Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:9 - ಪರಿಶುದ್ದ ಬೈಬಲ್‌

9 ನೀವು ಯೆಹೋವನಿಗೆ ವಿಧೇಯರಾದರೆ ನಿಮ್ಮ ಮಕ್ಕಳೂ ಬಂಧುಗಳೂ ತಮ್ಮನ್ನು ಸೆರೆಹಿಡಿದವರಿಂದ ಕರುಣೆಯನ್ನು ಹೊಂದಿ ಮತ್ತೆ ಈ ದೇಶಕ್ಕೆ ಬರುವರು. ದೇವರಾದ ಯೆಹೋವನು ದಯೆಯೂ ಕರುಣೆಯೂ ಉಳ್ಳವನಾಗಿದ್ದಾನೆ. ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮನ್ನು ತಳ್ಳಿಬಿಡುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀವು ಸರ್ವೇಶ್ವರನಿಗೆ ಅಭಿಮುಖರಾದರೆ, ನಿಮ್ಮ ಸಹೋದರರೂ ಮಕ್ಕಳೂ ತಮ್ಮನ್ನು ಸೆರೆಯೊಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ಮರಳಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಸರ್ವೇಶ್ವರ ದಯಾವಂತರು, ಕನಿಕರವುಳ್ಳವರು. ತಮಗೆ ಅಭಿಮುಖರಾಗುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಯೆಹೋವನ ಕಡೆಗೆ ತಿರುಗಿಕೊಳ್ಳುವದಾದರೆ ನಿಮ್ಮ ಸಹೋದರರೂ ಮಕ್ಕಳೂ ತಮ್ಮನ್ನು ಸೆರೆಯೊಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ ತಿರಿಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳವನಾಗಿರುತ್ತಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವದಿಲ್ಲ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ಯೆಹೋವ ದೇವರ ಕಡೆಗೆ ತಿರುಗಿ ಈ ದೇಶಕ್ಕೆ ಬರುವಂತೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಅನುಕಂಪವನ್ನು ಹೊಂದುವರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಕೃಪೆಯೂ ಅನುಕಂಪವೂ ಉಳ್ಳವರಾಗಿದ್ದಾರೆ. ನೀವು ಅವರ ಕಡೆಗೆ ತಿರುಗಿದರೆ, ಅವರು ನಿಮ್ಮ ಕಡೆಯಿಂದ ತಮ್ಮ ಮುಖವನ್ನು ತಿರುಗಿಸುವುದಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:9
23 ತಿಳಿವುಗಳ ಹೋಲಿಕೆ  

ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.


ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.


ಅನ್ಯ ಜನಾಂಗಗಳು ಆತನ ಜನರನ್ನು ಸೆರೆಯಾಳುಗಳನ್ನಾಗಿ ಎಳೆದೊಯ್ದರು. ಅನ್ಯಜನಾಂಗಗಳು ತನ್ನ ಜನರಿಗೆ ದಯೆತೋರುವಂತೆ ಆತನು ಮಾಡಿದನು.


ಯೆಹೋವನೇ, ನೀನು ಒಳ್ಳೆಯವನೂ ಕರುಣಾಮಯನೂ ಆಗಿರುವೆ. ನಿನ್ನ ಜನರು ಸಹಾಯಕ್ಕಾಗಿ ನಿನಗೆ ಮೊರೆಯಿಡುವರು. ನೀನು ಅವರನ್ನು ನಿಜವಾಗಿಯೂ ಪ್ರೀತಿಸುವಿ.


ನಿನ್ನ ಜನರ ಎಲ್ಲಾ ಪಾಪಗಳನ್ನು ಕ್ಷಮಿಸು. ಅವರು ನಿನಗೆ ವಿರುದ್ಧವಾದುದಕ್ಕೆ ಅವರನ್ನು ಕ್ಷಮಿಸು. ಅವರ ಶತ್ರುಗಳು ಅವರಿಗೆ ದಯೆತೋರಿಸುವಂತೆ ಮಾಡು.


ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.


ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.


ಪೂರ್ವದಿಂದ ಬರುವ ಗಾಳಿಯಂತೆ ಯೆಹೂದದ ಜನರನ್ನು ಅವರ ವೈರಿಗಳ ಎದುರಿನಲ್ಲಿ ಚದರಿಸಿಬಿಡುವೆನು. ನಾನು ಅವರನ್ನು ನಾಶಮಾಡುವೆನು. ಆ ಸಮಯದಲ್ಲಿ ಅವರಿಗೆ ಸಹಾಯಮಾಡಲು ನಾನು ಬರುವದಿಲ್ಲ. ಇಲ್ಲ! ನಾನು ಬಿಟ್ಟುಹೋಗುವುದನ್ನು ಅವರು ನೋಡುವರು.”


ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ದೇವರು ಅಮೋಘವಾದ ಕಾರ್ಯಗಳನ್ನು ಮಾಡುವುದರಿಂದ ಆತನ ದಯೆಯನ್ನೂ ಕೃಪೆಯನ್ನೂ ಜ್ಞಾಪಿಸಿಕೊಳ್ಳುತ್ತೇವೆ.


ಯೆಹೋವನೇ, ಕನಿಕರವೂ ದಯೆಯೂ ಉಳ್ಳ ದೇವರು ನೀನೇ. ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ.


“ಆದರೂ ನೀನು ದಯಾವಂತನು, ಅವರನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ಅವರನ್ನು ತೊರೆಯಲಿಲ್ಲ. ನೀನು ಅಂಥಾ ದಯಾಪರನಾದ ದೇವರು.


ನನ್ನ ಹೆಸರಿನಿಂದ ಕರೆಯಲ್ಪಡುವ ನನ್ನ ಜನರು ದೀನತೆಯಿಂದ ಪ್ರಾರ್ಥಿಸಿ, ತಮ್ಮ ಪಾಪಗಳನ್ನು ಬಿಟ್ಟು ನನ್ನ ಕಡೆಗೆ ತಿರುಗಿದರೆ ನಾನು ಪರಲೋಕದಿಂದ ಅವರನ್ನು ಆಲೈಸಿ, ಅವರ ಪಾಪಗಳನ್ನು ಮನ್ನಿಸಿ ಅವರ ದೇಶವನ್ನು ಗುಣಪಡಿಸುವೆನು.


ನಿಮ್ಮ ದೇವರಾದ ಯೆಹೋವನು ಕರುಣೆಯುಳ್ಳ ದೇವರಾಗಿದ್ದಾನೆ. ನಿಮ್ಮನ್ನು ಅಲ್ಲಿಯೇ ಇರಗೊಡಿಸುವುದಿಲ್ಲ; ನಿಮ್ಮನ್ನು ಸಂಪೂರ್ಣವಾಗಿ ನಾಶಪಡಿಸುವುದಿಲ್ಲ; ನಿಮ್ಮ ಪೂರ್ವಿಕರೊಂದಿಗೆ ಮಾಡಿದ ಒಡಂಬಡಿಕೆಯನ್ನು ಆತನು ಮರೆತುಬಿಡುವವನಲ್ಲ.


“ನಾನು ಈಗ ಹೇಳಿದ್ದೆಲ್ಲವೂ ನಿಮಗೆ ಸಂಭವಿಸುವುದು. ಆಶೀರ್ವಾದದ ಮೂಲಕ ನಿಮಗೆ ಶುಭವಾಗುವದು; ಶಾಪದಿಂದ ನಿಮಗೆ ಅಶುಭವಾಗುವುದು. ನಮ್ಮ ದೇವರಾದ ಯೆಹೋವನು ಇತರ ದೇಶಗಳಿಗೆ ನಿಮ್ಮನ್ನು ಕಳುಹಿಸಿ ಬಿಡುವನು. ಆಗ ನೀವು ಇವುಗಳನ್ನೆಲ್ಲಾ ನೆನಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು