2 ಪೂರ್ವಕಾಲ ವೃತ್ತಾಂತ 30:16 - ಪರಿಶುದ್ದ ಬೈಬಲ್16 ಮೋಶೆಯ ಕಟ್ಟಳೆಯ ಪ್ರಕಾರವಾಗಿ ಅವರು ತಮ್ಮತಮ್ಮ ಸ್ಥಾನಗಳಲ್ಲಿ ನಿಂತುಕೊಂಡು ಸೇವೆ ನಡಿಸಿದರು. ಲೇವಿಯರು ರಕ್ತವನ್ನು ಯಾಜಕರಿಗೆ ಕೊಟ್ಟರು. ಯಾಜಕರು ಆ ರಕ್ತವನ್ನು ವೇದಿಕೆಯ ಮೇಲೆ ಚಿಮಿಕಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೈವಪುರುಷನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ, ಸೇವೆಯನ್ನು ಸಲ್ಲಿಸಿದರು. ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆಯ ನಿಯಮದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು, ಯಾಜಕರು, ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು. ಅಧ್ಯಾಯವನ್ನು ನೋಡಿ |