಪರ್ವಯಿಮ್ ದೇಶದ ಬಂಗಾರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ಬಂಗಾರ ಪರ್ವಯಿಮ್ ದೇಶದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದನ್ನು ರತ್ನಗಳಿಂದ ಅಲಂಕರಿಸಿದನು. ಆ ಬಂಗಾರವು ಪರ್ವಯಿಮ್ ದೇಶದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಸೌಂದರ್ಯದ ನಿಮಿತ್ತವಾಗಿ ಅಮೂಲ್ಯವಾದ ರತ್ನಗಳಿಂದ ಆ ಆಲಯವನ್ನು ಮುಚ್ಚಿದನು. ಅದರ ಬಂಗಾರವು ಪರ್ವಯಿಮ್ ದೇಶದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 3:6
6 ತಿಳಿವುಗಳ ಹೋಲಿಕೆ  

ಯಾರ ಬಳಿಯಲ್ಲಿ ಬೆಲೆಬಾಳುವ ರತ್ನಗಳಿದ್ದವೋ ಅವುಗಳನ್ನು ದೇವರ ಆಲಯಕ್ಕಾಗಿ ಸಮರ್ಪಿಸಿದರು. ಗೇರ್ಷೋನ್ ಸಂತತಿಯವನಾದ ಯೆಹೀಯೇಲನು ಅವುಗಳನ್ನು ತನ್ನ ವಶಕ್ಕೆ ತೆಗೆದುಕೊಂಡನು.


ದೇವಾಲಯವನ್ನು ಕಟ್ಟಲು ಅದಕ್ಕೆ ಬೇಕಾದ ಬೆಳ್ಳಿ, ಬಂಗಾರ, ತಾಮ್ರ ಮುಂತಾದವುಗಳನ್ನು ಬಹು ಪ್ರಯಾಸದಿಂದ ಶೇಖರಿಸಿದ್ದೇನೆ. ಬಂಗಾರದಿಂದ ಮಾಡಬೇಕಾದ ಸಾಮಗ್ರಿಗಳಿಗೆ ಬೇಕಾದ ಬಂಗಾರವನ್ನು ಕೊಟ್ಟಿರುತ್ತೇನೆ. ಬೆಳ್ಳಿಯಿಂದ ತಯಾರಿಸಬೇಕಾದ ಸಾಮಗ್ರಿಗಳಿಗೆ ತಗಲುವ ಬೆಳ್ಳಿಯನ್ನು ಕೊಟ್ಟಿರುತ್ತೇನೆ. ಹಾಗೆಯೇ ತಾಮ್ರದ ವಸ್ತುಗಳಿಗೆ ಬೇಕಾಗುವ ತಾಮ್ರವನ್ನು ಕೊಟ್ಟಿದ್ದೇನೆ; ಕಬ್ಬಿಣದ ವಸ್ತುಗಳಿಗೆ ಬೇಕಾಗುವ ಕಬ್ಬಿಣವನ್ನು ಕೊಟ್ಟಿದ್ದೇನೆ; ಮರದಿಂದ ಮಾಡುವ ಸಾಮಗ್ರಿಗಳಿಗೆ ಬೇಕಾಗುವ ಮರವನ್ನು ಕೊಟ್ಟಿದ್ದೇನೆ; ನೀಲಿ ಬಣ್ಣದ ರತ್ನಗಳನ್ನು, ಚೌಕಟ್ಟಿಗೆ ಬೇಕಾದ ರತ್ನಗಳನ್ನು, ಹೊಳೆಯುವ ನಾನಾಬಣ್ಣದ ಹರಳುಗಳನ್ನು, ಬಿಳಿಬಣ್ಣದ ಹಾಲುಗಲ್ಲುಗಳನ್ನು ಬೇಕಾದಷ್ಟು ಸಂಗ್ರಹಿಸಿಟ್ಟಿದ್ದೇನೆ.


ದೊಡ್ಡ ಕೋಣೆಯ ಗೋಡೆಗೆ ಸೊಲೊಮೋನನು ತುರಾಯಿ ಮರದ ಹಲಗೆಗಳಿಂದ ಹೊದಿಸಿ ಅದರ ಮೇಲೆ ಬಂಗಾರದ ತಗಡನ್ನು ಹೊದಿಸಿದನು. ಅದರಲ್ಲಿ ಖರ್ಜೂರ ಮರಗಳೂ ಸರಪಣಿಗಳೂ ಬಂಗಾರದಿಂದ ಮಾಡಲ್ಪಟ್ಟು ಜೋಡಿಸಲ್ಪಟ್ಟಿದ್ದವು.


ದೇವಾಲಯದ ಗೋಡೆಯ ಒಳಭಾಗವನ್ನು ಸೊಲೊಮೋನನು ಬಂಗಾರದಿಂದ ಹೊದಿಸಿದನು ಮತ್ತು ಆಲಯದ ತೊಲೆ, ಹೊಸ್ತಿಲು, ಗೋಡೆ, ಕದ ಇವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು