2 ಪೂರ್ವಕಾಲ ವೃತ್ತಾಂತ 30:27 - ಪರಿಶುದ್ದ ಬೈಬಲ್27 ಯಾಜಕರು ಮತ್ತು ಲೇವಿಯರು ಎದ್ದುನಿಂತು ಜನರನ್ನು ಯೆಹೋವನು ಆಶೀರ್ವದಿಸುವಂತೆ ಕೇಳಿಕೊಂಡರು. ದೇವರು ಪರಲೋಕದ ತನ್ನ ಪವಿತ್ರ ನಿವಾಸಕ್ಕೆ ಬಂದ ಆ ಪ್ರಾರ್ಥನೆಗೆ ಕಿವಿಗೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಯಾಜಕರು ಆಗಿದ್ದ ಲೇವಿಯರು ಆಮೇಲೆ ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಸ್ವರ ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆ ಪರಲೋಕದಲ್ಲಿರುವ ಆ ದೇವರ ಪರಿಶುದ್ಧ ನಿವಾಸಕ್ಕೆ ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಸ್ವರವು [ದೇವರಿಗೆ] ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಗ ಯಾಜಕರೂ ಲೇವಿಯರೂ ಎದ್ದು ಜನರನ್ನು ಆಶೀರ್ವದಿಸಿದರು. ದೇವರು ಅವರ ಪ್ರಾರ್ಥನೆಯನ್ನು ಕೇಳಿದರು. ಅವರ ಪ್ರಾರ್ಥನೆಯು ದೇವರ ಪರಿಶುದ್ಧ ನಿವಾಸ ಸ್ಥಾನವಾದ ಪರಲೋಕಕ್ಕೆ ತಲುಪಿತು. ಅಧ್ಯಾಯವನ್ನು ನೋಡಿ |
ಆ ಬಳಿಕ ಯೆಹೋಯಾದನು ದೇವಾಲಯದೊಳಗೆ ಸೇವೆಮಾಡುವ ಜವಾಬ್ದಾರಿಕೆಯನ್ನು ಕೆಲವು ಯಾಜಕರಿಗೆ ವಹಿಸಿದನು. ಅವರೆಲ್ಲಾ ಲೇವಿಯರಾಗಿದ್ದರು. ದಾವೀದನು ಅವರಿಗೆ ದೇವಾಲಯದ ಜವಾಬ್ದಾರಿಕೆಯನ್ನು ಕೊಟ್ಟಿದ್ದನು. ಮೋಶೆಯು ಕೊಟ್ಟಿದ್ದ ನಿಯಮಕ್ಕನುಸಾರವಾಗಿ ಅವರು ಸರ್ವಾಂಗಹೋಮವನ್ನು ಅರ್ಪಿಸಿದರು. ದಾವೀದನು ಆಜ್ಞಾಪಿಸಿದಂತೆ ಅವರು ಹೋಮಗಳನ್ನೂ ಯಜ್ಞಗಳನ್ನೂ ಅರ್ಪಿಸುವಾಗ ಹಾಡುತ್ತಾ ಸಂತೋಷದಿಂದ ತಮ್ಮ ಕೆಲಸವನ್ನು ಮಾಡಿದರು.
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.