2 ಪೂರ್ವಕಾಲ ವೃತ್ತಾಂತ 30:6 - ಪರಿಶುದ್ದ ಬೈಬಲ್6 ಅದಕ್ಕಾಗಿ ಸಂದೇಶಕರು ರಾಜನ ಪತ್ರವನ್ನು ಇಡೀ ಇಸ್ರೇಲ್ ಮತ್ತು ಯೆಹೂದ ಪ್ರಾಂತ್ಯದ ಜನರಿಗೆ ಕೊಟ್ಟರು. ಅದರಲ್ಲಿ ಹೀಗೆ ಬರೆದಿದ್ದನು: “ಇಸ್ರೇಲಿನ ಮಕ್ಕಳೇ, ಅಬ್ರಹಾಮನೂ ಇಸಾಕನೂ ಯಾಕೋಬನೂ ಆರಾಧಿಸಿದ ದೇವರಾದ ಯೆಹೋವನ ಕಡೆಗೆ ತಿರುಗಿರಿ. ಆಗ ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದವರ ಕಡೆಗೆ ಆತನು ತಿರುಗಿಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅರಸನ ಮತ್ತು ಅವನ ಪದಾಧಿಕಾರಿಗಳ ಪತ್ರವನ್ನು ತೆಗೆದುಕೊಂಡುಹೋದ ದೂತರು ಇಸ್ರಯೇಲ್ ಹಾಗು ಜುದೇಯ ನಾಡುಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಯೇಲರೇ, ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರಾದ ಸರ್ವೇಶ್ವರನಿಗೆ ಅಭಿಮುಖರಾಗಿರಿ. ಆಗ ಅವರೂ ನಿಮ್ಮಲ್ಲಿ ಅಸ್ಸೀರಿಯಾದ ಅರಸನ ಕೈಗೆ ಸಿಕ್ಕದೆ ತಪ್ಪಿಸಿಕೊಂಡ ಅಳಿದುಳಿದವರಿಗೆ ಅಭಿಮುಖರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅರಸನ ಮತ್ತು ಅವನ ಸರದಾರರ ಪತ್ರಗಳನ್ನು ತೆಗೆದುಕೊಂಡುಹೋದ ದೂತರು ಇಸ್ರಾಯೇಲ್ ಯೆಹೂದದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಪ್ರಕಟಿಸಿದ್ದೇನಂದರೆ - ಇಸ್ರಾಯೇಲ್ಯರೇ, ಅಬ್ರಹಾಮ್ ಇಸಾಕ್ ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನೂ ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದವರ ಕಡೆಗೆ ತಿರುಗಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದೇ ಪ್ರಕಾರ ಓಟಗಾರರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತೆಗೆದುಕೊಂಡು, ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಮತ್ತು ಯೆಹೂದ ದೇಶಗಳಿಗೆ ಹೋಗಿ, “ಇಸ್ರಾಯೇಲರೇ, ಅಬ್ರಹಾಮನ, ಇಸಾಕನ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿರಿ. ಆಗ ಅವರು ಅಸ್ಸೀರಿಯದ ಅರಸರ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಕಡೆಗೆ ತಿರುಗುವರು. ಅಧ್ಯಾಯವನ್ನು ನೋಡಿ |
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.
ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’
ಅದು ಮಧ್ಯಾಹ್ನದ ಯಜ್ಞಗಳನ್ನು ಅರ್ಪಿಸುವ ಸಮಯ. ಪ್ರವಾದಿಯಾದ ಎಲೀಯನು ಯಜ್ಞವೇದಿಕೆಯ ಹತ್ತಿರಕ್ಕೆ ಹೋಗಿ, “ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರಾದ ಯೆಹೋವನೇ, ನೀನು ಇಸ್ರೇಲಿನಲ್ಲಿರುವ ದೇವರೆಂಬುದನ್ನು ರುಜುವಾತುಪಡಿಸಲು ನಾನೀಗ ನಿನ್ನನ್ನು ಪ್ರಾರ್ಥಿಸುತ್ತಿದ್ದೇನೆ. ನಾನು ನಿನ್ನ ಸೇವಕನೆಂಬುದನ್ನೂ ನೀನು ನಿರೂಪಿಸು. ಈ ಕಾರ್ಯಗಳನ್ನೆಲ್ಲಾ ನಾನು ಮಾಡುವಂತೆ ನೀನು ಆಜ್ಞಾಪಿಸಿದೆ ಎನ್ನುವುದನ್ನೂ ಈ ಜನರಿಗೆ ತೋರಿಸು.