Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:25 - ಪರಿಶುದ್ದ ಬೈಬಲ್‌

25 ಆದರೆ ಹಿಜ್ಕೀಯನ ಹೃದಯವು ಗರ್ವದಿಂದ ತುಂಬಿತ್ತು. ಅವನು ದೇವರ ಕರುಣೆಗಾಗಿ ಉಪಕಾರಸ್ತುತಿ ಹೇಳಲಿಲ್ಲ. ಇದರಿಂದಾಗಿ ಆತನು ಹಿಜ್ಕೀಯನ ಮೇಲೂ ಯೆಹೂದ ಮತ್ತು ಜೆರುಸಲೇಮಿನ ಜನರ ಮೇಲೂ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದ್ದರಿಂದ ಜುದೇಯದ ಮೇಲೂ ಜೆರುಸಲೇಮಿನವರ ಮೇಲೂ ದೇವರ ಕೋಪವೆರಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದದರಿಂದ ಯೆಹೂದದ ಮೇಲೆಯೂ ಯೆರೂಸಲೇವಿುನ ಮೇಲೆಯೂ ದೇವಕೋಪವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಹಿಜ್ಕೀಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಹೋದನು. ಏಕೆಂದರೆ ಅವನ ಹೃದಯವು ಅಹಂಕಾರದಿಂದ ತುಂಬಿತ್ತು. ಆದ್ದರಿಂದ ಅವನ ಮೇಲೆಯೂ, ಯೆಹೂದ ಮತ್ತು ಯೆರೂಸಲೇಮಿನ ಮೇಲೆಯೂ ಯೆಹೋವ ದೇವರ ರೌದ್ರ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:25
31 ತಿಳಿವುಗಳ ಹೋಲಿಕೆ  

ಅರಸನೂ ಆ ನಾಯಕರುಗಳೂ ದೇವಾಲಯವನ್ನು ನಿರಾಕರಿಸಿ ಅಶೇರ ಸ್ತಂಭಗಳನ್ನೂ ಇತರ ವಿಗ್ರಹಗಳನ್ನೂ ಆರಾಧಿಸಿದರು. ಯೆಹೋವನು ಜೆರುಸಲೇಮಿನ ಮತ್ತು ಯೆಹೂದದ ಜನರ ಮೇಲೆ ಕೋಪಗೊಂಡನು. ಯಾಕೆಂದರೆ ಅರಸನೂ ಆ ನಾಯಕರುಗಳೂ ಯೆಹೋವನ ಮುಂದೆ ದೋಷಿಗಳಾಗಿದ್ದರು.


ಬಲಶಾಲಿಯಾದ ಉಜ್ಜೀಯನಲ್ಲಿ ನಾಶಕರವಾದ ಗರ್ವವು ಸೇರಿತು. ಅವನು ತನ್ನ ದೇವರಾದ ಯೆಹೋವನಿಗೆ ದ್ರೋಹ ಮಾಡಿದನು. ಅವನು ದೇವಾಲಯದೊಳಗೆ ಧೂಪವೇದಿಕೆಯಲ್ಲಿ ತಾನೇ ಧೂಪವನ್ನು ಹಾಕಲು ಹೋದನು.


ಒಂದು ಸಾರಿ ಬಾಬಿಲೋನಿನವರು ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿದರು. ಅವರು ದೇಶದಲ್ಲಿ ಆದ ಅದ್ಭುತ ವಿಷಯದ ಬಗ್ಗೆ ವಿಚಾರಿಸಿದರು. ಅವರು ಹಿಜ್ಕೀಯನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವುದಕ್ಕಾಗಿಯೂ ಅವನ ಹೃದಯದಲ್ಲಿದ್ದ ಪ್ರತಿಯೊಂದು ಆಲೋಚನೆಯನ್ನು ತಿಳಿದುಕೊಳ್ಳುವುದಕ್ಕಾಗಿಯೂ ಅವನನ್ನು ತೊರೆದುಬಿಟ್ಟನು.


ಯೆಹೋವನು ಇಸ್ರೇಲರ ಮೇಲೆ ಮತ್ತೆ ಕೋಪಗೊಂಡು ಇಸ್ರೇಲರ ವಿರುದ್ಧನಾಗುವಂತೆ ದಾವೀದನನ್ನು ಪ್ರೇರೇಪಿಸಿದನು. ದಾವೀದನು, “ಇಸ್ರೇಲಿನ ಮತ್ತು ಯೆಹೂದದ ಜನಗಣತಿ ಮಾಡಿರಿ” ಎಂದು ಆಜ್ಞಾಪಿಸಿದನು.


ನೀನು ಎದೋಮ್ಯರನ್ನು ಸೋಲಿಸಿದೆಯೆಂಬುದು ನಿಜ. ಆದರೆ ನೀನು ಎದೋಮ್ಯರ ಮೇಲೆ ಜಯಗಳಿಸಿದ್ದರಿಂದ ಗರ್ವಿತನಾಗಿರುವೆ. ನೀನು ನಿನ್ನ ಮನೆಯಲ್ಲೇ ಕುಳಿತು ಬಡಾಯಿಕೊಚ್ಚಿಕೋ. ನಿನಗೆ ತೊಂದರೆಯನ್ನು ತಂದುಕೊಳ್ಳಬೇಡ. ಇಲ್ಲವಾದರೆ ನೀನೂ ಬೀಳುವುದಲ್ಲದೆ, ಯೆಹೂದವೂ ನಿನ್ನೊಂದಿಗೆ ಬಿದ್ದುಹೋಗುವುದು!” ಎಂದು ಹೇಳಿದನು.


‘ಇವೆಲ್ಲಾ ನಾವೇ ಸಂಪಾದಿಸಿದ್ದು, ನಮ್ಮ ಶಕ್ತಿಸಾಮರ್ಥ್ಯಗಳಿಂದ ಇವುಗಳನ್ನು ನಾವು ಪಡೆದೆವು’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿ.


ಅವನು ಹೊಸ ವಿಶ್ವಾಸಿಯಾಗಿರಬಾರದು. ಹೊಸ ವಿಶ್ವಾಸಿಯನ್ನು ಸಭಾಧ್ಯಕ್ಷನನ್ನಾಗಿ ಮಾಡಿದರೆ, ಅವನು ಗರ್ವಿಷ್ಠನಾಗುವನು. ಸೈತಾನನು ತನ್ನ ಗರ್ವದ ನಿಮಿತ್ತ ಶಿಕ್ಷೆಗೆ ಒಳಗಾದಂತೆ ಇವನೂ ಶಿಕ್ಷೆಗೆ ಗುರಿಯಾಗುವನು.


ಆದರೆ ನನಗೆ ತೋರಿಸಲ್ಪಟ್ಟ ಆಶ್ಚರ್ಯಕರವಾದ ಸಂಗತಿಗಳ ಬಗ್ಗೆ ನಾನು ಬಹು ಹೆಮ್ಮೆಪಡಕೂಡದು. ಆದ್ದರಿಂದಲೇ ಬಾಧೆಯ ಸಮಸ್ಯೆಯೊಂದು ನನಗೆ ಕೊಡಲ್ಪಟ್ಟಿತು. ಸೈತಾನನಿಂದ ಬಂದ ದೂತನೇ ಈ ಸಮಸ್ಯೆ. ಬಹಳವಾಗಿ ಹೆಮ್ಮೆಪಡದಂತೆ ನನ್ನನ್ನು ಹೊಡೆಯುವುದಕ್ಕಾಗಿ ಅದನ್ನು ಕಳುಹಿಸಲಾಗಿತ್ತು.


