Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:22 - ಪರಿಶುದ್ದ ಬೈಬಲ್‌

22 ದೇವರ ಸೇವೆ ಮಾಡುವದನ್ನು ತಿಳಿದಿದ್ದ ಲೇವಿಯರನ್ನು ಹಿಜ್ಕೀಯನು ಪ್ರೋತ್ಸಾಹಿಸಿದನು. ಜನರು ಏಳು ದಿವಸ ಹಬ್ಬವನ್ನು ಆಚರಿಸಿ ಸಮಾಧಾನಯಜ್ಞವನ್ನು ಸಮರ್ಪಿಸಿದರು; ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹಿಜ್ಕೀಯನು ಸರ್ವೇಶ್ವರನ ಸೇವೆಯಲ್ಲಿ ನಿಪುಣರಾದ ಎಲ್ಲ ಲೇವಿಯರನ್ನು ಪುರಸ್ಕರಿಸಿದನು. ನೇಮಕವಾದ ಏಳು ದಿನಗಳವರೆಗೂ ಜನರು ಶಾಂತಿಸಮಾಧಾನ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹಿಜ್ಕೀಯನು ಯೆಹೋವನ [ಭಜನೆಯಲ್ಲಿ] ಗಟ್ಟಿಗರಾಗಿದ್ದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತಾಡಿದನು. ನೇಮಕವಾದ ಏಳು ದಿವಸಗಳವರೆಗೂ ಜನರು ಸಮಾಧಾನಯಜ್ಞಗಳನ್ನರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹಿಜ್ಕೀಯನು ಯೆಹೋವ ದೇವರ ಕಾರ್ಯಗಳಲ್ಲಿ ಒಳ್ಳೆಯ ತಿಳುವಳಿಕೆಯನ್ನು ಹೊಂದಿದ್ದ ಸಮಸ್ತ ಲೇವಿಯರೊಡನೆ ಉತ್ತೇಜನದ ಮಾತುಗಳಿಂದ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳವರೆಗೂ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ಔತಣಮಾಡಿ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:22
23 ತಿಳಿವುಗಳ ಹೋಲಿಕೆ  

ಮೂರು ತಾಸಿನ ತನಕ ಅವರು ನಿಂತುಕೊಂಡೇ ತಮ್ಮ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೇಳಿದರು; ಇನ್ನು ಮೂರು ತಾಸಿನ ತನಕ ತಮ್ಮತಮ್ಮ ಪಾಪಗಳನ್ನು ಅರಿಕೆ ಮಾಡಿಕೊಂಡು ತಮ್ಮ ದೇವರಾದ ಯೆಹೋವನಿಗೆ ತಲೆಬಾಗಿ ಆರಾಧಿಸಿದರು.


ಹಿಜ್ಕೀಯನು ಸೈನಿಕರಿಗೆಲ್ಲಾ ದಳಪತಿಗಳನ್ನು ನೇಮಿಸಿದನು. ಜೆರುಸಲೇಮಿನ ನಗರದ ಹೆಬ್ಬಾಗಿಲ ಬಳಿಯಲ್ಲಿದ್ದ ಮೈದಾನದಲ್ಲಿ ಹಿಜ್ಕೀಯನು ಸೇನಾಪತಿಗಳೊಂದಿಗೆ ಸಮಾಲೋಚನೆ ನಡಿಸಿದನು; ಅವರನ್ನು ಪ್ರೋತ್ಸಾಹಿಸಿ ಹುರಿದುಂಬಿಸಿದನು. “ಧೈರ್ಯಶಾಲಿಗಳಾಗಿರಿ, ಬಲಗೊಳ್ಳಿರಿ, ಅಶ್ಶೂರದ ಅರಸನಿಗಾಗಲಿ ಅರಸನೊಂದಿಗಿರುವ ಆ ದೊಡ್ಡ ಸೈನ್ಯಕ್ಕಾಗಲಿ ಭಯಪಡಬೇಡಿರಿ. ಅವನಿಗಿಂತಲೂ ಹೆಚ್ಚಾದ ಸಾಮರ್ಥ್ಯ ನಮಗಿದೆ.


ಈಗ ನೀವು ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿರುವುದಾಗಿ ಅರಿಕೆ ಮಾಡಬೇಕು. ಆತನೇ ನಮ್ಮ ಪೂರ್ವಿಕರ ದೇವರಾದ ಯೆಹೋವನು. ಆತನ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು. ನಿಮ್ಮ ಅನ್ಯಜಾತಿಯ ಹೆಂಡತಿಯರಿಂದಲೂ ನಿಮ್ಮ ಸುತ್ತಲು ವಾಸಿಸುವ ಅನ್ಯ ಜನಾಂಗದವರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ.”


ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.


ಅಷ್ಟೇ ಅಲ್ಲ, ನನ್ನ ಪ್ರಭುವಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ಎಲ್ಲಾ ಸಂಗತಿಗಳಿಗಿಂತಲೂ ಅತಿಶ್ರೇಷ್ಠವಾದದ್ದೆಂದು ನನಗೆ ಮನದಟ್ಟಾಗಿದೆ. ನಾನು ಯಾವುದನ್ನು ಮುಖ್ಯವಾದವುಗಳೆಂದು ಪರಿಗಣಿಸಿದ್ದೆನೋ ಅವುಗಳನ್ನೆಲ್ಲ ಕ್ರಿಸ್ತನ ನಿಮಿತ್ತ ಕಳೆದುಕೊಂಡೆನು. ಅವುಗಳೆಲ್ಲ ನಿಷ್ಪ್ರಯೋಜಕವಾದವುಗಳೆಂದು ನನಗೆ ತಿಳಿದಿದೆ.


“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


“ಆದ್ದರಿಂದ ನಾನು (ಯೆಹೋವನು) ಆಕೆಯೊಂದಿಗೆ ಸರಸ ಸಲ್ಲಾಪವಾಡುವೆನು. ಆಕೆಯನ್ನು ಮರುಭೂಮಿಗೆ ನಡೆಸಿ ಆಕೆಯೊಂದಿಗೆ ನಯನುಡಿಗಳಿಂದ ಮಾತಾಡುವೆನು.


ಕೇಳಿರಿ! ಶ್ರೇಷ್ಠವಾದವುಗಳನ್ನೂ ಯಥಾರ್ಥವಾದವುಗಳನ್ನೂ ನಿಮಗೆ ತಿಳಿಸುವೆನು.


ಆ ಹಬ್ಬದ ದಿನಗಳ ಪ್ರತಿಯೊಂದು ದಿನದಲ್ಲಿ ಎಜ್ರನು ಧರ್ಮಶಾಸ್ತ್ರ ಪಾರಾಯಣ ಮಾಡಿದನು. ಮೊದಲನೆ ದಿನದಿಂದ ಪ್ರಾರಂಭಿಸಿ ಕಡೆಯ ದಿನದ ತನಕ ಇಸ್ರೇಲರೆಲ್ಲರೂ ಈ ಹಬ್ಬವನ್ನು ಏಳು ದಿನಗಳವರೆಗೆ ಆಚರಿಸಿದರು. ಎಂಟನೆಯ ದಿನದಲ್ಲಿ ಧರ್ಮಶಾಸ್ತ್ರದ ಪ್ರಕಾರ ವಿಶೇಷಕೂಟಗಳಿಗಾಗಿ ಜನರು ಒಟ್ಟಾಗಿ ಸೇರಿಬಂದರು.


ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.


ಧರ್ಮಶಾಸ್ತ್ರವನ್ನು ಓದಲೂ, ಅಭ್ಯಾಸಿಸಲೂ ಮತ್ತು ಅದಕ್ಕೆ ವಿಧೇಯನಾಗಲು ಎಜ್ರನು ತನ್ನ ಸಮಯವನ್ನೆಲ್ಲಾ ವಿನಿಯೋಗಿಸಿದನು. ಯೆಹೋವನ ಆಜ್ಞೆಗಳನ್ನು, ವಿಧಿನಿಯಮಗಳನ್ನು ಇಸ್ರೇಲ್ ಜನರಿಗೆ ಕಲಿಸಬೇಕೆಂಬ ಇಚ್ಫೆ ಅವನಲ್ಲಿತ್ತು. ಯೆಹೋವನ ಕಟ್ಟಳೆಗಳಿಗೆ ವಿಧೇಯರಾಗುವಂತೆ ಇಸ್ರೇಲರೆಲ್ಲರಿಗೆ ಸಹಾಯ ಮಾಡಬೇಕೆಂಬ ಅಭಿಲಾಷೆಯು ಅವನಲ್ಲಿತ್ತು.


ಎಲ್ಲಾ ಇಸ್ರೇಲರಿಗೆ ಉಪದೇಶಿಸತಕ್ಕವರೂ ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ ಯೋಷೀಯನು, “ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಸೊಲೊಮೋನನು ಕಟ್ಟಿದ ದೇವಾಲಯದೊಳಗೆ ಇಡಿರಿ. ಸೊಲೊಮೋನನು ಇಸ್ರೇಲಿನ ರಾಜನಾದ ದಾವೀದನ ಮಗ. ಆ ಪೆಟ್ಟಿಗೆಯನ್ನು ನಿಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಸ್ಥಳದಿಂದ ಸ್ಥಳಕ್ಕೆ ಹೋಗಬೇಡಿ; ನಿಮ್ಮ ದೇವರಾದ ಯೆಹೋವನ ಸೇವೆಮಾಡಿರಿ; ದೇವಜನರಾದ ಇಸ್ರೇಲರ ಸೇವೆಮಾಡಿರಿ.


ಇವರೆಲ್ಲಾ ಯೆಹೂದದ ಜನರಿಗೆ ಯೆಹೋವನ ಧರ್ಮೋಪದೇಶ ಪುಸ್ತಕದಿಂದ ಆತನ ಕಟ್ಟಳೆ ವಿಧಿನಿಯಮಗಳನ್ನು ಯೆಹೂದದ ಪಟ್ಟಣಗಳಲ್ಲೆಲ್ಲಾ ಸಂಚರಿಸಿ ಕಲಿಸಿದರು.


ಬಹಳಕಾಲದ ತನಕ ಇಸ್ರೇಲರಲ್ಲಿ ನಿಜವಾದ ದೇವರಿರಲಿಲ್ಲ; ಬೋಧಕನಿರಲಿಲ್ಲ; ಧರ್ಮಶಾಸ್ತ್ರವೂ ಇರಲಿಲ್ಲ.


ಅವರು ಯಾಕೋಬ ವಂಶದವರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು; ನಿನ್ನ ಕಟ್ಟಳೆಗಳನ್ನು ಇಸ್ರೇಲರಿಗೆ ಬೋಧಿಸುವರು. ಅವರು ನಿನ್ನ ಸನ್ನಿಧಾನದಲ್ಲಿ ಧೂಪಹಾಕುವರು. ಬಲಿಪೀಠದಲ್ಲಿ ನಿನಗೆ ಯಜ್ಞಾರ್ಪಣೆ ಮಾಡುವರು.


ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ಇಸ್ರೇಲಿನ ದೇವರಾದ ಯೆಹೋವನನ್ನು ಸನ್ಮಾನಿಸು; ಆತನಿಗೆ ಸ್ತೋತ್ರಸಲ್ಲಿಸು. ನಿನ್ನ ಪಾಪಗಳನ್ನು ಆತನಿಗೆ ಅರಿಕೆಮಾಡು. ನೀನು ಮಾಡಿದ್ದನ್ನು ನನಗೆ ಹೇಳು; ನನ್ನಿಂದ ಏನನ್ನೂ ಮುಚ್ಚಿಡಬೇಡ” ಎಂದನು.


ದೇವರು ನಮ್ಮ ಸಂಗಡವಿದ್ದ ಕಾರಣ, ಇದ್ದೋವಿನ ಸಂಬಂಧಿಕರು ಇವರನ್ನು ಕಳುಹಿಸಿಕೊಟ್ಟರು: ಮಹ್ಲೀಯ ಸಂತತಿಯವರಲ್ಲಿ ಜಾಣನಾದ ಶೇರೇಬ್ಯ, ಮಹ್ಲೀಯು ಲೇವಿಯ ವಂಶದವನಾಗಿದ್ದನು. ಲೇವಿಯು ಇಸ್ರೇಲನ ಒಬ್ಬ ಮಗನಾಗಿದ್ದನು. ಅವರು ಸಹ ತಮ್ಮ ಗಂಡುಮಕ್ಕಳನ್ನು ಮತ್ತು ಸಹೋದರರನ್ನು ಕಳುಹಿಸಿದರು. ಒಟ್ಟಿನಲ್ಲಿ ಆ ಕುಟುಂಬದಿಂದ 18 ಮಂದಿ ಗಂಡಸರಿದ್ದರು.


ಆದ್ದರಿಂದ ಭಯಪಡದಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಪೋಷಿಸುತ್ತೇನೆ” ಎಂದು ಹೇಳಿದನು. ಯೋಸೇಫನು ತನ್ನ ಸಹೋದರರೊಂದಿಗೆ ಸೌಮ್ಯವಾಗಿ ಮಾತನಾಡಿದ್ದರಿಂದ ಅವರಿಗೆ ತುಂಬ ಸಂತೋಷವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು