2 ಪೂರ್ವಕಾಲ ವೃತ್ತಾಂತ 3:8 - ಪರಿಶುದ್ದ ಬೈಬಲ್8 ಸೊಲೊಮೋನನು ಮಹಾಪವಿತ್ರ ಸ್ಥಳವನ್ನು ತಯಾರಿಸಿದನು. ಅದು ಇಪ್ಪತ್ತು ಮೊಳ ಉದ್ದ ಮತ್ತು ಇಪ್ಪತ್ತು ಮೊಳ ಅಗಲವಿತ್ತು. ದೇವಾಲಯದ ಅಗಲದಷ್ಟೇ ಅದು ಅಗಲವಿತ್ತು. ಅದರ ಗೋಡೆಗಳನ್ನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು. ಆ ಬಂಗಾರವು ಇಪ್ಪತ್ತಮೂರು ಟನ್ ತೂಕವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ ಅವನು ಮಹಾಪರಿಶುದ್ಧ ಸ್ಥಳವನ್ನು ಕಟ್ಟಿಸಿದನು. ಅದರ ಉದ್ದವು, ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ; ಅದರ ಅಗಲವೂ ಇಪ್ಪತ್ತು ಮೊಳವಾಗಿತ್ತು. ಅದನ್ನು ಆರುನೂರು ತಲಾಂತು ಚೊಕ್ಕ ಬಂಗಾರದಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇದಲ್ಲದೆ, ಅವನು ‘ಮಹಾಪರಿಶುದ್ಧ ಸ್ಥಳವನ್ನು’ ಮಾಡಿಸಿದನು.ಅದರ ಉದ್ದ ಆಲಯದ ಅಗಲಕ್ಕೆ ಸರಿಯಾಗಿ ಒಂಬತ್ತು ಮೀಟರ್; ಅದರ ಅಗಲ ಒಂಬತ್ತು ಮೀಟರ್. ಅದನ್ನು ಸುಮಾರು 20 ಮೆಟ್ರಿಕ್ ಟನ್ ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ಅವನು ಮಹಾಪರಿಶುದ್ಧಸ್ಥಳವನ್ನು ಮಾಡಿಸಿದನು. ಅದರ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ; ಅದರ ಅಗಲವೂ ಇಪ್ಪತ್ತು ಮೊಳ. ಅದನ್ನು ಆರುನೂರು ತಲಾಂತು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವನು ಮಹಾಪರಿಶುದ್ಧವಾದ ಸ್ಥಳವನ್ನು ಕಟ್ಟಿದನು. ಅದರ ಉದ್ದವು ಆಲಯದ ಅಗಲದ ಪ್ರಕಾರ 9 ಮೀಟರ್; ಅದರ ಅಗಲ 9 ಮೀಟರ್. ಅವನು ಅದನ್ನು 20,000 ಕಿಲೋಗ್ರಾಂ ಶುದ್ಧ ಬಂಗಾರದಿಂದ ಹೊದಿಸಿದನು. ಅಧ್ಯಾಯವನ್ನು ನೋಡಿ |