2 ಪೂರ್ವಕಾಲ ವೃತ್ತಾಂತ 30:17 - ಪರಿಶುದ್ದ ಬೈಬಲ್17 ಜನಸಮೂಹದವರಲ್ಲಿ ಎಷ್ಟೋ ಮಂದಿ ಪವಿತ್ರ ಸೇವೆಗಾಗಿ ತಮ್ಮನ್ನು ಸಿದ್ಧಮಾಡಿಕೊಂಡಿರಲಿಲ್ಲ. ಆದ್ದರಿಂದ ಪಸ್ಕದ ಕುರಿಯನ್ನು ಅವರು ವಧಿಸಲಾಗಲಿಲ್ಲ. ಲೇವಿಯರೇ ಅವರ ಬದಲಾಗಿ ಪಸ್ಕದ ಕುರಿಯನ್ನು ವಧಿಸಿದರು. ಹೀಗೆ ಲೇವಿಯರು ಪ್ರತಿಯೊಂದು ಕುರಿಯನ್ನು ದೇವರಿಗಾಗಿ ಪರಿಶುದ್ಧಗೊಳಿಸಿ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದುದರಿಂದ ಅಶುದ್ಧರಾದವರೆಲ್ಲರ, ಪಸ್ಕಹಬ್ಬದ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಜನಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಪಡಿಸಿಕೊಳ್ಳದೆ ಇದ್ದುದರಿಂದ, ಅಶುದ್ಧರಾಗಿದ್ದವರೆಲ್ಲರ ಬಲಿಪಶುಗಳು ಸರ್ವೇಶ್ವರನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು. ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದದರಿಂದ ಅಶುದ್ಧರಾದವರೆಲ್ಲರ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಜನರಲ್ಲಿ ಅನೇಕರು ಅಪರಿಶುದ್ಧರಾಗಿದ್ದರು. ಆದ್ದರಿಂದ ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವುದಕ್ಕೆ ಇದ್ದರು. ಅಧ್ಯಾಯವನ್ನು ನೋಡಿ |