Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:21 - ಪರಿಶುದ್ದ ಬೈಬಲ್‌

21 ಆಗ ಯೆಹೋವನು ಅಶ್ಶೂರದ ಅರಸನ ಪಾಳೆಯಕ್ಕೆ ದೇವದೂತನನ್ನು ಕಳುಹಿಸಿದನು. ಆ ದೂತನು ಅಶ್ಶೂರದ ಎಲ್ಲಾ ಸೈನ್ಯದವರನ್ನೂ ಅವರ ಅಧಿಕಾರಿಗಳನ್ನೂ ಸಂಹರಿಸಿದನು. ಆಗ ಅಶ್ಶೂರದ ಅರಸನು ತನ್ನ ಸ್ವಂತ ದೇಶಕ್ಕೆ ಹಿಂತಿರುಗಿದನು. ಅವನ ಜನರು ಅವನ ವಿಷಯದಲ್ಲಿ ನಾಚಿಕೆಪಟ್ಟರು. ಅವನು ತನ್ನ ದೇವರಮಂದಿರದೊಳಕ್ಕೆ ಹೋದಾಗ ಅವನ ಸ್ವಂತ ಮಕ್ಕಳಲ್ಲಿ ಕೆಲವರು ಅವನನ್ನು ಖಡ್ಗದಿಂದ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅಸ್ಸೀರಿಯದ ಅರಸನ ದಂಡಿನಲ್ಲಿದ್ದ ಎಲ್ಲ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದರು; ಆ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದನು; ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:21
34 ತಿಳಿವುಗಳ ಹೋಲಿಕೆ  

ಆ ಸೈನಿಕರು ತಾವೇ ಶಕ್ತಿವಂತರೆಂದುಕೊಂಡಿದ್ದರು. ಆದರೆ ಈಗ ಅವರು ಬಯಲುಗಳಲ್ಲಿ ಸತ್ತುಬಿದ್ದಿದ್ದಾರೆ. ಅವರು ಧರಿಸಿಕೊಂಡಿದ್ದವುಗಳನ್ನೆಲ್ಲ ಸುಲಿಗೆ ಮಾಡಲಾಗಿದೆ. ಆ ಸೈನಿಕರಲ್ಲಿ ಯಾರೂ ತಮ್ಮನ್ನು ಸಂರಕ್ಷಿಸಿಕೊಳ್ಳಲಾಗಲಿಲ್ಲ.


ಹೆರೋದನು ಈ ಹೊಗಳಿಕೆಯನ್ನು ತಾನೇ ಸ್ವೀಕರಿಸಿಕೊಂಡನು. ದೇವರನ್ನು ಮಹಿಮೆಪಡಿಸಲಿಲ್ಲ. ಆದ್ದರಿಂದ ಆ ಕ್ಷಣವೇ, ಪ್ರಭುವಿನ ದೂತನೊಬ್ಬನು ಅವನಿಗೆ ಕಾಯಿಲೆಯನ್ನು ಬರಮಾಡಿದನು. ಅವನ ದೇಹದ ಒಳಭಾಗವನ್ನು ಹುಳಗಳು ತಿಂದುಹಾಕಿದ್ದರಿಂದ ಅವನು ಸತ್ತುಹೋದನು.


ನನ್ನ ದೇವರು ನನ್ನನ್ನು ರಕ್ಷಿಸುವುದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು. ಆ ದೇವದೂತನು ಸಿಂಹಗಳ ಬಾಯಿಯನ್ನು ಮುಚ್ಚಿದನು. ಸಿಂಹಗಳು ನನ್ನನ್ನು ಗಾಯಗೊಳಿಸಲಿಲ್ಲ. ಏಕೆಂದರೆ ನಾನು ತಪ್ಪಿತಸ್ಥನಲ್ಲವೆಂದು ನನ್ನ ದೇವರಿಗೆ ಗೊತ್ತುಂಟು. ರಾಜನೇ, ನಾನೆಂದೂ ನಿನಗೆ ತಪ್ಪು ಮಾಡಲಿಲ್ಲ” ಎಂದು ಉತ್ತರಿಸಿದನು.


“ನಾನೇ ಕರ್ತನು. ಯೆಹೋವನೆಂಬುದೇ ನನ್ನ ಹೆಸರು. ನನ್ನ ಮಹಿಮೆಯನ್ನು ನಾನು ಇತರರಿಗೆ ಕೊಡೆನು. ನನಗೆ ಸಲ್ಲತಕ್ಕ ಮಹಿಮೆಯನ್ನು ಸುಳ್ಳುದೇವರ ವಿಗ್ರಹಗಳಿಗೆ ಬಿಟ್ಟುಕೊಡೆನು.


ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಈ ಸಂದೇಶವನ್ನು ಕಳುಹಿಸಿದನು: “ಇಸ್ರೇಲರ ದೇವರಾದ ಯೆಹೋವನು ಹೇಳುವುದೇನೆಂದರೆ: ‘ಅಶ್ಶೂರದ ಅರಸನಾದ ಸನ್ಹೇರೀಬನ ಪತ್ರದ ವಿಷಯವಾಗಿ ನೀನು ಪ್ರಾರ್ಥಿಸುವದನ್ನು ನಾನು ಕೇಳಿದೆನು.’


ಹೀಗಿದ್ದರೂ ನನ್ನ ಒಡೆಯನ ಸೈನ್ಯಾಧಿಕಾರಿಗಳಲ್ಲಿ ಕನಿಷ್ಠನಾದವನನ್ನು ಸೋಲಿಸಲು ನಿಮ್ಮಿಂದಾಗದು. ಆದ್ದರಿಂದ ನೀವು ಈಜಿಪ್ಟಿನವರ ಅಶ್ವದಳದ ಮೇಲೆ ಯಾಕೆ ಭರವಸವಿಡುತ್ತೀರಿ?


ಅಶ್ಶೂರವು ಹೀಗೆ ಹೇಳುತ್ತದೆ: ‘ನನ್ನ ನಾಯಕರೆಲ್ಲಾ ರಾಜರಂತಿರುತ್ತಾರೆ.


ಅಹಂಕಾರಿಯು ನಾಶನದ ಅಪಾಯದಲ್ಲಿದ್ದಾನೆ. ದುರಾಭಿಮಾನಿಯು ಸೋಲಿನ ಅಪಾಯದಲ್ಲಿದ್ದಾನೆ.


ದುರಾಭಿಮಾನಿಗಳು ನಾಚಿಕೆಗೀಡಾಗುವರು; ದೀನರು ಜ್ಞಾನಿಗಳಾಗಿದ್ದಾರೆ.


ನಾನು ಅವನ ಶತ್ರುಗಳಿಗೆ ನಾಚಿಕೆಯೆಂಬ ವಸ್ತ್ರವನ್ನು ಹೊದಿಸುವೆನು. ಅವನ ರಾಜ್ಯವನ್ನಾದರೋ ಅಭಿವೃದ್ಧಿಗೊಳಿಸುವೆನು.”


ಆತನು ಮಹಾನಾಯಕರುಗಳನ್ನು ಸೋಲಿಸುವನು. ಭೂರಾಜರುಗಳೆಲ್ಲಾ ಆತನಿಗೆ ಭಯಪಡುವರು.


ದೇವರೇ, ನೀನು ಭಯಂಕರನೇ ಸರಿ! ನೀನು ಕೋಪಗೊಂಡಿರುವಾಗ ನಿನಗೆ ವಿರೋಧವಾಗಿ ಯಾರು ನಿಂತುಕೊಳ್ಳಬಲ್ಲರು?


ಆತನು ತಾನು ನೇಮಿಸಿದ ರಾಜನಿಗೆ ಅನೇಕ ಯುದ್ಧಗಳಲ್ಲಿ ಜಯವನ್ನು ದಯಪಾಲಿಸುವನು; ತಾನು ಅಭಿಷೇಕಿಸಿದ ರಾಜನಿಗೆ ಶಾಶ್ವತವಾದ ಪ್ರೀತಿಯನ್ನು ತೋರುವನು. ಆತನು ದಾವೀದನಿಗೂ ಅವನ ಸಂತತಿಯವರಿಗೂ ಎಂದೆಂದಿಗೂ ನಂಬಿಗಸ್ತನಾಗಿರುವನು.


ದೇವರ ಜ್ಞಾನವು ಅಗಾಧವಾದದ್ದು; ಆತನ ಶಕ್ತಿಯು ಮಹತ್ವವಾದದ್ದು; ಯಾವನೂ ದೇವರಿಗೆ ವಿರೋಧವಾಗಿ ಜಯಗಳಿಸಲಾರನು.


ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಈ ಸಂದೇಶವನ್ನು ಕಳುಹಿಸಿದನು: “ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ಅಶ್ಶೂರದ ರಾಜನಾದ ಸನ್ಹೇರೀಬನ ವಿರುದ್ಧವಾಗಿ ನೀವು ನನ್ನಲ್ಲಿ ಪಾರ್ಥಿಸಿರುವಿರಿ. ನಾನು ನಿಮ್ಮ ಪ್ರಾರ್ಥನೆಯನ್ನು ಕೇಳಿದ್ದೇನೆ.


ದೇವದೂತನು ಜೆರುಸಲೇಮನ್ನು ನಾಶಗೊಳಿಸಲು ಅದರತ್ತ ತನ್ನ ಕೈಯನ್ನು ಚಾಚಿದನು. ಆದರೆ ಸಂಭವಿಸಿದ ಕೆಟ್ಟಕಾರ್ಯಗಳ ಬಗ್ಗೆ ಯೆಹೋವನು ಪಶ್ಚಾತ್ತಾಪಪಟ್ಟನು. ಯೆಹೋವನು ಜನರನ್ನು ನಾಶಗೊಳಿಸಿದ ದೇವದೂತನಿಗೆ, “ಇಲ್ಲಿಗೆ ಸಾಕು! ನಿನ್ನ ಕೈಯನ್ನು ಕೆಳಗಿಳಿಸು” ಎಂದು ಹೇಳಿದನು. ಆಗ ಆ ಯೆಹೋವನ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.


ಅರಸನಾದ ಹಿಜ್ಕೀಯನೂ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯೂ ತಮಗೆ ಬಂದೊದಗಿದ ಸಮಸ್ಯೆಗಾಗಿ ಪರಲೋಕದ ಕಡೆಗೆ ನೋಡಿ ಗಟ್ಟಿಯಾಗಿ ಪ್ರಾರ್ಥಿಸಿದರು.


ಈ ರೀತಿಯಾಗಿ ದೇವರಾದ ಯೆಹೋವನು ಜೆರುಸಲೇಮಿನ ಜನರನ್ನು ಅಶ್ಶೂರದ ಅರಸನಾದ ಸನ್ಹೇರೀಬನಿಂದಲೂ ಮತ್ತು ಇತರ ಎಲ್ಲಾ ಜನರಿಂದಲೂ ಪಾರುಮಾಡಿದನು; ಹಿಜ್ಕೀಯನನ್ನು ಮತ್ತು ಜೆರುಸಲೇಮಿನ ಜನರನ್ನೂ ಪರಿಪಾಲನೆ ಮಾಡಿದನು.


ನಾಚಿಕೆಯು ನನ್ನನ್ನು ಕವಿದುಕೊಂಡಿದೆ. ಅವಮಾನವು ದಿವವೆಲ್ಲಾ ನನ್ನೆದುರಿನಲ್ಲೇ ಇದೆ.


ಯಾಕೋಬನ ದೇವರು ಆ ಸೈನಿಕರನ್ನು ಗದರಿಸಲು ರಥಾಶ್ವಗಳ ಸೇನೆಯು ಮೂರ್ಛೆಗೊಂಡಿತು.


ನನ್ನ ದೇಶದಲ್ಲಿ ಅಶ್ಶೂರದ ರಾಜನನ್ನು ನಾಶಮಾಡುವೆನು. ನನ್ನ ಪರ್ವತಗಳ ಮೇಲೆ ಆ ರಾಜನ ಮೇಲೆ ತುಳಿದುಕೊಂಡು ನಡೆದಾಡುವೆನು. ಆ ರಾಜನು ನನ್ನ ಜನರನ್ನು ಗುಲಾಮರನ್ನಾಗಿ ಮಾಡಿದನು. ಅವರ ಹೆಗಲಿನ ಮೇಲೆ ನೊಗವನ್ನಿಟ್ಟನು. ಆ ನೊಗವು ಯೆಹೂದದ ಹೆಗಲಿನಿಂದ ತೆಗೆಯಲ್ಪಡುವದು.


ಪಷ್ಹೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನ್ನು ಪ್ರಾರ್ಥಿಸಿ ಮುಂದೆ ಸಂಭವಿಸುವುದನ್ನು ವಿಚಾರಿಸು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿರುವನು; ಆದ್ದರಿಂದ ಮುಂದೆ ಸಂಭವಿಸುವುದನ್ನು ನಾವು ತಿಳಿಯ ಬಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನ್ನೂ ಮಾಡಬಹುದು. ನೆಬೂಕದ್ನೆಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನ್ನು ನಿಲ್ಲಿಸಿ ಹೊರಟುಹೋಗುವಂತೆ ಆತನು ಮಾಡಬಹುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು