Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:26 - ಪರಿಶುದ್ದ ಬೈಬಲ್‌

26 ಆಗ ಹಿಜ್ಕೀಯನೂ ಜೆರುಸಲೇಮಿನ ನಿವಾಸಿಗಳೂ ತಮ್ಮ ಹೃದಯವನ್ನು ಪರಿವರ್ತಿಸಿಕೊಂಡರು; ತಮ್ಮನ್ನು ಬಹಳವಾಗಿ ತಗ್ಗಿಸಿಕೊಂಡು ಗರ್ವಪಡುವದನ್ನು ನಿಲ್ಲಿಸಿದರು. ಆದ್ದರಿಂದ ಹಿಜ್ಕೀಯನು ಇದ್ದಷ್ಟು ಕಾಲ ಯೆಹೋವನ ಕೋಪ ಅವರ ಮೇಲೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಹಿಜ್ಕೀಯನ ತನ್ನ ಗರ್ವವನ್ನು ಬಿಟ್ಟು, ಯೆರೂಸಲೇಮಿನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಉಳಿದ ಜೀವಮಾನದಲ್ಲಿ ಯೆಹೋವನ ಕೋಪವು ಅವನ ಮೇಲೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆಗ ಹಿಜ್ಕೀಯನ ಗರ್ವ ಇಳಿಯಿತು; ಜೆರುಸಲೇಮಿನವರೊಡನೆ ಅವನು ದೀನಮನಸ್ಕನಾದನು. ಈ ಕಾರಣ ಅವನ ಜೀವಮಾನದಲ್ಲಿ ಸರ್ವೇಶ್ವರನ ಕೋಪ ಅವರ ಮೇಲೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಹಿಜ್ಕೀಯನು ತನ್ನ ಗರ್ವವನ್ನು ಬಿಟ್ಟು ಯೆರೂಸಲೇವಿುನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಜೀವಮಾನದಲ್ಲಿ ಯೆಹೋವನ ಕೋಪವು ಅವರ ಮೇಲೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅನಂತರ ಹಿಜ್ಕೀಯನೂ, ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯದಲ್ಲಿ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ, ಹಿಜ್ಕೀಯನ ದಿವಸಗಳಲ್ಲಿ ಯೆಹೋವ ದೇವರ ರೌದ್ರವು ಅವರ ಮೇಲೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:26
14 ತಿಳಿವುಗಳ ಹೋಲಿಕೆ  

ಈ ಸಂಕಷ್ಟಗಳು ಅವನಿಗೆ ಒದಗಿದಾಗ ಅವನು ದೇವರಾದ ಯೆಹೋವನನ್ನು ತನಗೆ ಸಹಾಯ ಮಾಡಲು ಬೇಡಿದನು. ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡನು.


ಪ್ರಭುವಿನ ಎದುರಿನಲ್ಲಿ ದೀನರಾಗಿರಿ, ಆತನು ನಿಮ್ಮನ್ನು ಉನ್ನತ ಮಟ್ಟಕ್ಕೆ ತರುತ್ತಾನೆ.


ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಂತೆ ಅಮೋನನು ತಗ್ಗಿಸಿಕೊಳ್ಳಲಿಲ್ಲ. ಅಮೋನನು ಹೆಚ್ಚೆಚ್ಚಾಗಿ ಪಾಪಗಳನ್ನು ಮಾಡಿದನು.


ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.


“ಅಹಾಬನು ನನ್ನ ಎದುರಿನಲ್ಲಿ ತನ್ನನ್ನು ತಗ್ಗಿಸಿಕೊಂಡಿರುವುದನ್ನು ನಾನು ನೋಡುತ್ತಿದ್ದೇನೆ. ಆದ್ದರಿಂದ ಅವನ ಜೀವಮಾನಕಾಲದಲ್ಲಿ ಅವನಿಗೆ ಕೇಡಾಗದಂತೆ ಮಾಡುವೆನು. ಅವನ ಮಗ ರಾಜನಾಗುವವರೆಗೆ ನಾನು ಕಾಯುತ್ತೇನೆ. ನಂತರ ಅಹಾಬನ ಕುಟುಂಬಕ್ಕೆ ಕೇಡನ್ನು ಬರಮಾಡುತ್ತೇನೆ” ಎಂದು ಹೇಳಿದನು.


ಯೆಹೋವನಾದ ನಾನು ಅವನಿಗೆ ಹೀಗೆ ಹೇಳಿದೆನೆಂದು ತಿಳಿಸು: ‘ಅಹಾಬನೇ! ನೀನು ನಾಬೋತನನ್ನು ಕೊಂದುಹಾಕಿದೆ. ಈಗ ನೀನು ಅವನ ದ್ರಾಕ್ಷಿತೋಟವನ್ನು ತೆಗೆದುಕೊಳ್ಳುತ್ತಿರುವೆ. ಆದ್ದರಿಂದ ನಾನಿದನ್ನು ನಿನಗೆ ಹೇಳುತ್ತೇನೆ! ನಾಬೋತನು ಸತ್ತ ಸ್ಥಳದಲ್ಲಿಯೇ ನೀನು ಸಹ ಸಾಯುವೆ. ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನೂ ನೆಕ್ಕುತ್ತವೆ!’”


ಹಿಜ್ಕೀಯನಿಗೆ ಬೇಕಾದಷ್ಟು ಧನೈಶ್ವರ್ಯಗಳಿದ್ದವು. ಅವನು ಬೆಳ್ಳಿಬಂಗಾರಗಳನ್ನೂ ಸುಗಂಧವಸ್ತುಗಳನ್ನೂ ಗುರಾಣಿಗಳನ್ನೂ ಬೆಲೆಬಾಳುವ ಆಭರಣಗಳನ್ನೂ ಇಡಲು ಸ್ಥಳವನ್ನು ಏರ್ಪಡಿಸಿದನು.


ಅರಸನೂ ಯೆಹೂದದ ನಾಯಕರೂ ತನ್ನೆದುರಿನಲ್ಲಿ ತಗ್ಗಿಸಿಕೊಂಡದ್ದನ್ನು ಯೆಹೋವನು ನೋಡಿ ಶೆಮಾಯನ ಮೂಲಕ ಈ ಸಂದೇಶವನ್ನು ಕಳುಹಿಸಿದನು. “ಅರಸನೂ ನಾಯಕರೂ ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವರನ್ನು ನಾಶಪಡಿಸದೆ ಬೇಗನೆ ರಕ್ಷಿಸುವೆನು. ಜೆರುಸಲೇಮಿನ ಮೇಲೆ ನನ್ನ ಕೋಪವು ಸುರಿಯುವಂತೆ ನಾನು ಶೀಶಕನನ್ನು ಉಪಯೋಗಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು