Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:2 - ಪರಿಶುದ್ದ ಬೈಬಲ್‌

2 ಹಿಜ್ಕೀಯ ಅರಸನೂ ಅಧಿಕಾರಿಗಳೂ ಜೆರುಸಲೇಮಿನ ಸಭೆಯವರೆಲ್ಲರೂ ಎರಡನೆಯ ತಿಂಗಳಲ್ಲಿ ಹಬ್ಬವನ್ನು ಆಚರಿಸಲು ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಎರಡನೆಯ ತಿಂಗಳಿನಲ್ಲಿ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಆಚರಿಸಬೇಕೆಂದು ಅರಸನು, ಪದಾಧಿಕಾರಿಗಳು ಅಭಿಪ್ರಾಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯಾಜಕರಲ್ಲಿ ತಕ್ಕಷ್ಟು ಮಂದಿ ತಮ್ಮನ್ನು ಶುದ್ಧಪಡಿಸಿಕೊಂಡಿರಲಿಲ್ಲ. ಜನರು ಜೆರುಸಲೇಮಿನಲ್ಲಿ ಇನ್ನೂ ಕೂಡಿಬಂದಿರಲಿಲ್ಲವಾದುದರಿಂದ ಪಾಸ್ಕವನ್ನು ಕೂಡಲೆ ಆಚರಿಸಲಾಗದೆಂದು ಅರಸನು, ಅವನ ಪದಾಧಿಕಾರಿಗಳು ಹಾಗು ಜೆರುಸಲೇಮಿನ ಸರ್ವಸಂಘದವರು ತಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾಜಕರಲ್ಲಿ ತಕ್ಕಷ್ಟು ಮಂದಿ ತಮ್ಮನ್ನು ಶುದ್ಧಪಡಿಸಿಕೊಂಡಿರಲಿಲ್ಲವಾದದರಿಂದಲೂ ಜನರು ಯೆರೂಸಲೇವಿುನಲ್ಲಿ ಇನ್ನೂ ಕೂಡಿರಲಿಲ್ಲವಾದದರಿಂದಲೂ ಕೂಡಲೆ ಪಸ್ಕವನ್ನು ಆಚರಿಸಲಾಗದೆಂದು ಅರಸನೂ ಅವನ ಸರದಾರರೂ ಯೆರೂಸಲೇವಿುನ ಸರ್ವಸಂಘದವರೂ ತಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆರೂಸಲೇಮಿನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೆಯ ತಿಂಗಳಲ್ಲಿ ಪಸ್ಕವನ್ನು ಆಚರಿಸಲು ತೀರ್ಮಾನಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:2
11 ತಿಳಿವುಗಳ ಹೋಲಿಕೆ  

ಜ್ಞಾನಿಯಾದ ಬಡಯುವಕನು ಎಚ್ಚರದ ಮಾತಿಗೆ ಕಿವಿಗೊಡದ ಮೂಢ ವೃದ್ಧರಾಜನಿಗಿಂತ ಉತ್ತಮ.


ಆಲೋಚನೆಯಿಲ್ಲದ ಯೋಜನೆಗಳು ವಿಫಲವಾಗುತ್ತವೆ. ಆಲೋಚಿಸಿ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ.


ಜ್ಞಾನದ ಮಾರ್ಗದರ್ಶನವಿಲ್ಲದ ದೇಶವು ಬಿದ್ದುಹೋಗುವುದು. ಆದರೆ ಒಳ್ಳೆಯ ಸಲಹೆಗಾರರನ್ನು ಹೊಂದಿರುವ ದೇಶವು ಕ್ಷೇಮವಾಗಿರುವುದು.


ಆ ಬಳಿಕ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ದರು. ಯಾಜಕರೂ ಲೇವಿಯರೂ ನಾಚಿಕೆಯಿಂದ ತಮ್ಮನ್ನು ಸೇವೆಗಾಗಿ ಸಿದ್ಧಪಡಿಸಿಕೊಂಡು ಸರ್ವಾಂಗಹೋಮಕ್ಕಾಗಿ ಕಾಣಿಕೆಗಳನ್ನು ಯೆಹೋವನ ಮಂದಿರಕ್ಕೆ ತಂದರು.


ಜೆರುಸಲೇಮಿನಲ್ಲಿ ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲು ಎಷ್ಟೋ ಮಂದಿ ಜೆರುಸಲೇಮಿಗೆ ಎರಡನೆಯ ತಿಂಗಳಲ್ಲಿ ಬಂದರು. ಅದು ಮಹಾ ಜನಸಮೂಹವಾಗಿತ್ತು.


ಅರಸನಾದ ಹಿಜ್ಕೀಯನು ಯೆಹೂದದವರಿಗೂ ಇಸ್ರೇಲರಿಗೂ ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳವರಿಗೂ ಸಂದೇಶ ಕಳುಹಿಸಿ, ಯೆಹೋವನ ಆಲಯಕ್ಕೆ ಬಂದು ಇಸ್ರೇಲಿನ ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸುವಂತೆ ಅವರನ್ನೆಲ್ಲಾ ಆಮಂತ್ರಿಸಿದನು.


ನ್ಯಾಯಾಧೀಶರು ಇಸ್ರೇಲನ್ನು ಆಳಿದ ದಿನಗಳಿಂದ ಜನರು ಪಸ್ಕಹಬ್ಬವನ್ನು ಈ ರೀತಿಯಲ್ಲಿ ಆಚರಿಸಿರಲಿಲ್ಲ. ಇಸ್ರೇಲಿನ ರಾಜರುಗಳಾಗಲಿ ಇಲ್ಲವೆ ಯೆಹೂದದ ರಾಜರುಗಳಾಗಲಿ ಈ ರೀತಿ ಪಸ್ಕಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿರಲಿಲ್ಲ.


ಸೊಲೊಮೋನನು ಇಸ್ರೇಲರನ್ನೂ ಅಂದರೆ ನ್ಯಾಯಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಸೇನಾಧಿಪತಿಗಳನ್ನೂ ಕುಲಪ್ರಧಾನರನ್ನೂ ಕರೆಯಿಸಿ ಅವರೊಂದಿಗೆ ಗಿಬ್ಯೋನಿನ ಉನ್ನತಸ್ಥಳಕ್ಕೆ ಹೋದನು. ದೇವದರ್ಶನಗುಡಾರವು ಅಲ್ಲಿತ್ತು. ಅರಣ್ಯದಲ್ಲಿ ಇಸ್ರೇಲರು ಪ್ರಯಾಣಿಸುತ್ತಿದ್ದಾಗ ಯೆಹೋವನ ಸೇವಕನಾದ ಮೋಶೆಯು ಗುಡಾರವನ್ನು ಮಾಡಿಸಿದ್ದನು.


ಅರಸನಾದ ಯೋಷೀಯನು ಯೆಹೋವನಿಗೆ ಪಸ್ಕಹಬ್ಬವನ್ನು ಜೆರುಸಲೇಮಿನಲ್ಲಿ ಆಚರಿಸಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯು ವಧಿಸಲ್ಪಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು