Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:15 - ಪರಿಶುದ್ದ ಬೈಬಲ್‌

15 ಆ ಬಳಿಕ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ದರು. ಯಾಜಕರೂ ಲೇವಿಯರೂ ನಾಚಿಕೆಯಿಂದ ತಮ್ಮನ್ನು ಸೇವೆಗಾಗಿ ಸಿದ್ಧಪಡಿಸಿಕೊಂಡು ಸರ್ವಾಂಗಹೋಮಕ್ಕಾಗಿ ಕಾಣಿಕೆಗಳನ್ನು ಯೆಹೋವನ ಮಂದಿರಕ್ಕೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು.ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಮೇಲೆ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನ ಪಾಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ವಧಿಸಿದರು. ಯಾಜಕರೂ ಲೇವಿಯರೂ, ಮೊದಲನೆಯ ಸಾರಿ ತಪ್ಪಿದ್ದಕ್ಕಾಗಿ ನಾಚಿಕೆಪಟ್ಟು, ತಮ್ಮನ್ನು ಶುದ್ಧಪಡಿಸಿಕೊಂಡರು. ಸರ್ವೇಶ್ವರನ ಆಲಯದಲ್ಲಿ ದಹನಬಲಿಗಳನ್ನು ಸಮರ್ಪಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಮೇಲೆ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ವಧಿಸಿದರು. ಯಾಜಕರೂ ಲೇವಿಯರೂ [ಮೊದಲನೆಯ ಸಾರಿ ತಪ್ಪಿದ್ದಕ್ಕಾಗಿ] ನಾಚಿಕೆಪಟ್ಟು ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಎರಡನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು. ಯಾಜಕರೂ, ಲೇವಿಯರೂ ನಾಚಿಕೆಪಟ್ಟು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯದೊಳಗೆ ದಹನಬಲಿಗಳನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:15
16 ತಿಳಿವುಗಳ ಹೋಲಿಕೆ  

ಅಲ್ಲಿ ಪಶುಗಳನ್ನು ವಧಿಸಿ ಅದರ ಚರ್ಮಸುಲಿದು ಯಜ್ಞಕ್ಕಾಗಿ ಸಿದ್ಧಪಡಿಸಲು ಸಾಕಷ್ಟು ಯಾಜಕರು ಇರಲಿಲ್ಲ. ಆಗ ಅವರ ಬಂಧುಗಳಾದ ಲೇವಿಯರು ಬಂದು ಆ ಕೆಲಸ ಮುಗಿಯುವ ತನಕ ಅವರಿಗೆ ಸಹಾಯಮಾಡಿದರು. ಯೆಹೋವನ ಸೇವೆಗೆ ತಮ್ಮನ್ನು ಸಿದ್ಧಪಡಿಸಿಕೊಳ್ಳಲು ಲೇವಿಯರು ಯಾಜಕರಿಗಿಂತ ಹೆಚ್ಚು ಉತ್ಸುಕತೆಯಲ್ಲಿದ್ದರು.


ಲೇವಿಯರ ಹೆಂಡತಿಯರಿಗೂ ಮಕ್ಕಳಿಗೂ ಎಲ್ಲರಿಗೂ ಅದರಲ್ಲಿ ಪಾಲು ದೊರೆಯಿತು. ಯಾರ್ಯಾರ ಹೆಸರುಗಳು ಲೇವಿಯರ ಕುಟುಂಬದ ಪಟ್ಟಿಯಲ್ಲಿ ಬರೆಯಲ್ಪಟ್ಟಿತ್ತೊ ಅವರೆಲ್ಲರಿಗೆ ಪಾಲು ದೊರೆಯಿತು. ಯಾಕೆಂದರೆ ಲೇವಿಯರು ತಮ್ಮನ್ನು ದೇವಾಲಯದ ಸೇವೆಗೆ ಯಾವಾಗಲೂ ಸಿದ್ಧಪಡಿಸಿಕೊಳ್ಳುತ್ತಿದ್ದರು.


ಯೆಹೂದದ ಅರಸನಾದ ಹಿಜ್ಕೀಯನು ಸೇರಿಬಂದ ಜನರಿಗೆ ಒಂದು ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ವಧಿಸಿ ತಿನ್ನಲು ಕೊಟ್ಟನು. ಪ್ರಧಾನರು ಒಂದು ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಸೇರಿಬಂದ ಜನರಿಗೆ ಕೊಟ್ಟರು. ಎಷ್ಟೋ ಮಂದಿ ಯಾಜಕರು ಪವಿತ್ರ ಸೇವೆಗೆ ತಮ್ಮನ್ನು ಶುದ್ಧಪಡಿಸಿಕೊಂಡರು.


ಈ ಲೇವಿಯರೆಲ್ಲಾ ಒಟ್ಟಾಗಿ ಸೇರಿ ತಮ್ಮ ಸಹೋದರರೊಂದಿಗೆ ದೇವಾಲಯದ ಪವಿತ್ರ ಸೇವೆಯನ್ನು ಆರಂಭಿಸಲು ಸಿದ್ಧರಾದರು; ಅರಸನ ಮೂಲಕವಾಗಿ ಬಂದ ದೇವರ ಆಜ್ಞೆಗೆ ವಿಧೇಯರಾದರು; ದೇವಾಲಯವನ್ನು ಶುದ್ಧೀಕರಿಸಲು ಪ್ರಾರಂಭಿಸಿದರು.


ಅಲ್ಲಿ ನೆರೆದುಬಂದಿದ್ದ ಯಾಜಕರೆಲ್ಲರೂ ಯಾವ ವರ್ಗವ್ಯತ್ಯಾಸವಿಲ್ಲದೆ ಆಚಾರಕ್ಕನುಸಾರವಾಗಿ ತಮ್ಮನ್ನು ಶುದ್ಧೀಕರಿಸಿಕೊಂಡರು. ಬಳಿಕ ಅವರು ಪವಿತ್ರ ಸ್ಥಳದಿಂದ ಹೊರಬಂದು ಒಟ್ಟಾಗಿ ನಿಂತುಕೊಂಡರು.


ಮಾತ್ರವಲ್ಲದೆ ನನ್ನ ಸಮೀಪಕ್ಕೆ ಬರುವ ಯಾಜಕರು ಈ ವಿಶೇಷ ಸಂದರ್ಶನಕ್ಕಾಗಿ ತಮ್ಮನ್ನು ಸಿದ್ಧಪಡಿಸಿಕೊಳ್ಳಬೇಕೆಂದು ಹೇಳು. ಇಲ್ಲವಾದರೆ ನಾನು ಅವರನ್ನೂ ಶಿಕ್ಷಿಸುವೆನು” ಅಂದನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ಈ ದಿನ ಮತ್ತು ನಾಳೆ ನೀನು ಜನರನ್ನು ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧಪಡಿಸಬೇಕು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು


ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆ ವೇಳೆಯಲ್ಲಿ ಪಸ್ಕಹಬ್ಬವನ್ನು ಆಚರಿಸಬೇಕು. ಆ ಸಮಯದಲ್ಲಿ ಅವರು ಪಸ್ಕದ ಕುರಿಮರಿಯ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳೊಡನೆ ಮತ್ತು ಕಹಿಯಾದ ಸೊಪ್ಪುಗಳೊಡನೆ ಊಟಮಾಡಬೇಕು.


ಹಿಜ್ಕೀಯ ಅರಸನೂ ಅಧಿಕಾರಿಗಳೂ ಜೆರುಸಲೇಮಿನ ಸಭೆಯವರೆಲ್ಲರೂ ಎರಡನೆಯ ತಿಂಗಳಲ್ಲಿ ಹಬ್ಬವನ್ನು ಆಚರಿಸಲು ನಿರ್ಧರಿಸಿದರು.


ಅದಕ್ಕೆ ಕಾರಣವೇನೆಂದರೆ, ನಿಯಮಿತ ದಿವಸದಲ್ಲಿ ಹಬ್ಬ ನಡೆಸಲು ಸಾಧ್ಯವಾಗಲಿಲ್ಲ. ಯಾಕೆಂದರೆ ಬೇಕಾದಷ್ಟು ಯಾಜಕರು ಆ ಪರಿಶುದ್ಧ ಸೇವೆಗಾಗಿ ತಮ್ಮನ್ನು ಸಿದ್ಧಪಡಿಸಿಕೊಂಡಿರಲಿಲ್ಲ. ಅಲ್ಲದೆ ಜೆರುಸಲೇಮಿನಲ್ಲಿಯೂ ಜನ ಸೇರಿ ಬರಲಿಲ್ಲ.


ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಮಾಡಿಕೊಂಡು ಹಬ್ಬವನ್ನು ಆಚರಿಸಲು ಸಿದ್ಧರಾದರು. ಪಸ್ಕದ ಕುರಿಮರಿಯನ್ನು ಎಲ್ಲಾ ಇಸ್ರೇಲರಿಗಾಗಿಯೂ ತಮಗಾಗಿಯೂ ಯಾಜಕರಿಗಾಗಿಯೂ ಲೇವಿಯರು ವಧಿಸಿದರು.


ಹೀಗೆ ಒಟ್ಟು ಎಪ್ಪತ್ತು ಹೋರಿಗಳನ್ನೂ ನೂರು ಟಗರುಗಳನ್ನೂ ಇನ್ನೂರು ಕುರಿಗಳನ್ನೂ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿದರು.


ಜೆರುಸಲೇಮಿನಲ್ಲಿ ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲು ಎಷ್ಟೋ ಮಂದಿ ಜೆರುಸಲೇಮಿಗೆ ಎರಡನೆಯ ತಿಂಗಳಲ್ಲಿ ಬಂದರು. ಅದು ಮಹಾ ಜನಸಮೂಹವಾಗಿತ್ತು.


ಪಸ್ಕದ ಕುರಿಮರಿಯನ್ನು ವಧಿಸಿ ಯೆಹೋವನಿಗಾಗಿ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಿಮ್ಮ ಸೋದರರಾದ ಇಸ್ರೇಲರಿಗೆ ಕುರಿಮರಿಯನ್ನು ಸಿದ್ಧಮಾಡಿರಿ. ಯೆಹೋವನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿರಿ. ಆತನು ಮೋಶೆಯ ಮೂಲಕ ನಮಗೆ ಈ ವಿಧಿನಿಯಮಗಳನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು