2 ಪೂರ್ವಕಾಲ ವೃತ್ತಾಂತ 31:4 - ಪರಿಶುದ್ದ ಬೈಬಲ್4 ದೇಶದ ಜನರು ಯಾಜಕರಿಗೂ ಲೇವಿಯರಿಗೂ ತಮ್ಮ ಬೆಳೆಯ ಒಂದು ಪಾಲನ್ನು ಕೊಡಬೇಕಾಗಿತ್ತು. ಹಿಜ್ಕೀಯನು ಯಾಜಕರಿಗೂ ಲೇವಿಯರಿಗೂ ಅವರು ಕೊಡಬೇಕಾಗಿದ್ದ ಪಾಲನ್ನು ಕೊಡಬೇಕೆಂದು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಜನರಿಗೆ ಆಜ್ಞಾಪಿಸಿದನು. ಹೀಗಿರುವಾಗ ಯಾಜಕರೂ ಲೇವಿಯರೂ ತಮ್ಮ ಸಮಯವನ್ನೆಲ್ಲಾ ದೇವರ ಸೇವೆಯಲ್ಲಿ ಕಳೆಯಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯಾಜಕರು ಮತ್ತು ಲೇವಿಯರು ಯೆಹೋವನ ಧರ್ಮಶಾಸ್ತ್ರದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಯಾಜಕರು ಮತ್ತು ಲೇವಿಯರು ಸರ್ವೇಶ್ವರನ ಧರ್ಮದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು, ಜೆರುಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯಾಜಕರು ಮತ್ತು ಲೇವಿಯರು ಯೆಹೋವ ಧರ್ಮದಲ್ಲಿ ಆಸಕ್ತರಾಗಿರುವದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇವಿುನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯಾಜಕರೂ ಲೇವಿಯರೂ ಯೆಹೋವ ದೇವರ ನಿಯಮದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ತಕ್ಕ ಭಾಗವನ್ನು ಕೊಡಬೇಕೆಂದು ಯೆರೂಸಲೇಮಿನಲ್ಲಿ ಜನರಿಗೆ ಅವನು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |