Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:10 - ಪರಿಶುದ್ದ ಬೈಬಲ್‌

10 ಚಾದೋಕನ ಕುಲದ ಮಹಾಯಾಜಕನಾದ ಅಜರ್ಯನು ಹಿಜ್ಕೀಯನಿಗೆ, “ದೇವಾಲಯಕ್ಕೆ ಜನರು ಕಾಣಿಕೆಗಳನ್ನು ತರಲು ಪ್ರಾರಂಭ ಮಾಡಿದಂದಿನಿಂದ ನಮಗೆ ಊಟಕ್ಕೆ ಯಾವ ಕೊರತೆಯೂ ಇಲ್ಲವಾಗಿದೆ. ನಾವು ತೃಪ್ತಿಯಾಗುವಷ್ಟು ಊಟಮಾಡಿದರೂ ಇನ್ನೂ ಉಳಿದಿರುತ್ತದೆ. ದೇವರು ನಿಜವಾಗಲೂ ತನ್ನ ಜನರನ್ನು ಆಶೀರ್ವದಿಸಿರುತ್ತಾನೆ. ಆದ್ದರಿಂದಲೇ ನಮಗೆ ಹೇರಳವಾಗಿ ಉಳಿದಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ, “ಜನರು ದೇವರಾದ ಯೆಹೋವನಿಗೋಸ್ಕರ ನೈವೇದ್ಯಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗಳಿಗೆ ಸಮೃದ್ಧಿಯಾಗಿ ಅನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತಾರೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಚಾದೋಕ್ ಸಂತಾನದ ಮಹಾಯಾಜಕ ಅಜರ್ಯನು, “ಜನರು ದೇವರಾದ ಸರ್ವೇಶ್ವರನಿಗೆ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಸರ್ವೇಶ್ವರ ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ - ಜನರು ದೇವರಾದ ಯೆಹೋವನಿಗೋಸ್ಕರ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗೆ ಸಮೃದ್ಧಿಯನ್ನನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಚಾದೋಕ್ ಸಂತಾನದ ಮುಖ್ಯಯಾಜಕ ಅಜರ್ಯನು, “ಜನರು ದೇವರಾದ ಯೆಹೋವ ದೇವರಿಗೆ ಕಾಣಿಕೆಯಾಗಿ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಯೆಹೋವ ದೇವರು ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:10
30 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.


ಅಹೀಟೂಬನ ಮಗ ಚಾದೋಕ. ಚಾದೋಕನ ಮಗ ಅಹೀಮಾಚ.


ಎಪಫ್ರೊದೀತನು ನಿಮ್ಮ ಕೊಡುಗೆಯನ್ನು ತಂದು ಕೊಟ್ಟಿದ್ದರಿಂದ ಬೇಕಾದದ್ದೆಲ್ಲ ನನ್ನಲ್ಲಿ ಹೇರಳವಾಗಿದೆ. ನಿಮ್ಮ ಕೊಡುಗೆಯು ದೇವರಿಗೆ ಅರ್ಪಿಸಲ್ಪಟ್ಟ ಪರಿಮಳಭರಿತವಾದ ಯಜ್ಞವಾಗಿದೆ. ಇದು ದೇವರಿಗೆ ಮೆಚ್ಚಿಕೆಯಾದದ್ದೂ ಆಗಿದೆ.


ಜನರೆಲ್ಲರೂ ತಿಂದು ತೃಪ್ತರಾದರು. ಬಳಿಕ ತಿನ್ನಲಾರದೆ ಉಳಿದುಹೋದ ಆಹಾರದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಏಳು ಬುಟ್ಟಿಗಳು ತುಂಬಿಹೋದವು.


ಯೆಹೋವನು ಹೀಗೆನ್ನುತ್ತಾನೆ, “ಈ ಹೊತ್ತು ಒಂಭತ್ತನೇ ತಿಂಗಳಿನ ಇಪ್ಪತ್ನಾಲ್ಕನೆಯ ದಿವಸವಾಗಿದೆ. ಆಲಯದ ಶಂಕುಸ್ಥಾಪನೆ ಮಾಡಿ ಮುಗಿಸಿರುತ್ತೀರಿ. ಇನ್ನು ಮುಂದಕ್ಕೆ ಏನು ನಡಿಯುತ್ತದೆಂದು ಗಮನಿಸಿರಿ.


