2 ಪೂರ್ವಕಾಲ ವೃತ್ತಾಂತ 31:12 - ಪರಿಶುದ್ದ ಬೈಬಲ್12 ಆ ಬಳಿಕ ದೇವರಿಗೆ ಕೊಟ್ಟಿದ್ದ ದಶಮಾಂಶ ಮತ್ತು ಬೇರೆ ಕಾಣಿಕೆಗಳನ್ನು ಆ ಉಗ್ರಾಣದ ಕೋಣೆಗಳಲ್ಲಿ ಕೂಡಿಸಿಟ್ಟರು. ಲೇವಿಯನಾದ ಕೋನನ್ಯನು ಇದರ ಮೇಲ್ವಿಚಾರಕನಾಗಿ ನೇಮಿಸಲ್ಪಟ್ಟನು. ಇವನಿಗೆ ಸಹಾಯಕನಾಗಿ ಕೋನನ್ಯನ ಸೋದರನಾದ ಶಿಮ್ಮಿಯು ನೇಮಿಸಲ್ಪಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನೂ, ತಮ್ಮ ಆದಾಯದ ದಶಮಾಂಶವನ್ನೂ ಹಾಗು ದೇವರ ನೈವೇದ್ಯಕ್ಕಾಗಿ ಮುಡುಪಾಗಿ ಇಟ್ಟಿದ್ದನ್ನು ನಂಬಿಕೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಗೆ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು. ಅವನ ತಮ್ಮನಾದ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನು, ತಮ್ಮ ಆದಾಯದ ದಶಮಾಂಶವನ್ನು ಹಾಗು ದೇವರಿಗೆ ಮುಡುಪಾಗಿ ಇಟ್ಟಿದ್ದನ್ನು ನಿರ್ವಂಚನೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಯಲ್ಲಿ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು; ಅವನ ತಮ್ಮ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಜನರು ಕಾಣಿಕೆಗಳನ್ನೂ ತಮ್ಮ ಆದಾಯದ ದಶಮಾಂಶವನ್ನೂ ದೇವರಿಗೋಸ್ಕರ ಪ್ರತ್ಯೇಕಿಸಿದ ಮುಡುಪನ್ನೂ ನಿರ್ವಂಚನೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಯಲ್ಲಿ ಲೇವಿಯನಾದ ಕೋನನ್ಯನು ಮುಖ್ಯಸ್ಥನು; ಅವನ ತಮ್ಮನಾದ ಶಿಮ್ಮಿಯು ದ್ವಿತೀಯ ಸ್ಥಾನದವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನು ತಮ್ಮ ಆದಾಯದ ದಶಮಾಂಶವನ್ನು ಹಾಗು ದೇವರಿಗೆ ಮುಡುಪಾಗಿ ಇಟ್ಟಿದ್ದನ್ನು ನಿರ್ವಂಚನೆಯಿಂದ ತಂದು, ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಯಲ್ಲಿ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು. ಅವನ ತಮ್ಮ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು. ಅಧ್ಯಾಯವನ್ನು ನೋಡಿ |
ಆರೋನನ ಸಂತತಿಯ ಕೆಲವು ಯಾಜಕರಿಗೆ ಲೇವಿಯರು ವಾಸಿಸುತ್ತಿದ್ದ ಪಟ್ಟಣಗಳ ಹತ್ತಿರ ಹೊಲಗಳಿದ್ದವು. ಆರೋನನ ಸಂತತಿಯವರಲ್ಲಿ ಕೆಲವರು ಲೇವಿಯರ ಪಟ್ಟಣಗಳಲ್ಲಿಯೂ ವಾಸಮಾಡುತ್ತಿದ್ದರು. ಈ ಆರೋನನ ಸಂತತಿಯವರಿಗೆ ಪಾಲು ಕೊಡಲು ಕೆಲವರನ್ನು ನೇಮಿಸಲಾಯಿತು. ಗಂಡಸರಿಗೆ ಮತ್ತು ವಂಶಾವಳಿಯಲ್ಲಿ ಹೆಸರನ್ನು ಹೊಂದಿದ್ದ ಎಲ್ಲಾ ಲೇವಿಯರಿಗೆ ಸಂಗ್ರಹಿಸಲ್ಪಟ್ಟಿದ್ದರಲ್ಲಿ ಅವರವರ ಪಾಲು ದೊರೆಯಿತು.
ಇಸ್ರೇಲ್ ಜನರು ಮತ್ತು ಲೇವಿಯರು ತಮ್ಮ ಕಾಣಿಕೆಗಳಾದ ದವಸಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನು ತಂದು ದೇವಾಲಯದ ಉಗ್ರಾಣಗಳಲ್ಲಿ ಇಡಬೇಕು. ದೇವಾಲಯಕ್ಕೋಸ್ಕರ ಮೀಸಲಾದ ಎಲ್ಲಾ ವಸ್ತುಗಳನ್ನು ಆ ಉಗ್ರಾಣಗಳಲ್ಲಿ ಇಡಬೇಕು. ಕೆಲಸದಲ್ಲಿ ನಿರತರಾಗಿರುವ ಯಾಜಕರು, ಗಾಯಕರು, ದ್ವಾರಪಾಲಕರು ಅಲ್ಲೇ ಇರಬೇಕು. “ನಮ್ಮ ದೇವರ ಆಲಯವನ್ನು ನಾವು ನೋಡಿಕೊಳ್ಳುವುದಾಗಿ ನಾವೆಲ್ಲರೂ ಪ್ರಮಾಣಮಾಡುತ್ತೇವೆ!”