Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:2 - ಪರಿಶುದ್ದ ಬೈಬಲ್‌

2 ಯಾಜಕರೂ ಲೇವಿಯರೂ ಬೇರೆಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಈ ಗುಂಪಿನವರಿಗೆ ಹೇಳಿದನು. ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ದಹನಬಲಿ, ಶಾಂತಿಸಮಾಧಾನ ಬಲಿ ಇವುಗಳನ್ನು ಸಮರ್ಪಿಸುವುದಕ್ಕೂ ಸರ್ವೇಶ್ವರನ ಪಾಳೆಯದ ದ್ವಾರಗಳಲ್ಲಿ ಸೇರಿ ಸರ್ವೇಶ್ವರನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವುದಕ್ಕೂ ಹಿಜ್ಕೀಯನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ ಸರ್ವಾಂಗಹೋಮ ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸುವದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವದಕ್ಕೂ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜಕರ, ಲೇವಿಯರ ಸರತಿಗಳನ್ನು ನೇಮಿಸಿದನು. ದಹನಬಲಿಗಳನ್ನೂ ಮತ್ತು ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕೂ, ಸೇವಿಸುವುದಕ್ಕೂ ಯೆಹೋವ ದೇವರ ಪಾಳೆಯದ ಬಾಗಿಲುಗಳಲ್ಲಿ ಸ್ತೋತ್ರ ಮಾಡುವುದಕ್ಕೂ, ಕೊಂಡಾಡುವುದಕ್ಕೂ ಯಾಜಕರನ್ನೂ, ಲೇವಿಯರನ್ನೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:2
23 ತಿಳಿವುಗಳ ಹೋಲಿಕೆ  

ಆರೋನನ ಸಂತಾನದವರು ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಗಂಡುಮಕ್ಕಳು: ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.


ಹೆರೋದನು ಜುದೇಯವನ್ನು ಆಳುತ್ತಿದ್ದ ಕಾಲದಲ್ಲಿ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಜಕರೀಯನು ಅಬೀಯನ ವರ್ಗಕ್ಕೆ ಸೇರಿದವನು. ಜಕರೀಯನ ಹೆಂಡತಿ ಆರೋನನ ಕುಟುಂಬದವಳು. ಆಕೆಯ ಹೆಸರು ಎಲಿಜಬೇತ್.


ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.


ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ. ರಾತ್ರಿಯೆಲ್ಲಾ ದೇವಾಲಯದಲ್ಲಿ ಸೇವೆ ಮಾಡಿದವರೇ, ಆತನಿಗೆ ಸ್ತೋತ್ರಮಾಡಿರಿ.


ಮತ್ತನ್ಯ, (ಮತ್ತನ್ಯನು ಮೀಕನ ಮಗ; ಮೀಕನು ಜಬ್ದೀಯ ಮಗ; ಜಬ್ದೀಯು ಆಸಾಫನ ಮಗ. ಆಸಾಫನು ಗಾಯಕರ ನಾಯಕನಾಗಿದ್ದು ಪ್ರಾರ್ಥನೆ ಮತ್ತು ಸ್ತುತಿಗೀತೆಗಳಲ್ಲಿ ಜನರನ್ನು ನಡೆಸುತ್ತಿದ್ದನು.) ಬಕ್ಬುಕ್ಯ (ಇವನು ತನ್ನ ಸಹೋದರರಲ್ಲಿ ಎರಡನೆ ಸ್ಥಾನ ಪಡೆದಿದ್ದನು), ಮತ್ತು ಶಮ್ಮೂವನ ಮಗನಾದ ಅಬ್ದ, (ಶಮ್ಮೂವನು ಗಾಲಾಲನ ಮಗ; ಗಾಲಾಲನು ಯೆದೂತೂನನ ಮಗ).


ಅನಂತರ ಯಾಜಕರನ್ನು ಮತ್ತು ಲೇವಿಯರನ್ನು ಅವರವರ ವರ್ಗಗಳಿಗನುಸಾರವಾಗಿ, ಮೋಶೆಯ ವಿಧಿಯಂತೆ ದೇವಾಲಯದಲ್ಲಿ ಸೇವೆಮಾಡುವುದಕ್ಕಾಗಿ ಆರಿಸಿದರು.


ಯಾಜಕನಾದ ಯೆಹೋಯಾದನು ಆಜ್ಞಾಪಿಸಿದಂತೆ ಲೇವಿಯರೂ ಯೆಹೂದದ ಜನರೂ ಮಾಡಿದರು. ಆದ್ದರಿಂದ ಪ್ರತಿಯೊಬ್ಬ ಸೇನಾಧಿಪತಿಯು ತನ್ನ ಕೈ ಕೆಳಗೆ ಸಬ್ಬತ್‌ದಿನದಲ್ಲಿ ಕೆಲಸಮಾಡಲು ಹೋಗುತ್ತಿದ್ದವರನ್ನು ಮತ್ತು ಸಬ್ಬತ್ ದಿನದ ಕೆಲಸ ಮುಗಿಸಿಕೊಂಡು ಬರುತ್ತಿದ್ದವರನ್ನು ಕೂಡಿಸಿಕೊಂಡನು.


ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.


ಅಲ್ಲಿ ನೆರೆದುಬಂದಿದ್ದ ಯಾಜಕರೆಲ್ಲರೂ ಯಾವ ವರ್ಗವ್ಯತ್ಯಾಸವಿಲ್ಲದೆ ಆಚಾರಕ್ಕನುಸಾರವಾಗಿ ತಮ್ಮನ್ನು ಶುದ್ಧೀಕರಿಸಿಕೊಂಡರು. ಬಳಿಕ ಅವರು ಪವಿತ್ರ ಸ್ಥಳದಿಂದ ಹೊರಬಂದು ಒಟ್ಟಾಗಿ ನಿಂತುಕೊಂಡರು.


ಆಗ ದಾವೀದನು ಆಸಾಫನನ್ನೂ ಅವನ ಸಹೋದರರನ್ನೂ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಪ್ರತಿನಿತ್ಯ ಸೇವೆಮಾಡಲು ಅಲ್ಲಿರಿಸಿದನು.


ಒಮ್ಮೆ ತನ್ನ ವರ್ಗದ ಸರದಿ ಬಂದಾಗ, ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕಸೇವೆ ಸಲ್ಲಿಸುತ್ತಿದ್ದನು.


ಉಜ್ಜೀಯೇಲನ ಮಗನು ಮೀಕ. ಮೀಕನ ಮಗ ಶಾಮೀರ್.


ಹದಿನೆಂಟನೆಯದಾಗಿ, ಹನಾನೀಯ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.


ದಾವೀದನು ದೇವಾಲಯಕ್ಕೋಸ್ಕರ ಸಂಗ್ರಹಿಸಿದ ಎಲ್ಲಾ ವಸ್ತುಗಳಿಗೆ ಶೆಲೋಮೋತನೂ ಅವನ ಸಂಬಂಧಿಕರೂ ಅಧಿಕಾರಿಗಳಾಗಿದ್ದರು. ಸೈನ್ಯಾಧಿಕಾರಿಗಳು ದೇವಾಲಯವನ್ನು ಕಟ್ಟಲು ಸಾಮಾಗ್ರಿಗಳನ್ನು ಒದಗಿಸಿದರು.


ಕೆಲಸಗಾರರು ತಮ್ಮ ಕೆಲಸವು ಮುಗಿದ ಬಳಿಕ ಉಳಿದ ಹಣವನ್ನು ಅರಸನಾದ ಯೆಹೋವಾಷನಿಗೆ ಮತ್ತು ಯೆಹೋಯಾದನಿಗೆ ತಂದುಕೊಟ್ಟರು. ಆ ಹಣವನ್ನು ದೇವಾಲಯದ ಉಪಕರಣಗಳನ್ನು ಮಾಡಿಸಲು ಉಪಯೋಗಿಸಿದರು. ಅವು ದೇವಾಲಯದೊಳಗಿನ ಸೇವೆಗೂ ಸರ್ವಾಂಗಹೋಮಕ್ಕೂ ಉಪಯುಕ್ತವಾಗಿದ್ದವು. ಮಾತ್ರವಲ್ಲದೆ ಬೆಳ್ಳಿಬಂಗಾರಗಳಿಂದ ಬೋಗುಣಿ ಮತ್ತು ಇತರ ವಸ್ತುಗಳನ್ನು ಮಾಡಿದರು. ಯೆಹೋಯಾದನು ಜೀವದಿಂದಿರುವ ತನಕ ಪ್ರತೀ ದಿವಸ ಸರ್ವಾಂಗಹೋಮವನ್ನರ್ಪಿಸುತ್ತಿದ್ದನು.


ಒಟ್ಟುಗೂಡಿಸಿದ ಕಾಣಿಕೆಯಲ್ಲಿ ಯಾಜಕರೂ ತಮ್ಮ ಪಾಲನ್ನು ತೆಗೆದುಕೊಂಡರು. ಇದನ್ನು ವಂಶಾವಳಿಗನುಸಾರವಾಗಿ ಮಾಡಲಾಯಿತು. ಲೇವಿಯರಲ್ಲಿ ಇಪ್ಪತ್ತು ವರ್ಷದವರೂ ಅದಕ್ಕಿಂತ ಹೆಚ್ಚು ವಯಸ್ಸಾದವರೂ ತಮ್ಮ ಪಾಲನ್ನು ಜವಾಬ್ದಾರಿಗಳಿಗನುಸಾರವಾಗಿಯೂ ತಮ್ಮ ಗುಂಪುಗಳಿಗನುಸಾರವಾಗಿಯೂ ಪಡೆದುಕೊಂಡರು.


ದೇವಾಲಯದಲ್ಲಿ ಸೇವೆ ಮಾಡುತ್ತಿದ್ದ ಯಾಜಕರನ್ನು ಯೋಷೀಯನು ಪ್ರೋತ್ಸಾಹಿಸಿ ವಿವಿಧ ಕೆಲಸಕಾರ್ಯಗಳಿಗೆ ಯಾಜಕರನ್ನು ಆರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು