12 ಹಿಜ್ಕೀಯನು ತಾನೇ ಪೂಜಾಸ್ಥಳಗಳನ್ನೂ ವೇದಿಕೆಗಳನ್ನೂ ತೆಗೆದುಹಾಕಿದ್ದಾನೆ. ಒಂದೇ ಒಂದು ಧೂಪವೇದಿಕೆಯಲ್ಲಿ ಧೂಪಹಾಕಿ ಆರಾಧಿಸಬೇಕೆಂದು ಅವನು ಯೆಹೂದ ಮತ್ತು ಜೆರುಸಲೇಮಿನ ಜನರಾದ ನಿಮಗೆ ಹೇಳುತ್ತಿದ್ದಾನೆ.
12 ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?
12 ಹಿಜ್ಕೀಯನು ಒಂದೇ ಬಲಿಪೀಠದ ಮುಂದೆ ಆರಾಧನೆಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ ಜೆರುಸಲೇಮಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿದನು ಅಲ್ಲವೆ?
12 ಆ ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆತನ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!
12 ಈ ಹಿಜ್ಕೀಯನು ಅವನ ಪೂಜಾಸ್ಥಳಗಳನ್ನೂ, ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ, ‘ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು, ಅದರ ಮೇಲೆ ಧೂಪವನ್ನರ್ಪಿಸಬೇಕು,’ ಎಂದು ಹೇಳಿದ್ದಾನಲ್ಲವೇ?
ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.
“‘ಒಂದುವೇಳೆ ನೀವು, “ನಾವು ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ” ಎಂದು ಹೇಳಬಹುದು. ಆದರೆ ಜನರು ಯೆಹೋವನನ್ನು ಆರಾಧಿಸುತ್ತಿದ್ದ ವೇದಿಕೆಗಳನ್ನೂ ಎತ್ತರವಾದ ಸ್ಥಳಗಳನ್ನೂ ಹಿಜ್ಕೀಯನು ನಾಶಮಾಡಿದ್ದಾನೆ. ಅಲ್ಲದೆ, ಯೆಹೂದ ಮತ್ತು ಜೆರುಸಲೇಮಿನಲ್ಲಿರುವ ಜನರಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯಲ್ಲಿಯೇ ಆರಾಧಿಸಬೇಕು” ಎಂದು ಆಜ್ಞಾಪಿಸಿರುವುದು ನನಗೆ ಗೊತ್ತಿದೆ.
ಬಹುಶಃ ನೀನು, “ನಾವು ನಮ್ಮ ದೇವರಾದ ಯೆಹೋವನಲ್ಲಿ ಭರವಸೆಯಿಟ್ಟಿದ್ದೇವೆ” ಎಂದು ಹೇಳುವೆ. ಆದರೆ ಹಿಜ್ಕೀಯನು ಯೆಹೋವನ ಉನ್ನತಸ್ಥಳಗಳನ್ನು ಮತ್ತು ಯಜ್ಞವೇದಿಕೆಯನ್ನು ನಾಶಪಡಿಸಿ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯ ಸನ್ನಿಧಿಯಲ್ಲಿ ಮಾತ್ರ ಆರಾಧಿಸಬೇಕು” ಎಂದು ಹೇಳಿದನೆಂಬುದು ನನಗೆ ತಿಳಿದಿದೆ.
ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.
ದೇವಾಲಯಕ್ಕಾಗಿ ಅನೇಕ ವಸ್ತುಗಳನ್ನು ಬಂಗಾರದಿಂದ ಮಾಡಲು ಸೊಲೊಮೋನನು ಆಜ್ಞಾಪಿಸಿದನು. ದೇವಾಲಯಕ್ಕಾಗಿ ಸೊಲೊಮೋನನು ಬಂಗಾರದಿಂದ ಮಾಡಿಸಿದ ವಸ್ತುಗಳು ಹೀಗಿವೆ: ಬಂಗಾರದ ಯಜ್ಞವೇದಿಕೆ; ಬಂಗಾರದ ಮೇಜು (ದೇವರಿಗೆ ವಿಶೇಷ ರೊಟ್ಟಿಯನ್ನು ಈ ಮೇಜಿನ ಮೇಲೆ ಅರ್ಪಿಸುತ್ತಾರೆ); ಅಪ್ಪಟ ಬಂಗಾರದ ದೀಪಸ್ತಂಭಗಳು (ಮಹಾ ಪವಿತ್ರಸ್ಥಳದ ಎದುರಿನಲ್ಲಿ ದಕ್ಷಿಣದ ಕಡೆಗೆ ಐದು ಮತ್ತು ಉತ್ತರದ ಕಡೆಗೆ ಐದು.) ಬಂಗಾರದ ಹೂಗಳು, ಹಣತೆಗಳು ಮತ್ತು ಇಕ್ಕುಳಗಳು; ಅಪ್ಪಟ ಬಂಗಾರದ ಬಟ್ಟಲುಗಳು; ದೀಪಗಳನ್ನು ಪ್ರಕಾಶಮಾನವಾಗಿ ಮಾಡಲು ಉಪಯೋಗಿಸುವ ಉಪಕರಣಗಳು; ಚಿಕ್ಕ ಗಂಗಾಳಗಳು; ಚಪ್ಪಟೆಯಾದ ಲೋಹದಿಂದ ಮಾಡಿದ ಪಾತ್ರೆಗಳು; ಬೂದಿಯನ್ನು ತೆಗೆದುಕೊಂಡು ಹೋಗಲು ಶುದ್ಧಬಂಗಾರದ ಪಾತ್ರೆಗಳು; ದೇವಾಲಯದ ಪ್ರವೇಶದ್ವಾರದ ಬಾಗಿಲುಗಳು.
ಹಿಜ್ಕೀಯನು ನಿಮ್ಮನ್ನು ಮೋಸಪಡಿಸುತ್ತಿದ್ದಾನೆ. ನೀವು ಜೆರುಸಲೇಮಿನಲ್ಲಿಯೇ ಇರುವಂತೆ ಹೇಳಿ ನಿಮಗೆ ಮೋಸಮಾಡುತ್ತಿದ್ದಾನೆ. ಹಾಗೆ ಮಾಡಿದರೆ ನೀವು ಅನ್ನನೀರಿಲ್ಲದೆ ಸಾಯುವಿರಿ. ನಿಮಗೆ ಹಿಜ್ಕೀಯನು, “ನಮ್ಮ ದೇವರಾದ ಯೆಹೋವನು ಅಶ್ಶೂರದ ರಾಜನಿಂದ ಕಾಪಾಡುವನು” ಎಂದು ಹೇಳುತ್ತಾನಲ್ಲಾ?
ಆ ಜನರು ಜೆರುಸಲೇಮಿನೊಳಗಿದ್ದ ಅನ್ಯ ದೇವರುಗಳಿಗಾಗಿ ಮಾಡಿದ್ದ ಯಜ್ಞವೇದಿಕೆಗಳನ್ನು ಕೆಡವಿಹಾಕಿದರು; ವಿಗ್ರಹಗಳಿಗೆ ಧೂಪಸಮರ್ಪಣೆಗಾಗಿ ಮಾಡಿದ ವೇದಿಕೆಗಳನ್ನೂ ಹಾಳುಗೆಡವಿದರು. ಅವುಗಳನ್ನೆಲ್ಲಾ ಕಿದ್ರೋನ್ ಕಣಿವೆಯಲ್ಲಿ ಬಿಸಾಡಿದರು.