“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಐಶ್ವರ್ಯವು ಯೆಹೋವನ ಆಶೀರ್ವಾದವೇ. ಶ್ರಮದ ಕೆಲಸವು ಅದನ್ನು ಹೆಚ್ಚಿಸಲಾರದು.


ನಿನಗೆ ಬರುವ ಆದಾಯದಿಂದಲೂ ಬೆಳೆಯ ಪ್ರಥಮ ಫಲದಿಂದಲೂ ಯೆಹೋವನನ್ನು ಸನ್ಮಾನಿಸು.


ಆಗ ಮಹಾಯಾಜಕನಾದ ಅಜರ್ಯನೂ ಧೈರ್ಯಶಾಲಿಗಳಾದ ಎಂಭತ್ತು ಮಂದಿ ಸೇವೆಮಾಡುವ ಯಾಜಕರೂ ಉಜ್ಜೀಯನಿಗೆ,


ಆಗ ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನ ಸ್ಥಾನದಲ್ಲಿ ಸೇನಾಧಿಪತಿಯನ್ನಾಗಿ ಸೊಲೊಮೋನನು ನೇಮಿಸಿದನು. ಎಬ್ಯಾತಾರನ ಸ್ಥಾನದಲ್ಲಿ ಚಾದೋಕನನ್ನು ನೂತನ ಪ್ರಧಾನಯಾಜಕನನ್ನಾಗಿ ನೇಮಿಸಿದನು.


ಚಿಂತೆ ಮಾಡಬೇಡಿರಿ! ಆರನೆಯ ವರ್ಷದಲ್ಲಿ ನನ್ನ ಆಶೀರ್ವಾದವು ನಿಮ್ಮ ಮೇಲಿರುವುದು. ಆ ವರ್ಷ ಭೂಮಿಯಲ್ಲಿ ಬೆಳೆದ ಪೈರುಗಳು ಮೂರು ವರ್ಷಗಳ ಬೆಳೆಯಷ್ಟಾಗುವದು.


ಯೆಹೋವನು ಯೋಸೇಫನ ಸಂಗಡವಿದ್ದು ಅವನ ಎಲ್ಲಾ ಕೆಲಸಕಾರ್ಯಗಳನ್ನು ಯಶಸ್ವಿಗೊಳಿಸುತ್ತಿದ್ದದ್ದರಿಂದ ಮುಖ್ಯಾಧಿಕಾರಿಯು ಎಲ್ಲಾ ವಿಷಯಗಳನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಾಗಿದ್ದನು.


ಪೋಟೀಫರನು ಯೋಸೇಫನಿಗೆ ಮನೆಯ ಮೇಲ್ವಿಚಾರಣೆಯನ್ನು ಕೊಟ್ಟು ಆಸ್ತಿಗೆ ಅವನನ್ನು ಜವಾಬ್ದಾರನನ್ನಾಗಿ ಮಾಡಿದ ಮೇಲೆ ಯೆಹೋವನು ಪೋಟೀಫರನ ಮನೆಯನ್ನೂ ಬೆಳೆಗಳನ್ನೂ ಆಸ್ತಿಯನ್ನೂ ಆಶೀರ್ವದಿಸಿದನು.


ಇಸಾಕನು ಆ ಪ್ರದೇಶದಲ್ಲಿ ಬೀಜ ಬಿತ್ತಿದನು; ಅವನಿಗೆ ಅದೇ ವರ್ಷದಲ್ಲಿ ಮಹಾ ಸುಗ್ಗಿಯಾಯಿತು. ಯೆಹೋವನು ಅವನನ್ನು ಹೆಚ್ಚಾಗಿ ಆಶೀರ್ವದಿಸಿದನು.


ನೀನು ದೇಹವನ್ನು ಪಳಗಿಸಿಕೊಂಡರೆ ನಿನಗೆ ಕೆಲವು ರೀತಿಯಲ್ಲಿ ಸಹಾಯಕವಾಗುವುದು. ಆದರೆ ದೇವರ ಸೇವೆಯು ನಿನಗೆ ಎಲ್ಲಾ ರೀತಿಯಲ್ಲಿಯೂ ಸಹಾಯಕವಾಗುವುದು. ದೇವರ ಸೇವೆಯು ಇಹಪರಗಳೆರಡರಲ್ಲೂ ನಿನಗೆ ಆಶೀರ್ವಾದವನ್ನು ಉಂಟು ಮಾಡುವುದು.


ಅಜರ್ಯನು ಸೆರಾಯನ ತಂದೆ. ಸೆರಾಯನು ಯೆಹೋಚಾದಾಕನ ತಂದೆ.


“ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮ್ಮ ಕಣಜಗಳನ್ನು ಆಶೀರ್ವದಿಸುವನು. ನೀವು ಮಾಡುವ ಕಾರ್ಯಗಳನ್ನೆಲ್ಲಾ ಆಶೀರ್ವದಿಸುವನು. ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ನಿಮ್ಮನ್ನು ಆಶೀರ್ವದಿಸುವನು.


ಅಹೀಮಾಚನು ಅಜರ್ಯನ ತಂದೆ. ಅಜರ್ಯನ ಮಗನು ಯೋಹಾನಾನ.


ಹಿಜ್ಕೀಯನು ಕಾಣಿಕೆಯ ರಾಶಿಯ ವಿಷಯವಾಗಿ ಯಾಜಕರೊಂದಿಗೆ ಮತ್ತು ಲೇವಿಯರೊಂದಿಗೆ ಮಾತನಾಡಿದಾಗ


ಕೋನನ್ಯ ಮತ್ತು ಶಿಮ್ಮಿಯು ಈ ಜನರ ಮೇಲ್ವಿಚಾರಕರಾಗಿದ್ದರು; ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಾಕ್ಯ, ಮಹತ್ ಮತ್ತು ಬೆನಾಯ ಇವರನ್ನು ಸಹಾಯಕರಾಗಿ ಅರಸನಾದ ಹಿಜ್ಕೀಯನೂ ದೇವಾಲಯದ ಮೇಲ್ವಿಚಾರಕನಾದ ಅಜರ್ಯನೂ ಆರಿಸಿದರು.


ಎಲ್ಲಾ ಪ್ರಥಮಫಲವು ಯಾಜಕರಿಗೆ ಸಲ್ಲತಕ್ಕದ್ದು. ಅಲ್ಲದೆ ನೀವು ನಾದುವ ಮೊದಲನೆ ರೊಟ್ಟಿಯ ಹಿಟ್ಟು ಯಾಜಕರಿಗೆ ಕೊಡಬೇಕು. ಹೀಗೆ ಮಾಡಿದ್ದಲ್ಲಿ ನೀವು ಆಶೀರ್ವದಿಸಲ್ಪಡುತ್ತೀರಿ.


ದೇವರ ಪವಿತ್ರಸ್ಥಳವನ್ನು ಕಟ್ಟುವ ಕೆಲಸವನ್ನು ಮುಗಿಸುವುದಕ್ಕೆ ಬೇಕಾಗಿರುವುದಕ್ಕಿಂತಲೂ ಹೆಚ್ಚಾಗಿ ಜನರು ತಂದಿದ್ದರು.


ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು, ಆ ಜನರಿಗೆ ಶಾಪಕೊಡಬಾರದು. ನಾನು ಅವರನ್ನು ಆಶೀರ್ವದಿಸಿದ್ದೇನೆ” ಎಂದು ಹೇಳಿದನು.


ನಮ್ಮ ದೇವರಾದ ಯೆಹೋವನೇ, ನಿನ್ನ ಆಲಯವನ್ನು ಕಟ್ಟುವುದಕ್ಕಾಗಿ ನಾವು ಇವೆಲ್ಲವನ್ನೂ ಒಟ್ಟುಗೂಡಿಸಿದ್ದೇವೆ. ನಿನ್ನ ಪವಿತ್ರ ಹೆಸರನ್ನು ಪ್ರಸಿದ್ಧಿಪಡಿಸಲು ನಾವು ಆಲಯವನ್ನು ಕಟ್ಟುತ್ತೇವೆ. ಆದರೆ ಇವೆಲ್ಲಾ ನಿನ್ನಿಂದಲೇ ಬಂದವುಗಳು; ಇವೆಲ್ಲಾ ನಿನಗೇ ಸಂಬಂಧಪಟ್ಟವುಗಳು.


ಆಗ ನಿನ್ನ ಕಣಜಗಳು ದವಸಧಾನ್ಯಗಳಿಂದ ತುಂಬಿರುತ್ತವೆ. ನಿನ್ನ ದ್ರಾಕ್ಷಾರಸದ ತೊಟ್ಟಿಗಳು ತುಂಬಿತುಳುಕುತ್ತವೆ.


ಉಚಿತವಾಗಿ ಕೊಡುವವನು ಅದಕ್ಕಿಂತಲೂ ಹೆಚ್ಚುಗಳಿಸುವನು. ಆದರೆ ಕೊಡಲೊಲ್ಲದವನು ಬಡವನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು