2 ಪೂರ್ವಕಾಲ ವೃತ್ತಾಂತ 30:25 - ಪರಿಶುದ್ದ ಬೈಬಲ್25 ಯೆಹೂದದ ಜನರೆಲ್ಲರೂ ಲೇವಿಯರೂ ಇಸ್ರೇಲಿನಿಂದ ಬಂದ ಜನರೂ ಮತ್ತು ಇಸ್ರೇಲಿನಿಂದ ಬಂದು ಯೆಹೂದದಲ್ಲಿ ನೆಲೆಸಿದ್ದ ವಿದೇಶಿಯರೂ ಹಬ್ಬವನ್ನು ಆಚರಿಸಿ ಬಹಳವಾಗಿ ಸಂತೋಷಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೆಹೂದ್ಯರ ಸರ್ವಸಮೂಹದವರೂ, ಯಾಜಕರು, ಲೇವಿಯರೂ, ಇಸ್ರಾಯೇಲ್ ಪ್ರಾಂತ್ಯಗಳಿಂದ ಸೇರಿಬಂದವರೆಲ್ಲರೂ ಹಾಗು ಇಸ್ರಾಯೇಲ್ ಯೆಹೂದ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಯೆಹೂದ್ಯರ ಸರ್ವಸಮೂಹದವರು, ಯಾಜಕರು, ಲೇವಿಯರು ಇಸ್ರಯೇಲ್ ಪ್ರಾಂತಗಳಿಂದ ನೆರೆದುಬಂದವರು ಎಲ್ಲರು ಹಾಗು ಇಸ್ರಯೇಲ್, ಜುದೇಯ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗಾರರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಯೆಹೂದ್ಯರ ಸರ್ವಸಮೂಹದವರೂ ಯಾಜಕರೂ ಲೇವಿಯರೂ ಇಸ್ರಾಯೇಲ್‍ಪ್ರಾಂತಗಳಿಂದ ನೆರೆದುಬಂದವರೆಲ್ಲರೂ ಇಸ್ರಾಯೇಲ್ ಯೆಹೂದ ಪ್ರಾಂತಗಳಲ್ಲಿದ್ದ ಪ್ರವಾಸಿಗಳೂ ಈ ಉತ್ಸವದಲ್ಲಿ ಪಾಲುಗಾರರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯೆಹೂದದ ಸಮೂಹದವರೆಲ್ಲರೂ ಯಾಜಕರೂ, ಲೇವಿಯರೂ, ಇಸ್ರಾಯೇಲಿನಿಂದ ಬಂದ ಸಮಸ್ತ ಜನರೂ, ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ, ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು. ಅಧ್ಯಾಯವನ್ನು ನೋಡಿ |
ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್ ಮತ್ತು ಜೆಬುಲೂನಿನಿಂದ ಬಂದಿದ್ದ ಎಷ್ಟೋ ಮಂದಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಸಿದ್ಧಮಾಡಿಕೊಂಡಿರಲಿಲ್ಲ. ಅವರು ಪಸ್ಕದ ಕುರಿಮರಿಯನ್ನು ಯೋಗ್ಯವಾದ ರೀತಿಯಲ್ಲಿ ತಿನ್ನಲಿಲ್ಲ. ಆದರೆ ಹಿಜ್ಕೀಯನು ಅಂಥವರಿಗೋಸ್ಕರವಾಗಿ, “ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ಇವರು ಯೋಗ್ಯವಾದ ರೀತಿಯಲ್ಲಿ ನಿನ್ನನ್ನು ಆರಾಧಿಸಲು ಬಂದಿದ್ದಾರೆ. ಆದರೆ ಧರ್ಮಶಾಸ್ತ್ರದ ಪ್ರಕಾರ ಅವರು ತಮ್ಮನ್ನು ಶುದ್ಧ ಮಾಡಿಕೊಳ್ಳಲಿಲ್ಲ. ದಯಮಾಡಿ ಅವರನ್ನು ಕ್ಷಮಿಸು. ನಮ್ಮ ಪಿತೃಗಳು ವಿಧೇಯರಾಗಿದ್ದ ದೇವರೇ, ಜನರು ಮೋಶೆಯ ನಿಯಮಕ್ಕನುಸಾರವಾಗಿ ತಮ್ಮನ್ನು ಶುದ್ಧಿ ಮಾಡಿಕೊಂಡಿಲ್ಲದಿದ್ದರೂ ನೀನು ಅವರನ್ನು ದಯವಿಟ್ಟು ಕ್ಷಮಿಸು” ಎಂದು ಪ್ರಾರ್ಥಿಸಿದನು.