2 ಪೂರ್ವಕಾಲ ವೃತ್ತಾಂತ 30:24 - ಪರಿಶುದ್ದ ಬೈಬಲ್24 ಯೆಹೂದದ ಅರಸನಾದ ಹಿಜ್ಕೀಯನು ಸೇರಿಬಂದ ಜನರಿಗೆ ಒಂದು ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ವಧಿಸಿ ತಿನ್ನಲು ಕೊಟ್ಟನು. ಪ್ರಧಾನರು ಒಂದು ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಸೇರಿಬಂದ ಜನರಿಗೆ ಕೊಟ್ಟರು. ಎಷ್ಟೋ ಮಂದಿ ಯಾಜಕರು ಪವಿತ್ರ ಸೇವೆಗೆ ತಮ್ಮನ್ನು ಶುದ್ಧಪಡಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಹೂದದ ಅರಸನಾದ ಹಿಜ್ಕೀಯನು ಹಿಂಡುಗಳಿಂದ ಸಾವಿರ ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ, ಪದಾಧಿಕಾರಿಗಳು ಸಾವಿರ ಹೋರಿಗಳನ್ನೂ, ಹತ್ತು ಸಾವಿರ ಕುರಿಗಳನ್ನೂ ಯಜ್ಞಕ್ಕಾಗಿ ದಾನಮಾಡಿದರು. ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಈ ಕಾರಣ, ಸಮೂಹದವರು ಇನ್ನೂ ಏಳು ದಿವಸ ಹಬ್ಬಮಾಡಬೇಕೆಂದು ತೀರ್ಮಾನಿಸಿಕೊಂಡರು. ಆ ಏಳು ದಿನಗಳಲ್ಲಿಯೂ ಬಹಳವಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಸಮೂಹದವರು ಇನ್ನೂ ಏಳು ದಿವಸ ಹಬ್ಬಮಾಡಬೇಕೆಂದು ಗೊತ್ತುಮಾಡಿಕೊಂಡು ಆ ಏಳು ದಿನಗಳಲ್ಲಿಯೂ ಬಹಳವಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ 1,000 ಹೋರಿಗಳನ್ನೂ 7,000 ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ 1,000 ಹೋರಿಗಳನ್ನೂ 10,000 ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡರು. ಅಧ್ಯಾಯವನ್ನು ನೋಡಿ |
ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಧಿಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಧಿಪತಿಯು ಪಾಪಪರಿಹಾರಕಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಬೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಧಿಪತಿಯು ಈ ಕಾಣಿಕೆಗಳನ್ನು ಕೊಡಬೇಕು.”