2 ಪೂರ್ವಕಾಲ ವೃತ್ತಾಂತ 30:8 - ಪರಿಶುದ್ದ ಬೈಬಲ್8 ನಿಮ್ಮ ಪೂರ್ವಿಕರ ಹಾಗೆ ಮೊಂಡರಾಗಿರಬೇಡಿ. ನೀವು ಪೂರ್ಣಮನಸ್ಸಿನಿಂದ ದೇವರಿಗೆ ವಿಧೇಯರಾಗಿರಿ. ಆತನ ಶಾಶ್ವತವಾದ ಮಹಾಪವಿತ್ರಸ್ಥಳಕ್ಕೆ ಬನ್ನಿರಿ. ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಿರಿ ಮತ್ತು ಆತನ ಸೇವೆಮಾಡಿರಿ. ಆಗ ನಿಮ್ಮ ಮೇಲಿರುವ ಆತನ ಕೋಪವು ಶಮನವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈಗ ನಿಮ್ಮ ಪೂರ್ವಜರಂತೆ ಆಜ್ಞೆಗೆ ಮಣಿಯದವರಾಗಬೇಡಿ. ಸರ್ವೇಶ್ವರನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಸರ್ವೇಶ್ವರ ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಅವರನ್ನು ಅವಲಂಬಿಸಿರಿ. ಆಗ ನಿಮ್ಮ ಮೇಲಿರುವ ಅವರ ಉಗ್ರಕೋಪ ತೊಲಗಿಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಈಗ ನಿಮ್ಮ ಪಿತೃಗಳಂತೆ ಆಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಆತನನ್ನು ಸೇವಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು. ಅಧ್ಯಾಯವನ್ನು ನೋಡಿ |
ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.