Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:31 - ಪರಿಶುದ್ದ ಬೈಬಲ್‌

31 ಒಂದು ಸಾರಿ ಬಾಬಿಲೋನಿನವರು ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿದರು. ಅವರು ದೇಶದಲ್ಲಿ ಆದ ಅದ್ಭುತ ವಿಷಯದ ಬಗ್ಗೆ ವಿಚಾರಿಸಿದರು. ಅವರು ಹಿಜ್ಕೀಯನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವುದಕ್ಕಾಗಿಯೂ ಅವನ ಹೃದಯದಲ್ಲಿದ್ದ ಪ್ರತಿಯೊಂದು ಆಲೋಚನೆಯನ್ನು ತಿಳಿದುಕೊಳ್ಳುವುದಕ್ಕಾಗಿಯೂ ಅವನನ್ನು ತೊರೆದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆದುದರಿಂದ ಅವನ ನಾಡಿನಲ್ಲಾದ ಅದ್ಭುತಕರವಾದ ಮಾರ್ಪಾಟುಗಳನ್ನು ಪರಿಶೀಲಿಸುವುದಕ್ಕಾಗಿ ಬಾಬಿಲೋನಿಯದ ಅಧಿಪತಿಗಳು ರಾಯಭಾರಿಗಳನ್ನು ಅವನ ಬಳಿಗೆ ಕಳುಹಿಸಿದರು. ಅವರು ಬಂದಾಗ, ಅವನನ್ನು ಪರೀಕ್ಷಿಸುವುದಕ್ಕಾಗಿ ಹಾಗು ಅವನ ಅಂತರಾಳವನ್ನು ತಿಳಿದುಕೊಳ್ಳುವುದಕ್ಕಾಗಿ ದೇವರು ಅವನನ್ನು ಕೈಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದದರಿಂದ ಅವನ ದೇಶದಲ್ಲುಂಟಾದ ಅದ್ಭುತದ ವಿಷಯವನ್ನು ವಿಚಾರಿಸುವದಕ್ಕಾಗಿ ಬಾಬೆಲಿನ ಪ್ರಭುಗಳ ರಾಯಭಾರಿಗಳು ಅವನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವದಕ್ಕೂ ಅವನ ಸರ್ವಾಂತರ್ಯವನ್ನು ತಿಳುಕೊಳ್ಳುವದಕ್ಕೂ ಅವನನ್ನು ಕೈಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾರಣೆ ಮಾಡಲು ಬಾಬಿಲೋನಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲಾದ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದಲ್ಲಿ ಇರುವ ಪ್ರತಿಯೊಂದನ್ನೂ ತಿಳಿದುಕೊಳ್ಳುವದಕ್ಕಾಗಿಯೂ ಪರಿಶೋಧಿಸುವುದಕ್ಕಾಗಿಯೂ ದೇವರು ಅವನನ್ನು ಕೈಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:31
24 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.


“ನಾನೇ ದ್ರಾಕ್ಷಿಬಳ್ಳಿ; ನೀವೇ ಕವಲುಗಳು. ಒಬ್ಬನು ನನ್ನಲ್ಲಿ ನೆಲೆಗೊಂಡಿದ್ದರೆ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ, ಆಗ ಅವನು ಹೆಚ್ಚು ಫಲಕೊಡುವನು. ಆದರೆ ಅವನು ನನ್ನನ್ನು ಬಿಟ್ಟು ಏನೂ ಮಾಡಲಾರನು.


ಜನರು ಬೆಳ್ಳಿಬಂಗಾರವನ್ನು ಬೆಂಕಿಗೆ ಹಾಕಿ ಶುದ್ಧಮಾಡುವರು. ಆದರೆ ಮನುಷ್ಯರ ಹೃದಯಗಳನ್ನು ಶುದ್ಧಮಾಡುವವನು ಯೆಹೋವನೇ.


ಆ ಸಮಯದಲ್ಲಿ ಹಿಜ್ಕೀಯನು ಮರಣಕರವಾದ ರೋಗದಿಂದ ನರಳುತ್ತಾ ಇದ್ದದರಿಂದ ಯೆಹೋವನಿಗೆ ಪ್ರಾರ್ಥಿಸಿದನು. ಯೆಹೋವನು ಹಿಜ್ಕೀಯನೊಂದಿಗೆ ಮಾತನಾಡಿ ಅವನಿಗೊಂದು ಗುರುತನ್ನು ಕೊಟ್ಟನು.


