2 ಪೂರ್ವಕಾಲ ವೃತ್ತಾಂತ 31:17 - ಪರಿಶುದ್ದ ಬೈಬಲ್17 ಒಟ್ಟುಗೂಡಿಸಿದ ಕಾಣಿಕೆಯಲ್ಲಿ ಯಾಜಕರೂ ತಮ್ಮ ಪಾಲನ್ನು ತೆಗೆದುಕೊಂಡರು. ಇದನ್ನು ವಂಶಾವಳಿಗನುಸಾರವಾಗಿ ಮಾಡಲಾಯಿತು. ಲೇವಿಯರಲ್ಲಿ ಇಪ್ಪತ್ತು ವರ್ಷದವರೂ ಅದಕ್ಕಿಂತ ಹೆಚ್ಚು ವಯಸ್ಸಾದವರೂ ತಮ್ಮ ಪಾಲನ್ನು ಜವಾಬ್ದಾರಿಗಳಿಗನುಸಾರವಾಗಿಯೂ ತಮ್ಮ ಗುಂಪುಗಳಿಗನುಸಾರವಾಗಿಯೂ ಪಡೆದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆ ಪಟ್ಟಿಯಲ್ಲಿ ಗೋತ್ರಗಳಿಗೆ ಅನುಸಾರವಾಗಿಯೂ ಆಯಾ ಉದ್ಯೋಗ ವರ್ಗಗಳಿಗೆ ಅನುಸಾರವಾಗಿಯೂ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳ ಯಾಜಕರು, ಲೇವಿಯರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆ ಪಟ್ಟಿಯಲ್ಲಿ ಗೋತ್ರಗಳಿಗನುಸಾರ ಹಾಗು ಆಯಾ ಉದ್ಯೋಗ ವರ್ಗಗಳಿಗನುಸಾರ ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಯಾಜಕರು, ಲೇವಿಯರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆ ಪಟ್ಟಿಯಲ್ಲಿ ಗೋತ್ರಗಳಿಗನುಸಾರವಾಗಿಯೂ ಆಯಾ ಉದ್ಯೋಗವರ್ಗಗಳಿಗನುಸಾರವಾಗಿಯೂ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಯಾಜಕರು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಹಾಗೆಯೇ ಇಪ್ಪತ್ತು ವರ್ಷ ಪ್ರಾಯ ಮೊದಲ್ಗೊಂಡು ವಂಶಾವಳಿಯ ದಾಖಲೆಯ ಪ್ರಕಾರ ಅವರವರ ಕೆಲಸಗಳಲ್ಲಿಯೂ, ಅವರವರ ಸರತಿಗಳಲ್ಲಿಯೂ ಇರುವ ಯಾಜಕರಿಗೂ, ಲೇವಿಯರಿಗೂ ಅವರ ಸಮಸ್ತ ಕೂಟದಲ್ಲಿ ವಂಶಾವಳಿಯ ದಾಖಲೆಯ ಪ್ರಕಾರ ಅಧ್ಯಾಯವನ್ನು ನೋಡಿ |
ಯಾಜಕರೂ ಲೇವಿಯರೂ ಬೇರೆಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಈ ಗುಂಪಿನವರಿಗೆ ಹೇಳಿದನು. ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು.