2 ಪೂರ್ವಕಾಲ ವೃತ್ತಾಂತ 31:13 - ಪರಿಶುದ್ದ ಬೈಬಲ್13 ಕೋನನ್ಯ ಮತ್ತು ಶಿಮ್ಮಿಯು ಈ ಜನರ ಮೇಲ್ವಿಚಾರಕರಾಗಿದ್ದರು; ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಾಕ್ಯ, ಮಹತ್ ಮತ್ತು ಬೆನಾಯ ಇವರನ್ನು ಸಹಾಯಕರಾಗಿ ಅರಸನಾದ ಹಿಜ್ಕೀಯನೂ ದೇವಾಲಯದ ಮೇಲ್ವಿಚಾರಕನಾದ ಅಜರ್ಯನೂ ಆರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅರಸನಾದ ಹಿಜ್ಕೀಯನ ಮತ್ತು ಯೆಹೋವನ ಆಲಯದ ಅಧಿಪತಿಯಾದ ಅಜರ್ಯನ ನಿಯಮದಂತೆ ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಮೀಯ ಕೈಕೆಳಗಿನ ಪಾರುಪತ್ಯಗಾರರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅರಸ ಹಿಜ್ಕೀಯನ ಮತ್ತು ಸರ್ವೇಶ್ವರನ ಆಲಯದ ಅಧಿಪತಿಯಾದ ಅಜರ್ಯನ ನಿಯಮದಂತೆ ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಮಿಯ ಕೈಕೆಳಗಿನ ಪಾರುಪತ್ಯಗಾರರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅರಸನಾದ ಹಿಜ್ಕೀಯನ ಮತ್ತು ಯೆಹೋವನ ಆಲಯದ ಅಧಿಪತಿಯಾದ ಅಜರ್ಯನ ನಿಯಮದಿಂದ ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಮಿಯ ಕೈಕೆಳಗಿನ ಪಾರುಪತ್ಯಗಾರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅರಸನಾದ ಹಿಜ್ಕೀಯನು ನೇಮಿಸಿದ ಪ್ರಕಾರ, ಯೆಹೀಯೇಲ್, ಅಜಜ್ಯ, ನಹತ್, ಅಸಾಯೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ, ಇವರು ಕೋನನ್ಯನ ಸಹೋದರನಾದ ಶಿಮ್ಮಿಯ ಕೈಕೆಳಗೆ ಆಡಳಿತಗಾರರಾಗಿದ್ದರು. ಅಜರ್ಯನು ದೇವರ ಆಲಯದ ಅಧಿಪತಿಯಾಗಿದ್ದನು. ಅಧ್ಯಾಯವನ್ನು ನೋಡಿ |
ದೇವಾಲಯದಲ್ಲಿ ಸೇವೆಮಾಡಲು ಪ್ರಾರಂಭಿಸಿದ ಲೇವಿಯರ ಪಟ್ಟಿ: ಕೆಹಾತ್ಯನ ಕುಟುಂಬದ ಅಮಾಸೈಯ ಮಗನಾದ ಮಹತ್ ಮತ್ತು ಅಜರ್ಯನ ಮಗನಾದ ಯೋವೇಲ್; ಮೆರಾರೀಯ ಸಂತತಿಯಲ್ಲಿ ಅಬ್ದೀಯ ಮಗನಾದ ಕೀಷ, ಯೆಹಲ್ಲೆಲೇಲನ ಮಗನಾದ ಅಜರ್ಯ; ಗೆರ್ಷೋನ್ಯನ ಸಂತತಿಯಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್; ಎಲೀಚಾಫಾನ್ಯನ ಸಂತತಿಯಲ್ಲಿ ಶಿಮ್ರಿ ಮತ್ತು ಯೆಗೀಯೇಲ್; ಆಸಾಫಾನ ಸಂತತಿಯವರಿಂದ ಜೆಕರ್ಯ ಮತ್ತು ಮತ್ತನ್ಯ; ಹೇಮಾನನ ಸಂತತಿಯಿಂದ ಯೆಹೀಯೇಲ್ ಮತ್ತು ಶಿಮ್ಮೀ; ಯೆದೂತೂನನ ಸಂತತಿಯಲ್ಲಿ ಶೆಮಾಯ ಮತ್ತು ಉಜ್ಜೀಯೇಲ್.
ಕೋರೆ ಎಂಬ ಲೇವಿಯು ಜನರು ದೇವರಿಗೆ ಸ್ವ ಇಚ್ಛೆಯಿಂದ ಸಮರ್ಪಿಸಿದ ಕಾಣಿಕೆಗೆ ಮುಖ್ಯಸ್ತನಾಗಿದ್ದನು. ಅವನು ಅದರ ಲೆಕ್ಕವನ್ನು ಒಪ್ಪಿಸುತ್ತಿದ್ದನು. ಅಲ್ಲದೆ ಯೆಹೋವನಿಗೆ ಕೊಟ್ಟವುಗಳನ್ನು ಮತ್ತು ಯೆಹೋವನಿಗೆ ಮೀಸಲಾಗಿಟ್ಟ ಕಾಣಿಕೆಗಳನ್ನು ಹಂಚಿಕೊಡುವುದು ಅವನ ಜವಾಬ್ದಾರಿಕೆಯಾಗಿತ್ತು. ಅಲ್ಲದೆ ಅವನು ಪೂರ್ವದ ಬಾಗಿಲಿನ ದ್ವಾರಪಾಲಕನಾಗಿದ್ದನು. ಅವನು ಲೇವಿಯನಾದ ಇಮ್ನನ ಮಗನು.