Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:10 - ಪರಿಶುದ್ದ ಬೈಬಲ್‌

10 ಸಂದೇಶಕಾರರು ಎಫ್ರಾಯೀಮ್ ಮತ್ತು ಮನಸ್ಸೆ ಪ್ರಾಂತ್ಯಗಳ ಪ್ರತಿಯೊಂದು ಪಟ್ಟಣಗಳಿಗೆ ಹೋದರು. ಜೆಬುಲೂನ್ ಪ್ರಾಂತ್ಯಕ್ಕೂ ಹೋದರು. ಆದರೆ ಜನರು ಸಂದೇಶಕರನ್ನು ಗೇಲಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೂತರು ಎಫ್ರಯಿಮ್, ಮನಸ್ಸೆ, ಜೆಬುಲೂನ್ ಪ್ರಾಂತಗಳಲ್ಲಿ ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಆದರೆ ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೂತರು ಎಫ್ರಾಯೀಮ್ ಮನಸ್ಸೆ ಜೆಬುಲೂನ್ ಪ್ರಾಂತಗಳಲ್ಲಿ ಪಟ್ಟಣದಿಂದ ಪಟ್ಟಣಕ್ಕೆ ಹೋಗುತ್ತಿರಲು ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೀಗೆಯೇ ಓಟಗಾರರು ಎಫ್ರಾಯೀಮನ, ಮನಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ, ಪಟ್ಟಣ ಪಟ್ಟಣವನ್ನು ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:10
18 ತಿಳಿವುಗಳ ಹೋಲಿಕೆ  

ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.


ಅದಕ್ಕಾಗಿ ಸಂದೇಶಕರು ರಾಜನ ಪತ್ರವನ್ನು ಇಡೀ ಇಸ್ರೇಲ್ ಮತ್ತು ಯೆಹೂದ ಪ್ರಾಂತ್ಯದ ಜನರಿಗೆ ಕೊಟ್ಟರು. ಅದರಲ್ಲಿ ಹೀಗೆ ಬರೆದಿದ್ದನು: “ಇಸ್ರೇಲಿನ ಮಕ್ಕಳೇ, ಅಬ್ರಹಾಮನೂ ಇಸಾಕನೂ ಯಾಕೋಬನೂ ಆರಾಧಿಸಿದ ದೇವರಾದ ಯೆಹೋವನ ಕಡೆಗೆ ತಿರುಗಿರಿ. ಆಗ ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದವರ ಕಡೆಗೆ ಆತನು ತಿರುಗಿಕೊಳ್ಳುವನು.


ಕೆಲವರು ಇತರರಿಂದ ಅಪಹಾಸ್ಯಕ್ಕೆ ಗುರಿಯಾದರು, ಪೆಟ್ಟುಗಳನ್ನು ಅನುಭವಿಸಿದರು, ಸೆರೆವಾಸದಲ್ಲಿದ್ದರು.


ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ ಎಂಬ ಸಂಗತಿಯನ್ನು ಕೇಳಿದ ಆ ಜನರಲ್ಲಿ ಕೆಲವರು ಅಪಹಾಸ್ಯಮಾಡಿದರು. ಇತರರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ” ಎಂದು ಹೇಳಿದರು.


ಜನರು ನೋಡುತ್ತಾ ಅಲ್ಲಿ ನಿಂತಿದ್ದರು. ಯೆಹೂದ್ಯನಾಯಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು, “ಇವನು ದೇವರಿಂದ ಆರಿಸಲ್ಪಟ್ಟ ಕ್ರಿಸ್ತನಾಗಿದ್ದರೆ ತನ್ನನ್ನು ರಕ್ಷಿಸಿಕೊಳ್ಳಲಿ. ಇವನು ಬೇರೆಯವರನ್ನು ರಕ್ಷಿಸಿದನಲ್ಲವೇ?” ಅಂದರು.


ಫರಿಸಾಯರು ಈ ಎಲ್ಲಾ ಸಂಗತಿಗಳನ್ನು ಕೇಳುತ್ತಿದ್ದರು. ಫರಿಸಾಯರೆಲ್ಲರು ಹಣದಾಸೆ ಉಳ್ಳವರಾಗಿದ್ದರಿಂದ ಅವರು ಯೇಸುವನ್ನು ಟೀಕಿಸಿದರು.


ಆಗ ಜನರು ಯೇಸುವನ್ನು ಗೇಲಿಮಾಡಿದರು. ಏಕೆಂದರೆ ಆ ಹುಡುಗಿ ಸತ್ತುಹೋದಳೆಂದು ಅವರಿಗೆ ಖಂಡಿತವಾಗಿ ತಿಳಿದಿತ್ತು.


“ಈಗ ನನ್ನ ಸ್ನೇಹಿತರು ನನ್ನನ್ನು ನೋಡಿ ನಗುವರು. ಹೌದು, ನಾನು ದೇವರಿಗೆ ಪ್ರಾರ್ಥಿಸುವೆನು; ಆತನು ನನಗೆ ಉತ್ತರಿಸುವನು. ನಾನು ನೀತಿವಂತನಾಗಿದ್ದರೂ ನಿರ್ದೋಷಿಯಾಗಿದ್ದರೂ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ.


“ನನ್ನ ದಿನಗಳು ಓಟಗಾರನಿಗಿಂತಲೂ ವೇಗವಾಗಿ ಹೋಗುತ್ತಿವೆ. ಸುಖವಿಲ್ಲದ ನನ್ನ ದಿನಗಳು ಹಾರಿಹೋಗುತ್ತಿವೆ.


ಈ ಆಜ್ಞೆಯನ್ನು ಜನರಿಗೆ ತಲುಪಿಸಲು ಅರಸನು ಸಂದೇಶ ವಾಹಕರನ್ನು ಅವಸರಪಡಿಸಿದನು. ಶೂಷನ್ ನಗರದಲ್ಲೂ ಇದು ಪ್ರಕಟವಾಯಿತು.


ರಾಜನ ಆಜ್ಞೆಯ ಪ್ರಕಾರ ಮೊರ್ದೆಕೈ ರಾಜಶಾಸನವನ್ನು ಬರೆಯಿಸಿದನು. ಅದಕ್ಕೆ ರಾಜಮುದ್ರೆಯನ್ನು ಒತ್ತಿಸಿ ರಾಜನಿಗಾಗಿ ವಿಶೇಷವಾಗಿ ಬೆಳೆಸಿದ ಅತ್ಯಂತ ವೇಗವಾಗಿ ಓಡುವ ಕುದುರೆಗಳ ಮೂಲಕ ಸಂದೇಶವಾಹಕರಿಂದ ರಾಜ್ಯದ ಮೂಲೆ ಮೂಲೆಗೆ ರಾಜಾಜ್ಞೆಯನ್ನು ಕಳುಹಿಸಿದನು.


ರಾಜನ ಆಜ್ಞೆಯ ಪ್ರಕಾರ ಸಂದೇಶವಾಹಕರು ದೇಶದೇಶಗಳಿಗೆ ಚದರಿದರು. ರಾಜಧಾನಿಯಾದ ಶೂಷನ್ ನಗರದಲ್ಲೂ ಆ ಸಂದೇಶವನ್ನು ಪ್ರಕಟಿಸಲಾಯಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತರು. ಆದರೆ ರಾಜಧಾನಿಯಲ್ಲಿನ ಜನರು ಗಲಿಬಿಲಿಗೊಂಡಿದ್ದರು.


ರಾಜಾಜ್ಞೆಯನ್ನು ಹೊತ್ತ ಸಂದೇಶವಾಹಕರು ದೇಶದ ಎಲ್ಲಾ ಕಡೆಗಳಲ್ಲಿ ಹೊತ್ತುಕೊಂಡು ಬಂದರು. ಆ ಪತ್ರದಲ್ಲಿ ಹನ್ನೆರಡನೇ ತಿಂಗಳಿನ ಹದಿಮೂರನೇ ದಿವಸದಂದು ಆಯಾ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ಚಿಕ್ಕವರು ದೊಡ್ಡವರು ಎನ್ನದೆ ಕೊಂದು ಅವರ ವಸ್ತುಗಳನ್ನೆಲ್ಲ ಸೂರೆ ಮಾಡಬೇಕೆಂಬದಾಗಿ ಬರೆದಿತ್ತು.


ಆದರೆ ಹೋರೋಬಿನ ಸನ್ಬಲ್ಲಟನು, ಅಮ್ಮೋನಿಯ ಅಧಿಕಾರಿಯಾದ ಟೋಬೀಯ ಮತ್ತು ಅರಬಿಯವನಾದ ಗೆಷೆಮ್ ಇವರುಗಳು ನಾವು ಪೌಳಿ ಗೋಡೆಯನ್ನು ಕಟ್ಟುತ್ತೇವೆಂಬ ಸುದ್ಧಿಯನ್ನು ಕೇಳಿ ಅಸಹ್ಯವಾಗಿ ಗೇಲಿಮಾಡಿ, “ನೀವು ಮಾಡುತ್ತಿರುವುದೇನು? ರಾಜನಿಗೆ ವಿರುದ್ಧವಾಗಿ ದಂಗೆ ಏಳುತ್ತಿರುವಿರೋ?” ಎಂದು ಕೇಳಿದರು.


ಆದ್ದರಿಂದ ಲೋಟನು ಹೊರಗೆ ಹೋಗಿ, ತನ್ನ ಹೆಣ್ಣುಮಕ್ಕಳೊಡನೆ ನಿಶ್ಚಿತಾರ್ಥವಾಗಿದ್ದ ಅಳಿಯಂದಿರೊಡನೆ ಮಾತಾಡಿ, “ಬೇಗನೆ ಈ ಪಟ್ಟಣವನ್ನು ಬಿಟ್ಟು ಹೊರಡಿರಿ; ಯೆಹೋವನು ಈ ಪಟ್ಟಣವನ್ನು ನಾಶಮಾಡುವನು” ಎಂದು ಹೇಳಿದನು. ಲೋಟನ ಈ ಮಾತು ಅವರಿಗೆ ತಮಾಷೆಯಂತೆ ಕಂಡಿತು.


ಜನರು ದೇವಾಲಯದ ದುರಸ್ತಿಗಾಗಿ ಅರ್ಪಿಸಿದ್ದ ಕಾಣಿಕೆಯನ್ನು ಅವರು ಮಹಾಯಾಜಕನಾದ ಹಿಲ್ಕೀಯನಿಗೆ ತಂದುಕೊಟ್ಟರು. ಮನಸ್ಸೆ, ಎಫ್ರಾಯೀಮ್ ಮತ್ತು ಇಸ್ರೇಲ್ ರಾಜ್ಯದ ಜನರು ಕೊಟ್ಟ ಕಾಣಿಕೆಯನ್ನು ದ್ವಾರಪಾಲಕರಾದ ಲೇವಿಯರು ಒಟ್ಟುಗೂಡಿಸಿದರು. ಯೆಹೂದ, ಬೆನ್ಯಾಮೀನ್ ಕುಲದವರೂ ಜೆರುಸಲೇಮಿನಲ್ಲಿ ವಾಸಿಸುವರೂ ಕೊಟ್ಟ ಕಾಣಿಕೆಗಳನ್ನು ಅವರು ತೆಗೆದುಕೊಂಡರು.


ಆಗ ಚಿದ್ಕೀಯನು, “ನಾನು ಈಗಾಗಲೇ ಬಾಬಿಲೋನಿನ ಸೈನ್ಯದ ಕಡೆಗೆ ಸೇರಿದ ಯೆಹೂದ್ಯರಿಗೆ ಹೆದರುತ್ತೇನೆ. ಆ ಸೈನಿಕರು ನನ್ನನ್ನು ಯೆಹೂದದ ಆ ಜನರಿಗೆ ಒಪ್ಪಿಸಿಕೊಡಬಹುದು ಮತ್ತು ಅವರು ನನಗೆ ಕೇಡುಮಾಡಬಹುದು; ನನ್ನನ್ನು ಹಿಂಸಿಸಬಹುದು ಎಂದು ಭಯವಾಗುತ್ತದೆ” ಎಂದು ಯೆರೆಮೀಯನಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು