2 ಪೂರ್ವಕಾಲ ವೃತ್ತಾಂತ 32:24 - ಪರಿಶುದ್ದ ಬೈಬಲ್24 ಆ ಸಮಯದಲ್ಲಿ ಹಿಜ್ಕೀಯನು ಮರಣಕರವಾದ ರೋಗದಿಂದ ನರಳುತ್ತಾ ಇದ್ದದರಿಂದ ಯೆಹೋವನಿಗೆ ಪ್ರಾರ್ಥಿಸಿದನು. ಯೆಹೋವನು ಹಿಜ್ಕೀಯನೊಂದಿಗೆ ಮಾತನಾಡಿ ಅವನಿಗೊಂದು ಗುರುತನ್ನು ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆ ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಕ್ರಮೇಣ ಹಿಜ್ಕೀಯನು ಮರಣಕರ ರೋಗಕ್ಕೆ ಗುರಿಯಾದನು. ಆಗ ಅವನು ದೇವರನ್ನು ಪ್ರಾರ್ಥಿಸಲು ಅವರು ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಅವನು ದೇವರನ್ನು ಪ್ರಾರ್ಥಿಸಲು ಆತನು ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಅವನು ಯೆಹೋವ ದೇವರನ್ನು ಪ್ರಾರ್ಥಿಸಲು, ದೇವರು ಅವನ ಸಂಗಡ ಮಾತನಾಡಿ ಅವನಿಗೆ ಒಂದು ಅದ್ಭುತವಾದ ಗುರುತನ್ನು ಕೊಟ್ಟರು. ಅಧ್ಯಾಯವನ್ನು ನೋಡಿ |