ಯಾವ ಜನರು ಅದರ ವಿಚಾರವಾಗಿ ಕೇಳಲು ನಿರಾಕರಿಸುವರೋ ಅವರಿಗಾಗಿ ಈ ಸಂದೇಶವಿರುವದಿಲ್ಲ. ಆದರೆ ಒಬ್ಬ ಸತ್ಪುರುಷನು ಈ ಸಂದೇಶವನ್ನು ನಂಬುವನು. ಆ ಸತ್ಪುರುಷನು ತಾನು ನಂಬಿದ ನಿಮಿತ್ತವಾಗಿ ಬದುಕುವನು.”


ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ ಮತ್ತು ಆತನಿಗೆ ಹೀಗೆ ಹೇಳು: “ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. ನಾವು ಮಾಡುವ ಒಳ್ಳೆಯ ಕಾರ್ಯಗಳನ್ನು ಸ್ವೀಕರಿಸು. ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು.


ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.


“ಆದರೆ ನೆಬೂಕದ್ನೆಚ್ಚರನು ಬಹಳ ಅಹಂಕಾರಿಯಾಗಿದ್ದನು ಮತ್ತು ಹಟಮಾರಿಯಾಗಿದ್ದನು. ಆದ್ದರಿಂದ ಅವನ ಅಧಿಕಾರವನ್ನು ಕಸಿದುಕೊಳ್ಳಲಾಯಿತು. ರಾಜಸಿಂಹಾಸನದಿಂದ ಇಳಿಸಿ ಅವನ ಎಲ್ಲ ಘನತೆಗೌರವಗಳನ್ನು ಕಿತ್ತುಕೊಳ್ಳಲಾಯಿತು.


ನಿನ್ನ ಸೌಂದರ್ಯವು ನಿನಗೆ ಹೆಮ್ಮೆ ಏರುವಂತೆ ಮಾಡಿತು. ನಿನ್ನ ಘನತೆಯು ನಿನ್ನ ಜ್ಞಾನವನ್ನು ಕೆಡಿಸಿತು. ಆದ್ದರಿಂದ ನಿನ್ನನ್ನು ನೆಲಕ್ಕೆ ದಬ್ಬಿದೆ. ಈಗ ಬೇರೆ ರಾಜರುಗಳು ನಿನ್ನನ್ನೆ ಎವೆಯಿಕ್ಕದೆ ನೋಡುತ್ತಾರೆ.


ನಿನ್ನ ವ್ಯಾಪಾರದ ಜಾಣತನದಿಂದ ನಿನ್ನ ಐಶ್ವರ್ಯವು ಬೆಳೆಯುವಂತೆ ಮಾಡಿದ್ದೀ. ಆ ಐಶ್ವರ್ಯದ ಕಾರಣದಿಂದ ನೀನು ಹೆಮ್ಮೆಯಿಂದ ತುಂಬಿರುತ್ತೀ.


“ನರಪುತ್ರನೇ, ತೂರಿನ ರಾಜನಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “‘ನೀನು ಬಹಳ ಹೆಮ್ಮೆಯುಳ್ಳವನು. “ನಾನು ದೇವರು ಎಂದು ಹೇಳುವೆ. ಸಾಗರದ ಮಧ್ಯದಲ್ಲಿ ದೇವರುಗಳ ಸಿಂಹಾಸನದಲ್ಲಿ ನಾನು ಕೂತಿರುತ್ತೇನೆ ಎಂದು ಅನ್ನುವೆ.” “‘ಆದರೆ ನೀನು ಮನುಷ್ಯನು, ದೇವರಲ್ಲ. ನೀನು ದೇವರೆಂದು ನೀನೇ ನೆನಸಿಕೊಳ್ಳುವೆ.


ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಎದೋಮನನ್ನು ಸೋಲಿಸಿದ್ದೇನೆ’ ಎಂದು ನೆನಸಿಕೊಂಡಿರಬಹುದು. ನೀನು ತುಂಬಾ ಹೆಮ್ಮೆಯುಳ್ಳವನಾಗಿ ಜಂಬ ಕೊಚ್ಚಿಕೊಳ್ಳುತ್ತಿರುವೆ. ಆದರೆ ನೀನು ಮನೆಯಲ್ಲಿಯೇ ಕುಳಿತುಕೊಳ್ಳುವುದು ಒಳ್ಳೆದು. ಸುಮ್ಮನೆ ತೊಂದರೆಗೆ ಸಿಕ್ಕಿಕೊಳ್ಳಬೇಡ. ನನ್ನೊಂದಿಗೆ ಯುದ್ಧ ಮಾಡಿದರೆ ಇಡೀ ಯೆಹೂದ ದೇಶವೇ ನಾಶವಾಗುವದು.” ಎಂದು ಬರೆದು ಕಳುಹಿಸಿದನು.


ದೇವದರ್ಶಿಯಾದ ಯೇಹೂ ಅವನನ್ನು ಎದುರುಗೊಂಡನು. ಅವನು ಹನಾನೀಯನ ಮಗ. ರಾಜನಿಗೆ ಯೇಹುವು ಹೇಳಿದ್ದೇನೆಂದರೆ, “ನೀನು ದುಷ್ಟಜನರಿಗೆ ಸಹಾಯಮಾಡಿದ್ದೇಕೆ? ಯೆಹೋವನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸಿದ್ದೇಕೆ? ಆ ಕಾರಣಕ್ಕಾಗಿ ಯೆಹೋವನು ನಿನ್ನ ಮೇಲೆ ಕೋಪಗೊಂಡಿದ್ದಾನೆ.


ಸೈತಾನನು ಇಸ್ರೇಲರಿಗೆ ವಿರುದ್ಧವಾಗಿದ್ದನು. ಅವನು ಇಸ್ರೇಲರನ್ನು ಲೆಕ್ಕಿಸುವಂತೆ ದಾವೀದನನ್ನು ಪ್ರೇರೇಪಿಸಿದನು.


ಹಿಜ್ಕೀಯನು ಬಾಬಿಲೋನಿನ ಜನರನ್ನು ಸ್ವಾಗತಿಸಿ, ಅವರಿಗೆ ತನ್ನ ಮನೆಯಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ತೋರಿಸಿದನು. ಅವನು ತನ್ನ ಭಂಡಾರದಲ್ಲಿದ್ದ ಬೆಳ್ಳಿಬಂಗಾರಗಳನ್ನು, ಸುಗಂಧದ್ರವ್ಯಗಳನ್ನು, ಪರಿಮಳಭರಿತ ತೈಲವನ್ನು, ಆಯುಧಗಳನ್ನು ತೋರಿಸಿದನು. ಹಿಜ್ಕೀಯನ ಮನೆಯಲ್ಲಿ ಮತ್ತು ಅವನ ರಾಜ್ಯದಲ್ಲಿ ಅವರಿಗೆ ತೋರಿಸದೆ ಉಳಿದದ್ದು ಏನೂ ಇರಲಿಲ್ಲ.


ಹೀಗೆ ಆತನು ನಿಮಗೆ ಮಾಡಿದ ಒಳ್ಳೆಯದಕ್ಕೆ ಉಪಕಾರ ತೋರಿಸುವಿರಾ? ಇಲ್ಲ! ನೀವು ಬುದ್ಧಿಹೀನರಾಗಿದ್ದೀರಿ. ಯೆಹೋವನು ನಿಮ್ಮ ತಂದೆಯಾಗಿದ್ದಾನೆ. ಆತನೇ ನಿಮ್ಮನ್ನು ನಿರ್ಮಿಸಿದಾತನು. ಆತನೇ ನಿಮ್ಮನ್ನು ಉಂಟುಮಾಡಿದಾತನು. ಆತನೇ ಆಧಾರ ನೀಡುವಾತನು.