ಇವುಗಳಾದ ಮೇಲೆ, ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಲು ನಿರ್ಧರಿಸಿ, “ಅಬ್ರಹಾಮನೇ!” ಎಂದು ಕರೆದನು. ಅಬ್ರಹಾಮನು, “ಇಗೋ ಇದ್ದೇನೆ” ಅಂದನು.


ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”


ನಿಮ್ಮ ಪೂರ್ವಿಕರು ನೋಡಿಲ್ಲದ ಮನ್ನವನ್ನು ಯೆಹೋವನು ನಿಮಗೆ ಮರುಭೂಮಿಯಲ್ಲಿ ತಿನ್ನಲು ಕೊಟ್ಟನು. ಯೆಹೋವನು ನಿಮ್ಮನ್ನು ಪರೀಕ್ಷಿಸಿದನು. ನೀವು ಒಳ್ಳೆಯ ಫಲಭರಿತವಾದ ಜೀವಿತವನ್ನು ನಡೆಸಬೇಕೆಂದು ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿದನು.


ಶೋಧನೆಗೆ ಗುರಿಯಾಗಿರುವ ವ್ಯಕ್ತಿಯು, “ದೇವರು ನನ್ನನ್ನು ಶೋಧಿಸುತ್ತಿದ್ದಾನೆ” ಎಂದು ಹೇಳಬಾರದು. ಕೆಟ್ಟದ್ದು ದೇವರನ್ನು ಶೋಧಿಸಲಾರದು. ದೇವರು ತಾನಾಗಿಯೇ ಯಾರನ್ನೂ ಶೋಧಿಸುವುದಿಲ್ಲ.


ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.


ಆಮೇಲೆ ದೆಲೀಲಳು ಅವನನ್ನು, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಕೂಗಿದಳು. ಅವನು ಎಚ್ಚೆತ್ತನು. “ಮುಂಚಿನಂತೆಯೇ ನಾನು ತಪ್ಪಿಸಿಕೊಳ್ಳುವೆನು” ಎಂದು ಅವನು ತಿಳಿದಿದ್ದನು. ಆದರೆ ಯೆಹೋವನು ಅವನನ್ನು ಬಿಟ್ಟುಹೋಗಿದ್ದಾನೆಂಬುದು ಅವನಿಗೆ ಗೊತ್ತಾಗಲಿಲ್ಲ.


ಅಂಥ ಮನುಷ್ಯನಿಗೆ ಕಿವಿಗೊಡಬೇಡಿ. ದೇವರು ನಿಮ್ಮನ್ನು ಪರೀಕ್ಷೆ ಮಾಡುತ್ತಿದ್ದಾನೆ. ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸುತ್ತೀರೋ ಇಲ್ಲವೋ ಎಂದು ನಿಮ್ಮನ್ನು ಪರೀಕ್ಷಿಸುವನು.


ಯೆಹೋವನೇ, ನನಗೆ ವಿಮುಖನಾಗಬೇಡ: ನಿನ್ನ ಸೇವಕನನ್ನು ಕೋಪದಿಂದ ತಳ್ಳಿಬಿಡಬೇಡ. ನನ್ನ ದೇವರೇ, ನನ್ನ ರಕ್ಷಕನು ನೀನೇ. ನನ್ನನ್ನು ಕೈ ಬಿಡಬೇಡ! ತೊರೆದುಬಿಡಬೇಡ!


ಆದರೆ ಹಿಜ್ಕೀಯನ ಹೃದಯವು ಗರ್ವದಿಂದ ತುಂಬಿತ್ತು. ಅವನು ದೇವರ ಕರುಣೆಗಾಗಿ ಉಪಕಾರಸ್ತುತಿ ಹೇಳಲಿಲ್ಲ. ಇದರಿಂದಾಗಿ ಆತನು ಹಿಜ್ಕೀಯನ ಮೇಲೂ ಯೆಹೂದ ಮತ್ತು ಜೆರುಸಲೇಮಿನ ಜನರ ಮೇಲೂ ಕೋಪಗೊಂಡನು.


ಹಿಜ್ಕೀಯನು ಮಾಡಿದ ಇತರ ಕಾರ್ಯಗಳೂ ಅವನ ಭಕ್ತಿಕಾರ್ಯಗಳೂ ಆಮೋಚನ ಮಗನಾದ ಯೆಶಾಯನ ದರ್ಶನ ಗ್ರಂಥದಲ್ಲಿ ಬರೆದಿವೆ; ಯೆಹೂದ ಮತ್ತು ಇಸ್ರೇಲ್ ರಾಜರ ಚರಿತ್ರೆ ಪುಸ್ತಕದಲ್ಲೂ ಬರೆದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು