2 ಪೂರ್ವಕಾಲ ವೃತ್ತಾಂತ 32:13 - ಪರಿಶುದ್ದ ಬೈಬಲ್13 ನಮ್ಮ ಪೂರ್ವಿಕರೂ ನಾನೂ ಬೇರೆ ದೇಶಗಳಿಗೆಲ್ಲಾ ಏನು ಮಾಡಿದ್ದೇವೆಂದು ನಿಮಗೆ ತಿಳಿದದೆ. ಆ ದೇಶದ ದೇವರುಗಳು ಅವರನ್ನು ಕಾಪಾಡಲಿಲ್ಲ. ಆ ದೇವರುಗಳು ಅವರನ್ನು ನಾಶಮಾಡದಂತೆ ನನ್ನನ್ನು ತಡೆಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನೂ, ನನ್ನ ತಂದೆ, ತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಸಾಧ್ಯವಾಯಿತೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾನೂ ನನ್ನ ತಂದೆತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ನೀವು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಶಕ್ತಿಯಿತ್ತೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನೂ ನನ್ನ ತಂದೆತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವದಕ್ಕೆ ಶಕ್ತಿಯಿತ್ತೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ನಾನೂ, ನನ್ನ ಪಿತೃಗಳು ದೇಶಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವಿತ್ತೋ? ಅಧ್ಯಾಯವನ್ನು ನೋಡಿ |
ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು.
ಒಬ್ಬನು ಹಕ್ಕಿಯ ಗೂಡಿನಿಂದ ಮೊಟ್ಟೆಗಳನ್ನು ತೆಗೆಯುವಂತೆ ನಾನು ಅವರ ಐಶ್ವರ್ಯವನ್ನು ತೆಗೆದುಕೊಂಡಿರುವೆನು. ಹಕ್ಕಿಯು ತನ್ನ ಗೂಡಿಗೆ ಯಾವ ಭದ್ರತೆಯನ್ನೂ ಮಾಡದೆ ಆಹಾರಕ್ಕಾಗಿ ಹೋಗುವದು, ರೆಕ್ಕೆಯಾಡಿಸಿ, ಬಾಯಿದೆರೆದು, ಕಿಚುಗುಟ್ಟಿ ಮೊಟ್ಟೆಯನ್ನು ಶತ್ರುವಿನಿಂದ ರಕ್ಷಿಸಲು ಅದು ಗೂಡಿನಲ್ಲಿರದು, ಆದ್ದರಿಂದ ಅದರ ಮೊಟ್ಟೆಗಳು ತೆಗೆಯಲ್ಪಡುವವು. ಅದೇ ರೀತಿಯಲ್ಲಿ ನಾನು ಭೂಮಿಯ ಮೇಲಿನ ಜನರನ್ನು ಕೈದಿಗಳನ್ನಾಗಿ ಮಾಡುವಾಗ ನನ್ನನ್ನು ತಡೆಯುವವರು ಇಲ್ಲವೇ ಇಲ್ಲ.”
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.