2 ಪೂರ್ವಕಾಲ ವೃತ್ತಾಂತ 30:11 - ಪರಿಶುದ್ದ ಬೈಬಲ್11 ಆದರೆ ಆಶೇರ್, ಮನಸ್ಸೆ ಮತ್ತು ಜೆಬುಲೂನ್ ಪ್ರಾಂತ್ಯಗಳ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಜೆರುಸಲೇಮಿಗೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕೆಲವು ಮಂದಿ ಆಶೇರ್ಯರೂ, ಮನಸ್ಸೆಯವರೂ, ಜೆಬುಲೂನ್ಯರೂ ಮಾತ್ರ ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕೆಲವು ಮಂದಿ ಆಶೇರ್ಯರು, ಮನಸ್ಸೆಯವರು ಹಾಗು ಜೆಬುಲೂನ್ಯರು ಮಾತ್ರ ದೀನಮನಸ್ಕರಾಗಿ ಜೆರುಸಲೇಮಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕೆಲವು ಮಂದಿ ಆಶೇರ್ಯರೂ ಮನಸ್ಸೆಯವರೂ ಜೆಬುಲೂನ್ಯರೂ ಮಾತ್ರ ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇವಿುಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೂ ಆಶೇರ್, ಮನಸ್ಸೆ, ಜೆಬುಲೂನ್, ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು. ಅಧ್ಯಾಯವನ್ನು ನೋಡಿ |
ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್ ಮತ್ತು ಜೆಬುಲೂನಿನಿಂದ ಬಂದಿದ್ದ ಎಷ್ಟೋ ಮಂದಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಸಿದ್ಧಮಾಡಿಕೊಂಡಿರಲಿಲ್ಲ. ಅವರು ಪಸ್ಕದ ಕುರಿಮರಿಯನ್ನು ಯೋಗ್ಯವಾದ ರೀತಿಯಲ್ಲಿ ತಿನ್ನಲಿಲ್ಲ. ಆದರೆ ಹಿಜ್ಕೀಯನು ಅಂಥವರಿಗೋಸ್ಕರವಾಗಿ, “ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ಇವರು ಯೋಗ್ಯವಾದ ರೀತಿಯಲ್ಲಿ ನಿನ್ನನ್ನು ಆರಾಧಿಸಲು ಬಂದಿದ್ದಾರೆ. ಆದರೆ ಧರ್ಮಶಾಸ್ತ್ರದ ಪ್ರಕಾರ ಅವರು ತಮ್ಮನ್ನು ಶುದ್ಧ ಮಾಡಿಕೊಳ್ಳಲಿಲ್ಲ. ದಯಮಾಡಿ ಅವರನ್ನು ಕ್ಷಮಿಸು. ನಮ್ಮ ಪಿತೃಗಳು ವಿಧೇಯರಾಗಿದ್ದ ದೇವರೇ, ಜನರು ಮೋಶೆಯ ನಿಯಮಕ್ಕನುಸಾರವಾಗಿ ತಮ್ಮನ್ನು ಶುದ್ಧಿ ಮಾಡಿಕೊಂಡಿಲ್ಲದಿದ್ದರೂ ನೀನು ಅವರನ್ನು ದಯವಿಟ್ಟು ಕ್ಷಮಿಸು” ಎಂದು ಪ್ರಾರ್ಥಿಸಿದನು.
ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.