23 ಜುದೇಯದ ಅರಸ ಹಿಜ್ಕೀಯನು ಸಾವಿರ ಹೋರಿಗಳನ್ನು, ಏಳು ಸಾವಿರ ಕುರಿಗಳನ್ನು, ಪದಾಧಿಕಾರಿಗಳು ಸಾವಿರ ಹೋರಿಗಳನ್ನು ಹಾಗು ಹತ್ತು ಸಾವಿರ ಕುರಿಗಳನ್ನು ಜನರಿಗೆ ದಾನಮಾಡಿದರು; ಯಾಜಕರಲ್ಲಿ ಬಹುಮಂದಿ ತಮ್ಮನ್ನು ಶುದ್ಧಪಡಿಸಿಕೊಂಡರು.
23 ಯೆಹೂದದ ಅರಸನಾದ ಹಿಜ್ಕೀಯನು ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಪ್ರಭುಗಳು ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ತಮಗೆ ಯಜ್ಞಕ್ಕಾಗಿ ದಾನಮಾಡಿದ್ದರಿಂದಲೂ ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿದ್ದರಿಂದಲೂ
ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!
ಏಳು ದಿನ ಹಬ್ಬದ ಆಚರಣೆಯ ಬಳಿಕ ಎಂಟನೆಯ ದಿನವನ್ನು ಪವಿತ್ರ ದಿನವನ್ನಾಗಿ ಆಚರಿಸಿದರು. ಅವರು ಯಜ್ಞವೇದಿಕೆಯನ್ನು ಯೆಹೋವನ ಆರಾಧನೆಗೋಸ್ಕರ ಪ್ರತಿಷ್ಠಿಸಿದರು. ಹಬ್ಬವನ್ನು ಏಳು ದಿನಗಳ ತನಕ ಆಚರಿಸಿದರು.
ಯೆಹೂದದ ಅರಸನಾದ ಹಿಜ್ಕೀಯನು ಸೇರಿಬಂದ ಜನರಿಗೆ ಒಂದು ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ವಧಿಸಿ ತಿನ್ನಲು ಕೊಟ್ಟನು. ಪ್ರಧಾನರು ಒಂದು ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಸೇರಿಬಂದ ಜನರಿಗೆ ಕೊಟ್ಟರು. ಎಷ್ಟೋ ಮಂದಿ ಯಾಜಕರು ಪವಿತ್ರ ಸೇವೆಗೆ ತಮ್ಮನ್ನು ಶುದ್ಧಪಡಿಸಿಕೊಂಡರು.
ರಾಜನಾದ ಹಿಜ್ಕೀಯನು ಮತ್ತು ಅವನ ಅಧಿಕಾರಿಗಳು ಯೆಹೋವನಿಗೆ ಸ್ತೋತ್ರ ಮಾಡಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಆಸಾಫ ಮತ್ತು ಅರಸನಾಗಿದ್ದ ದಾವೀದನು ರಚಿಸಿದ್ದ ಹಾಡುಗಳನ್ನು ಗಾಯಕರು ಹಾಡಿ ದೇವರನ್ನು ಸ್ತುತಿಸಿದರು. ಹೀಗೆ ಜನರೆಲ್ಲಾ ಸಂತೋಷಪಟ್ಟರು. ಅವರೆಲ್ಲರು ಅಡ್ಡಬಿದ್ದು ದೇವರನ್ನು ಆರಾಧಿಸಿದರು.
ಸೆರೆವಾಸದಿಂದ ಮರಳಿಬಂದ ಇಸ್ರೇಲರು ಬಿಡಾರಗಳನ್ನು ಹಾಕಿಕೊಂಡು ಅವುಗಳಲ್ಲಿ ವಾಸಿಸಿದರು. ನೂನನ ಮಗನಾದ ಯೆಹೋಶುವನ ಕಾಲದಿಂದ ಇಂದಿನವರೆಗೂ ಇಸ್ರೇಲರು ಇಂಥ ಪರ್ಣಶಾಲೆಗಳ ಹಬ್ಬವನ್ನು ಆಚರಿಸಲಿಲ್ಲ. ಪ್ರತಿಯೊಬ್ಬರೂ ಬಹು ಸಂತೋಷಗೊಂಡಿದ್ದರು.