ಅವುಗಳನ್ನು ನೋಡಿ ಹಿಜ್ಕೀಯನಿಗೆ ಬಹು ಸಂತೋಷವಾಯಿತು. ಅವನು ಬಾಬಿಲೋನಿನ ದೂತರಿಗೆ ತನ್ನ ಅರಮನೆಯ ಉಗ್ರಾಣದಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನೂ ತಾನು ಕೊಡಿಸಿಟ್ಟಿದ್ದ ಬೆಳ್ಳಿಬಂಗಾರಗಳನ್ನೂ ಸಾಂಬಾರ ಪದಾರ್ಥಗಳನ್ನೂ ಮತ್ತು ಸುಗಂಧದ್ರವ್ಯಗಳನ್ನೂ ತೋರಿಸಿದನು. ಅಲ್ಲದೆ ಯುದ್ಧದಲ್ಲಿ ಉಪಯೋಗಿಸುವ ಖಡ್ಗಗಳನ್ನು, ಗುರಾಣಿಗಳನ್ನು ತೋರಿಸಿದನು; ಅಲ್ಲದೆ ತನ್ನ ರಾಜ್ಯದಲ್ಲಿರುವ ಪ್ರತಿಯೊಂದು ವಿಷಯಗಳನ್ನು ಅವರಿಗೆ ಪ್ರದರ್ಶಿಸಿದನು.


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಆ ಮರವು ಎತ್ತರವಾಗಿ ಬೆಳೆಯಿತು. ಅದರ ತುದಿ ಮುಗಿಲನ್ನು ಮುಟ್ಟಿತು. ಇದು ಅದಕ್ಕೆ ಹೆಮ್ಮೆಯನ್ನು ತಂದಿತು.


ಆ ಸಮಯದಲ್ಲಿ, ಬಲದಾನನ ಮಗನಾದ ಬೆರೋದಕ ಬಲದಾನ ಎಂಬುವನು ಬಾಬಿಲೋನಿನ ರಾಜನಾಗಿದ್ದನು. ಅವನು ಹಿಜ್ಕೀಯನಿಗೆ ಪತ್ರಗಳನ್ನು ಮತ್ತು ಕಾಣಿಕೆಯನ್ನು ಕಳುಹಿಸಿದನು. ಹಿಜ್ಕೀಯನು ಅಸ್ವಸ್ಥನಾಗಿದ್ದಾನೆ ಎಂಬುದನ್ನು ಬೆರೋದಕ ಬಲದಾನನು ತಿಳಿದುಕೊಂಡದ್ದರಿಂದ ಹೀಗೆ ಮಾಡಿದನು.


ಆ ಸಮಯದಲ್ಲಿ ಬಲದಾನ್ ಎಂಬವನ ಮಗನಾದ ಮೆರೋದಕಬಲದಾನ್ ಎಂಬವನು ಬಾಬಿಲೋನಿನ ಅರಸನಾಗಿದ್ದನು. ಅವನಿಗೆ ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂಬ ವರ್ತಮಾನ ತಲುಪಿದ್ದರಿಂದ ಅವನು ಹಿಜ್ಕೀಯನಿಗೆ ಒಂದು ಪತ್ರವನ್ನೂ ಜೊತೆಗೆ ಬಹುಮಾನಗಳನ್ನೂ ತನ್ನ ದೂತರ ಸಂಗಡ ಕಳುಹಿಸಿದನು.


ಉತ್ತರದ ಸೈನ್ಯವು ಸೋತು ಸೆರೆಯಾಗುವುದು. ದಕ್ಷಿಣ ರಾಜನು ತುಂಬ ಜಂಬಪಡುವನು ಮತ್ತು ಉತ್ತರದ ರಾಜನ ಸಾವಿರಾರು ಜನ ಸೈನಿಕರ ವಧೆ ಮಾಡುವನು. ಆದರೆ ಅವನು ಜಯಶೀಲನಾಗಿ ಮುಂದುವರೆಯುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು